ಶಶಿಕಲಾಗೆ ಸುಪ್ರೀಂಕೋರ್ಟಿನಿಂದ ಸಿಕ್ತು ತಾತ್ಕಾಲಿಕ ನೆಮ್ಮದಿ

Posted By:
Subscribe to Oneindia Kannada

ನವದೆಹಲಿ, ಫೆಬ್ರವರಿ 10:ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ನಟರಾಜನ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಪಿಐಎಲ್ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಶುಕ್ರವಾರ ಮುಂದೂಡಿದೆ.

ಈ ಅರ್ಜಿಯನ್ನು ತ್ವರಿತಗತಿಯಲ್ಲಿ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಎಐಎಡಿಎಂಕೆ ಶಾಸಕಾಂಗ ಪಕ್ಷದ ಸಭೆಯು ಶಶಿಕಲಾ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ ಕ್ರಮವನ್ನು ಪ್ರಶ್ನಿಸಿದ ಪಟ್ಟ ಪಂಚಾಯತ್ ಇಯಕ್ಕಂ ಸುಪ್ರೀಂಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.

Sasikala

ಈ ಅರ್ಜಿ ಶುಕ್ರವಾರ ಬೆಳಗ್ಗೆ ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆಗೆ ಬರಬೇಕಿತ್ತು. ಈಗಾಗಲೇ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಭೀತಿಯಿಂದ ತಾತ್ಕಾಲಿಕ ನೆಮ್ಮದಿ ಪಡೆದುಕೊಂಡಿರುವ ಶಶಿಕಲಾ ಅವರಿಗೆ ಈ ಪಿಐಎಲ್ ನಿಂದ ಸದ್ಯಕ್ಕೆ ಯಾವುದೇ ಭೀತಿ ಇಲ್ಲ. ಯಾವುದೇ ಕೇಸಿನಲ್ಲಿ ಶಶಿಕಲಾ ವಿರುದ್ದವಾಗಿ ತೀರ್ಪು ಹೊರಬಿದ್ದಿದ್ದೇ ಆದರೆ ಅವರು ಮುಖ್ಯಮಂತ್ರಿಯಾಗುವ ಕನಸು ಕನಸಾಗಿಯೇ ಉಳಿಯಲಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

Read in English: No urgency in Sasi case: SC
English summary
Supreme Court today (Feb 10) declined urgent hearing of PIL seeking to restrain V K Sasikala Natarajn from taking oath as CM
Please Wait while comments are loading...