ಹೆಚ್ಚು ನೋಟಾ ಬಂದರೆ ಚುನಾವಣೆ ರದ್ದು; ಕೇಂದ್ರದ ಉತ್ತರ ಕೇಳಿದ ಸುಪ್ರೀಂ
ನವದೆಹಲಿ, ಮಾರ್ಚ್ 15: ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿಗಿಂತ ನೋಟಾಗೆ ಗರಿಷ್ಠ ಮತ ಬಂದರೆ, ಆ ನಿರ್ದಿಷ್ಟ ಕ್ಷೇತ್ರದ ಚುನಾವಣೆಯನ್ನು ರದ್ದುಗೊಳಿಸಿ ಮರು ಚುನಾವಣೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿ ಸಂಬಂಧ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಹಾಗೂ ಚುನಾವಣಾ ಆಯೋಗದಿಂದ ಪ್ರತಿಕ್ರಿಯೆ ಕೇಳಿದೆ.
ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ, ನ್ಯಾಯಾಧೀಶ ಎ.ಎಸ್. ಬೋಪಣ್ಣ ಹಾಗೂ ವಿ. ರಾಮಸುಬ್ರಹ್ಮಣಿಯನ್ ಅವರನ್ನೊಳಗೊಂಡ ಪೀಠವು ಕಾನೂನು ಸಚಿವಾಲಯ ಹಾಗೂ ಚುನಾವಣಾ ಆಯೋಗಕ್ಕೆ ನೋಟಾ ಮತ ಸಂಬಂಧ ಅರ್ಜಿಗೆ ಉತ್ತರ ನಿರೀಕ್ಷಿಸಿದೆ.
ಸೋಮವಾರ ನ್ಯಾಯಪೀಠವು ವಕೀಲ ಹಾಗೂ ಬಿಜೆಪಿ ಮುಖಂಡ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದು, ಚುನಾವಣೆಯಲ್ಲಿರುವ ಅಭ್ಯರ್ಥಿಗಳಿಗಿಂತ ನೋಟಾ ಮತಗಳು ಹೆಚ್ಚು ಬಂದರೆ, ಆ ಚುನಾವಣೆಯನ್ನು ರದ್ದುಗೊಳಿಸಬೇಕು. ಜೊತೆಗೆ ಮೊದಲು ಸ್ಪರ್ಧಿಸಿದ್ದ ಅಭ್ಯರ್ಥಿಗಳಿಗೆ ಮರು ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಲಾಗಿತ್ತು.

ಹಿರಿಯ ವಕೀಲರಾದ ಮನೇಕಾ ಗುರುಸ್ವಾಮಿ ಅಶ್ವಿನಿ ಉಪಾಧ್ಯಾಯ ಪರ ವಾದ ಮಂಡಿಸಿದರು. ಅಭ್ಯರ್ಥಿಯನ್ನು ತಿರಸ್ಕರಿಸುವ ಹಾಗೂ ಹೊಸ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಹಕ್ಕು ಜನರಿಗೆ ತಮ್ಮ ಅಸಮಾಧಾನ ವ್ಯಕ್ತಪಡಿಸುವ ಅಧಿಕಾರ ನೀಡುತ್ತದೆ. ಮತದಾರರು ಸ್ಪರ್ಧಿಸುವ ಅಭ್ಯರ್ಥಿ, ಆತನ ಹಿನ್ನೆಲೆ ಅಥವಾ ಕಾರ್ಯಕ್ಷಮತೆ ಬಗ್ಗೆ ಅತೃಪ್ತರಾಗಿದ್ದರೆ, ಅಂಥ ಅಭ್ಯರ್ಥಿಯನ್ನು ತಿರಸ್ಕರಿಸಲು ಅವರು ನೋಟಾ ಆರಿಸಿಕೊಳ್ಳುತ್ತಾರೆ. ಇದರಿಂದ ಅರ್ಹ ಅಭ್ಯರ್ಥಿಗಳು ಅಧಿಕಾರಕ್ಕೆ ಬರಲು ನೆರವಾಗುತ್ತದೆ ಎಂದು ವಾದಿಸಿದ್ದರು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications