ಅತ್ಯಾಚಾರ ಸಂತ್ರಸ್ತ ಬಾಲಕಿಗೆ 10 ಲಕ್ಷ ರು. ಪರಿಹಾರಕ್ಕೆ ಸುಪ್ರೀಂ ಸೂಚನೆ

Posted By:
Subscribe to Oneindia Kannada

ನವದೆಹಲಿ, ಆಗಸ್ಟ್ 18: ಅತ್ಯಾಚಾರಕ್ಕೊಳಗಾಗಿ 10ನೇ ವಯಸ್ಸಿನಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಚಂಡೀಗಢದ ಬಾಲಕಿಗೆ 10 ಲಕ್ಷ ರು. ಪರಿಹಾರ ನೀಡುವಂತೆ, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಕೆಲ ದಿನಗಳ ಹಿಂದೆಯೇ ಸುಪ್ರೀಂ ಕೋರ್ಟ್, ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢ ಸರ್ಕಾರಕ್ಕೆ ಈ ಕುರಿತಂತೆ ಸೂಚನೆ ನೀಡಿತ್ತು. ಆದರೆ, ಇದಕ್ಕೆ ಉತ್ತರ ನೀಡಿದ್ದ ಚಂಡೀಗಢ ಸರ್ಕಾರ, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಪಟ್ಟಿ ದಾಖಲಾಗಿಲ್ಲವಾದ್ದರಿಂದ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಉತ್ತರಿಸಿತ್ತು.

SC notice to Centre, Chandigarh on compensating 10-year-old rape victim who delivered a baby

ಆದರೆ, ಚಂಡೀಗಢ ಸರ್ಕಾರದ ಉತ್ತರವನ್ನು ಅಸಂಬದ್ಧ ಎಂದು ಕರೆದಿರುವ ಸುಪ್ರೀಂ ಕೋರ್ಟ್, ಪರಿಹಾರ ಧನ ನೀಡವಂತೆ ಸೂಚನೆ ನೀಡಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಆಯೋಗಕ್ಕೂ ಈ ಸಂಬಂಧ ನೋಟಿಸ್ ಜಾರಿಗೊಳಿಸಿರುವ ಸುಪ್ರೀಂ, ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 22ಕ್ಕೆ ಮುಂದೂಡಿದೆ.

ಅತ್ಯಾಚಾರದಿಂದ ಗರ್ಭಿಣಿಯಾಗಿದ್ದ ಬಾಲಕಿಗೆ ಗರ್ಭಪಾತಕ್ಕಾಗಿ ಈ ಹಿಂದೆ ಆಕೆಯ ಕುಟುಂಬ ಅರ್ಜಿ ಸಲ್ಲಿಸಿತ್ತು. ಆದರೆ, ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಆಕೆ, ಗುರುವಾರ (ಆಗಸ್ಟ್ 17) ಮಗುವಿಗೆ ಜನ್ಮ ನೀಡಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Supreme Court on Friday sent a notice to the Centre and the administration in Chandigarh in connection with the plea seeking Rs 10 lakh compensation for the 10-year-old rape victim who delivered a baby on Thursday (August 18).

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ