ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

CBSE, ICSE: 12ನೇ ತರಗತಿ ಪರೀಕ್ಷೆ ರದ್ದತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

|
Google Oneindia Kannada News

ನವದೆಹಲಿ, ಜೂನ್ 22: ಸಿಬಿಎಸ್‌ಇ ಐಸಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದತಿಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ಸುಪ್ರೀಂ ಕೋರ್ಟ್ ಮಂಡಳಿ ವಜಾಗೊಳಿಸಿದೆ. ಜೊತೆಗೆ ವಿದ್ಯಾರ್ಥಿಗಳ ಪರೀಕ್ಷಾ ಮೌಲ್ಯಮಾಪನ ನೀತಿಯನ್ನು ಎತ್ತಿಹಿಡಿದಿದೆ.

"ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತಾಸಕ್ತಿಯಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸಿಬಿಎಸ್‌ಇ ಮತ್ತು ಐಸಿಎಸ್‌ಇ ಪ್ರಸ್ತಾಪಿಸಿದ ನೀತಿಯಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ" ಎಂದು ನ್ಯಾಯಮೂರ್ತಿಗಳಾದ ಎಎಂ ಖಾನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರಿದ್ದ ಪೀಠವು ಅರ್ಜಿಯನ್ನು ವಜಾಗೊಳಿಸಿದೆ.

CBSE, ICSE: 12ನೇ ತರಗತಿ ಪರೀಕ್ಷೆ ರದ್ದು ಕೋರಿ ಅರ್ಜಿ: ವಿಚಾರಣೆ ಮುಂದೂಡಿದ ಸುಪ್ರೀಂCBSE, ICSE: 12ನೇ ತರಗತಿ ಪರೀಕ್ಷೆ ರದ್ದು ಕೋರಿ ಅರ್ಜಿ: ವಿಚಾರಣೆ ಮುಂದೂಡಿದ ಸುಪ್ರೀಂ

"ಪೋಷಕರ ಕಾಳಜಿ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯಂಥ ಪ್ರಮುಖ ಅಂಶಗಳನ್ನು ಮುಖ್ಯವಾಗಿಟ್ಟುಕೊಂಡು ಮಂಡಳಿಗಳು ಮತ್ತು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿವೆ. ಇದರಲ್ಲಿ ನಾವು ಮಧ್ಯ ಪ್ರವೇಶಿಸಿ ತೀರ್ಪು ನೀಡುವುದಿಲ್ಲ" ಎಂದು ನ್ಯಾಯಾಲಯ ಹೇಳಿದೆ.

SC Dismisses Plea Challenging Cancellation Of CBSE ICSE 12th Exams

ಐಐಟಿ-ಜೆಇಇ ಅಥವಾ ಸಿಎಲ್‌ಎಟಿ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಭೌತಿಕವಾಗಿ ನಡೆಸಲು ಸಾಧ್ಯವಾದರೆ ಬೋರ್ಡ್‌ ಪರೀಕ್ಷೆಗಳನ್ನೂ ಇದೇ ಮಾದರಿಯಲ್ಲಿ ಏಕೆ ನಡೆಸಬಾರದು ಎಂದು ಅರ್ಜಿದಾರ ಅನ್ಶುಲ್ ಗುಪ್ತಾ ಅವರು ಅರ್ಜಿ ಸಲ್ಲಿಸಿದ್ದರು.

ಈ ಪ್ರಶ್ನೆಗೆ ಉತ್ತರಿಸಿದ ಪೀಠ, "ಪ್ರತಿ ಮಂಡಳಿಯು ಭಿನ್ನವಾಗಿದೆ. ಅದರ ಅಗತ್ಯಗಳೂ ಭಿನ್ನವಾಗಿರುತ್ತವೆ. ನಿರ್ಧಾರ ಆ ಮಂಡಳಿ ಮೇಲೆ ಅವಲಂಬಿತವಾಗಿರುತ್ತದೆ" ಎಂದು ಹೇಳಿದೆ.

(ಮಾಹಿತಿ ಕೃಪೆ: ಬಾರ್ ಅಂಡ್ ಬೆಂಚ್)

English summary
The Supreme Court today dismissed petitions challenging the CBSE and ICSE decision to cancel examinations
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X