ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸುನಂದಾ ಪುಷ್ಕರ್ ಹತ್ಯೆ, ದೆಹಲಿ ಪೊಲೀಸರಿಗೆ ಸುಪ್ರೀಂನಿಂದ ನೋಟಿಸ್

By ವಿಕಾಸ್ ನಂಜಪ್ಪ
|
Google Oneindia Kannada News

ನವದೆಹಲಿ, ಫೆಬ್ರವರಿ 23: ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಅವರ ಹತ್ಯೆಗೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಗೆ ಆಗ್ರಹಿಸಿ ಬಂದಿರುವ ಮನವಿಯನ್ನು ಕೊನೆಗೂ ಸುಪ್ರೀಂಕೋರ್ಟ್ ಪುರಸ್ಕರಿಸಿದೆ. ಈ ಕುರಿತಂತೆ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಲಾಗಿದೆ.

ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು ಈ ಹಿಂದೆ ಸಲ್ಲಿಸಿದ್ದ ಅರ್ಜಿಯನ್ನು ಅಕ್ಟೋಬರ್ 26, 2017ರಂದು ದೆಹಲಿ ಹೈಕೋರ್ಟ್ ತಿರಸ್ಕರಿಸಿತ್ತು.

SC notice on plea seeking SIT probe into Sunanda Pushkar’s death

ಸುನಂದಾ ಪುಷ್ಕರ್ ಹತ್ಯೆಗೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷ್ಯ ಹಾಗೂ ಮಾಹಿತಿಯನ್ನು ಬಚ್ಚಿಡಲಾಗಿದೆ. ಹೀಗಾಗಿ, ಪ್ರಕರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಸಲು ಪೊಲೀಸರಿಗೆ ಸಾಧ್ಯವಾಗಿಲ್ಲ, ಇದೊಂದು ರಾಜಕೀಯ ಪ್ರೇರಿತ, ಉದ್ದೇಶಪೂರ್ವಕ ಹತ್ಯೆ ಎಂದು ಸ್ವಾಮಿ ಆರೋಪಿಸಿದ್ದರು. ಈ ಕುರಿತಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಾಕಿದ್ದರು.

ಆದರೆ, ಹೈಕೋರ್ಟಿನಲ್ಲಿ ಮಾನ್ಯತೆ ಸಿಗದ ಕಾರಣ, ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು. ಸಿಬಿಐ ನಿಗಾ ವಹಿಸುವ ವಿಶೇಷ ತನಿಖಾ ದಳದಿಂದ ತನಿಖೆಗೆ ಮನವಿ ಮಾಡಿದ್ದರು. ಈ ಅರ್ಜಿಯನ್ನು ಪುರಸ್ಕರಿಸಿ, ತನಿಖೆ ಗೆ ಆದೇಶಿಸಲು ಸಾಧ್ಯವೇ ಎಂಬುದರ ಬಗ್ಗೆ ದೆಹಲಿ ಪೊಲೀಸರಿಂದ ಮಾಹಿತಿಯನ್ನು ಕೋರಿ ನೋಟಿಸ್ ಕಳಿಸಲಾಗಿದೆ.

English summary
The Supreme Court has issued notices to the Delhi police among others on a petition that sought an SIT probe into the death of Sunanda Pushkar. The court however said that it was leaving the issue relating to the maintainability open
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X