ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸುಪ್ರೀಂ ಕೋರ್ಟ್, ಹೈಕೋರ್ಟ್ ನ್ಯಾಯಮೂರ್ತಿಗಳ ಸಂಬಳದಲ್ಲಿ ಭಾರಿ ಏರಿಕೆ

By Sachhidananda Acharya
|
Google Oneindia Kannada News

ನವದೆಹಲಿ, ಜನವರಿ 30: ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಗಳ ನ್ಯಾಯಮೂರ್ತಿಗಳ ಸಂಬಳವನ್ನು ಕೇಂದ್ರ ಸರಕಾರ ಬರೋಬ್ಬರಿ ಏರಿಕೆ ಮಾಡಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಸಂಬಳವನ್ನು ಹಾಲಿ 1 ಲಕ್ಷ ರೂಪಾಯಿಯಿಂದ 2.8 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ. ಇದಲ್ಲದೆ ಹಲವು ಭತ್ಯೆಗಳೂ ಮುಖ್ಯ ನ್ಯಾಯಮೂರ್ತಿಗಳಿಗೆ ಸಿಗಲಿದೆ.

SC, HC judges to get nearly 200% salary hike

ಇನ್ನು ಸುಪ್ರೀಂ ಕೋರ್ಟ್ ನ ಇತರ ನ್ಯಾಯಮೂರ್ತಿಗಳು ಮತ್ತು ಹೈಕೋರ್ಟ್ ಗಳ ಮುಖ್ಯ ನ್ಯಾಯಮೂರ್ತಿಗಳು ತಿಂಗಳಿಗೆ 2.5 ಲಕ್ಷ ರೂಪಾಯಿ ಸಂಬಳ ಪಡೆಯಲಿದ್ದಾರೆ. ಸದ್ಯ ಇವರು 90 ಸಾವಿರ ರೂಪಾಯಿ ಸಂಬಳ ಪಡೆಯುತ್ತಿದ್ದರು.

ಇನ್ನು ಹೈಕೋರ್ಟ್ ಗಳ ನ್ಯಾಯಮೂರ್ತಿಗಳು ಪ್ರಸ್ತುತ 80,000 ರೂಪಾಯಿ ಸಂಬಳ ಪಡೆಯುತ್ತಿದ್ದರು. ಇವರು ಇನ್ನು ಮುಂದೆ ತಿಂಗಳಿಗೆ 2.25 ಲಕ್ಷ ರೂಪಾಯಿ ಸಂಬಳ ಪಡೆಯಲಿದ್ದಾರೆ.

2016ರ ಜನವರಿ 1ರಿಂದ ಅನ್ವಯವಾಗುವಂತೆ ಈ ಸಂಬಳ ಏರಿಕೆ ಮಾಡಲಾಗಿದೆ. ಒಟ್ಟಾರೆ ಸಂಬಳದಲ್ಲಿ ಕೇಂದ್ರ ಸರಕಾರ ಶೇಕಡಾ 200ಕ್ಕೂ ಹೆಚ್ಚು ಏರಿಕೆ ಮಾಡಿದೆ.

English summary
The Central government has notified a hike in the salary of Supreme Court and High Court judges. The salary of Chief Justice of India (CJI) has been increased to Rs 2.8 lakhs per month from the present Rs 1 lakh, which excluded dearness and other allowances.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X