ತೇಜ್ ಬಹದ್ದೂರ್ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
ನವದೆಹಲಿ, ಮೇ 09: ವಾರಾಣಸಿ ಲೋಕಸಭೆ ಚುನಾವಣಾ ಕಣದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಲು ಎರಡೆರಡು ಬಾರಿ ಅರ್ಜಿ ಸಲ್ಲಿಸಿ ವಿಫಲರಾಗಿದ್ದ ಬಿಎಸ್ಎಫ್ ಮಾಜಿ ಯೋಧ ತೇಜ್ ಬಹದ್ದೂರ್ ಅವರು ತಮ್ಮ ನಾಮಪತ್ರ ತಿರಸ್ಕೃತಗೊಂಡಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು.
ಚುನಾವಣಾ ಆಯೋಗದ ಕ್ರಮ ಪ್ರಶ್ನಿಸಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಬಹಾದ್ದೂರ್ ಯಾದವ್ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ಮಂಗಳವಾರದಂದು ತಿರಸ್ಕರಿಸಿದೆ.
ತೇಜ್ಬಹಾದ್ದೂರ್ಯಾದವ್ಸಲ್ಲಿಸಿರುವ ಅರ್ಜಿಯಲ್ಲಿ ಯಾವುದೇ ಪ್ರಮುಖ ಅಂಶಗಳಿಲ್ಲ ಎಂದು ಸುಪ್ರೀಂಕೋರ್ಟೀನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಯಾದವ್ ಅವರ ಅರ್ಜಿಯನ್ನು ತಿರಸ್ಕರಿಸಿದರು.

ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ಸಿನಿಂದ ಅಜಯ್ ರಾಯ್ ಕಣದಲ್ಲಿದ್ದಾರೆ. ಎಸ್ಪಿ-ಬಿಎಸ್ಪಿ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಯೋಧ ತೇಜ್ಬಹಾದ್ದೂರ್ ಯಾದವ್ ಉಮೇದುವಾರಿಕೆ ಸಲ್ಲಿಸಿದ್ದರು. ಇದಕ್ಕೂ ಮುನ್ನ ಪಕ್ಷೇತರರಾಗಿ ಕೂಡಾ ನಾಮಪತ್ರ ಸಲ್ಲಿಸಿದ್ದರು.
ಚುನಾವಣೆಗೆ ಸ್ಪರ್ಧಿಸಲು ಅಗತ್ಯ ದಾಖಲಾತಿಗಳನ್ನು ಸಲ್ಲಿಸದ ಕಾರಣ ಚುನಾವಣಾ ಆಯೋಗ ಇವರ ನಾಮಪತ್ರವನ್ನು ತಿರಸ್ಕರಿಸಿತ್ತು.
2017ರಲ್ಲಿ ಯೋಧರಿಗೆ ನೀಡುವ ಅಹಾರದ ಗುಣಮಟ್ಟವನ್ನು ಟೀಕಿಸಿ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ ಯಾದವ್ ಅವರು ನಂತರ ತಮ್ಮ ಕೆಲಸ ಕಳೆದುಕೊಂಡಿದ್ದರು.












Click it and Unblock the Notifications