ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜೀವ್ ಗಾಂಧಿ ಹಂತಕರಿಗೆ ಜೀವಾವಧಿ ಶಿಕ್ಷೆ

By Mahesh
|
Google Oneindia Kannada News

ನವದೆಹಲಿ, ಫೆ.18: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹಂತಕರಿಗೆ ವಿಧಿಸಲಾಗಿದ್ದ ಗಲ್ಲುಶಿಕ್ಷೆಯನ್ನು ಸುಪ್ರೀಂಕೋರ್ಟ್ ಜೀವಾವಧಿ ಶಿಕ್ಷೆಗೆ ಪರಿವರ್ತಿಸಿ ಮಂಗಳವಾರ ಮಹತ್ವದ ತೀರ್ಪು ನೀಡಿದೆ. ಈ ತೀರ್ಪಿನಿಂದಾಗಿ ಆರೋಪಿಗಳಾದ ಸಂತನ್, ಮುರುಗನ್ ಹಾಗೂ ಪೆರಾರಿವಲನ್ ಅವರು ಗಲ್ಲುಶಿಕ್ಷೆ ತಪ್ಪಿಸಿಕೊಂಡಿದ್ದಾರೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರು, ನರಹಂತಕ ವೀರಪ್ಪನ್ ನ ಸಹಚರರೂ ಸೇರಿದಂತೆ 15 ಮಂದಿ ಆರೋಪಿಗಳ ಗಲ್ಲು ಶಿಕ್ಷೆ ಕುರಿತಂತೆ ಸುಪ್ರೀಂಕೋರ್ಟ್ ಮಂಗಳವಾರ ಮಹತ್ವದ ತೀರ್ಪು ನೀಡಿದೆ. ಮರಣದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿ ಸುಪ್ರೀಂಕೋರ್ಟ್ ಜನವರಿ 21, 2014ರಂದು ಆದೇಶ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಮುಖ್ಯ ನ್ಯಾಯಮೂರ್ತಿ ಪಿ.ಸದಾಶಿವಂ, ನ್ಯಾಯಮೂರ್ತಿಗಳಾದ ರಂಜನ್ ಗೊಗಾಯ್ ಹಾಗೂ ಶಿವಕೀರ್ತಿಸಿಂಗ್ ಅವರನ್ನೊಳಗೊಂಡ ಮೂವರು ಸದಸ್ಯರ ಪೀಠ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹಂತಕರಿಗೆ ಜೀವಾವಧಿ ಶಿಕ್ಷೆ ಎಂದು ಮಹತ್ವದ ತೀರ್ಪು ನೀಡಿದೆ. ಕ್ಷಮಾದಾನ ಅರ್ಜಿ ವಿಳಂಬವಾದ ಹಿನ್ನೆಲೆಯಲ್ಲಿ ಆರೋಪಿಗಳಿಗೆ ವಿಧಿಸಲಾಗಿರುವ ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತನೆ ಮಾಡಲಾಗಿದೆ ಎಂದು ನ್ಯಾಯಾಧೀಶರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಈಗಾಗಲೇ ಆರೋಪಿಗಳು 23 ವರ್ಷ ಶಿಕ್ಷೆ ಅನುಭವಿಸಿದ್ದಾರೆ. ಕ್ಷಮಾದಾನ ಅರ್ಜಿ ವಿಳಂಬವಾಗಿರುವುದರಿಂದ ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತನೆ ಮಾಡಲಾಗಿದೆ.

SC commutes death penalty of Rajiv Gandhi killers

ಯಾವುದೇ ಒಬ್ಬ ಆರೋಪಿಯು ಗಲ್ಲುಶಿಕ್ಷೆಗೆ ಒಳಗಾದಾಗ ಸಂಬಂಧಪಟ್ಟವರು ಕ್ಷಮಾದಾನ ಅರ್ಜಿಯನ್ನು ಶೀಘ್ರಗತಿಯಲ್ಲಿ ವಿಲೇವಾರಿ ಮಾಡಬೇಕು. ಕಳೆದ 8 ವರ್ಷಗಳಿಂದ ಈ ಮೂವರು ಆರೋಪಿಗಳು ಅರ್ಜಿ ಸಲ್ಲಿಸಿದ್ದಾರೆ. ಇದು ವಿಳಂಬವಾಗಿದ್ದರಿಂದ ಗಲ್ಲುಶಿಕ್ಷೆಯನ್ನು ರದ್ದುಪಡಿಸಲಾಗಿದೆ.

ಸುಪ್ರೀಂಕೋರ್ಟ್ ತಮಗೆ ನೀಡಿರುವ ಗಲ್ಲುಶಿಕ್ಷೆಯನ್ನು ರದ್ದುಪಡಿಸಿ ಜೀವಾವಧಿ ಶಿಕ್ಷೆ ನೀಡುವಂತೆ ಆರೋಪಿಗಳಾದ ಸಂತನ್, ಮುರುಗನ್ ಮತ್ತು ಪೆರಾರಿವಲನ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.ಇದನ್ನು ಪರಿಗಣಿಸಿದ ನ್ಯಾಯಾಲಯ ಆರೋಪಿಗಳಿಗೆ ನೀಡಿರುವ ಗಲ್ಲುಶಿಕ್ಷೆಯನ್ನು ರದ್ದುಪಡಿಸಿ ಜೀವಾವಧಿ ಶಿಕ್ಷೆಗೆ ಪರಿವರ್ತನೆ ಮಾಡಿತ್ತು.

ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಅವರನ್ನು 1991, ಮೇ 21ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕಾಗಿ ತೆರಳಿದ್ದ ರಾಜೀವ್ ಗಾಂಧಿ ಅವರು ಎಲ್ ಟಿಟಿಇ ನಡೆಸಿದ ಆತ್ಮಾಹುತಿ ದಾಳಿಗೆ ಬಲಿಯಾಗಿದ್ದರು. ಎಲ್ ಟಿಟಿಐ ಪರ ನಿಲುವು ಹೊಂದಿದ್ದ ಬುಲ್ಲೂರ್, ದಾಸ್ ಸೇರಿದಂತೆ ನಾಲ್ವರು ಆರೋಪಿಗಳಿಗೆ ಸುಪ್ರೀಂಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು.

ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಶುಭ ಅವರಿಗೆ ಗಲ್ಲುಶಿಕ್ಷೆ ವಿಧಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಮಾನವೀಯತೆ ದೃಷ್ಟಿಯಿಂದ ಇದನ್ನು ರದ್ದುಪಡಿಸಿ ಜೀವಾವಧಿ ಶಿಕ್ಷೆಗೆ ಪರಿವರ್ತಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಸುದೀರ್ಘ ವಿಚಾರಣೆ ನಡೆದ ಬಳಿಕ ಆರೋಪಿಗಳಿಗೆ 1998ರಲ್ಲಿ ಮದ್ರಾಸ್ ಹೈಕೋರ್ಟ್ ಗಲ್ಲುಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ ಆರೋಪಿಗಳ ಪರ ವಕೀಲರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮದ್ರಾಸ್ ನ್ಯಾಯಾಲಯ ನೀಡಿದ ತೀರ್ಪನ್ನು ಎತ್ತಿಹಿಡಿದು ಗಲ್ಲುಶಿಕ್ಷೆ ಖಾಯಂಗೊಳಿಸಿತ್ತು. 2002ರಲ್ಲಿ ಆರೋಪಿಗಳು ರಾಷ್ಟ್ರಪತಿಗಳಿಗೆ ಕ್ಷಮಾದಾನ ನೀಡುವಂತೆ ಅರ್ಜಿ ಸಲ್ಲಿಸಿದ್ದರು. ತಮಿಳುನಾಡಿನ ವೆಲ್ಲೂರು ಜೈಲಿನಲ್ಲಿರುವ ಮುರುಗನ್, ಸಾಂತನ್ ಹಾಗೂ ಪೆರರಿವಳನ್ ಅವರ ಕ್ಷಮಾದಾನ ಮನವಿಯನ್ನು ಈ ಹಿಂದಿನ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ತಿರಸ್ಕರಿಸಿದ್ದರು.

2011ರಲ್ಲಿ ಆರೋಪಿಗಳಿಗೆ ಇನ್ನೇನು ನೇಣಿನ ಕುಣಿಕೆ ಬೀಳಲಿದೆ ಎಂದು ಭಾವಿಸಲಾಗಿತ್ತು. ಅಂದಿನ ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಜಯಲಲಿತಾ ಅವರು ಒಂದು ಸಾಲಿನ ನಿರ್ಣಯ ಕೈಗೊಂಡು ಆರೋಪಿಗಳಿಗೆ ನೇಣು ಹಾಕುವುದನ್ನು ತಡೆಹಿಡಿಯಬೇಕೆಂದು ಚೆನ್ನೈ ಹೈಕೋರ್ಟ್ ‌ಗೆ ಮನವಿ ಮಾಡಿದ್ದರು.ಹೀಗಾಗಿ ನ್ಯಾಯಾಲಯ ಅಂದು ತಡೆಯಾಜ್ಞೆ ನೀಡಿತ್ತು.[ವೀರಪ್ಪನ್ ಬಂಟರು ನಿರಾಳ]

English summary
The Supreme Court on Tuesday commuted the death penalty of the killers of former prime minister Rajiv Gandhi. Santhan, Murugan and Perarivalan, the three death row convicts in the Rajiv Gandhi assassination case, will not be hanged, said an SC verdict on a mercy petition.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X