ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರ್ಥಿಕ ಅಪರಾಧಿ ಟ್ಯಾಗ್ : ಸುಪ್ರೀಂನಿಂದ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್

By ವಿಕಾಸ್ ನಂಜಪ್ಪ
|
Google Oneindia Kannada News

ನವದೆಹಲಿ, ಡಿಸೆಂಬರ್ 07: ಭಾರತದ ಹತ್ತಾರು ಬ್ಯಾಂಕುಗಳಿಂದ ಸಾವಿರಾರು ಕೋಟಿ ರು ಗಳನ್ನು ಸಾಲದ ರೂಪದಲ್ಲಿ ಪಡೆದು, ಉದ್ದೇಶಪೂರ್ವಕ ಸುಸ್ತಿದಾರ ಎನಿಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ ಅವರು ಸಾಲದ ಅಸಲು ಹಿಂತಿರುಗಿಸಲು ಸಿದ್ಧ ಎಂದು ಘೋಷಿಸಿದ್ದಾರೆ.

ಆದರೆ, ಅವರನ್ನು ಪರಾರಿಯಾಗಿರುವ ಅರ್ಥಿಕ ಅಪರಾಧಿ ಎಂದು ಏಕೆ ಘೋಷಿಸಬೇಕು ಈ ಬಗ್ಗೆ ವರದಿ ನೀಡಿ ಎಂದು ಜಾರಿ ನಿರ್ದೇಶನಾಲಯ ಹಾಗೂ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ತಲೆ ಮರೆಸಿಕೊಂಡಿರುವ ಆರ್ಥಿಕ ಅಪರಾಧಿ' ಎಂದು ಮಲ್ಯರನ್ನು ಘೋಷಿಸುವಂತೆ ಜಾರಿ ನಿರ್ದೇಶನಾಲಯ(ಇಡಿ) ಅರ್ಜಿ ಹಾಕಿದೆ.

ಸಾಲದ ಅಸಲು ಶೇ 100ರಷ್ಟನ್ನು ಬ್ಯಾಂಕ್ ಗಳಿಗೆ ವಾಪಸ್ ಮಾಡ್ತೀನಿ: ಮಲ್ಯಸಾಲದ ಅಸಲು ಶೇ 100ರಷ್ಟನ್ನು ಬ್ಯಾಂಕ್ ಗಳಿಗೆ ವಾಪಸ್ ಮಾಡ್ತೀನಿ: ಮಲ್ಯ

ಮದ್ಯದ ದೊರೆ ವಿಜಯ್ ಮಲ್ಯ ಅವರು ತಮ್ಮನ್ನು ಆರ್ಥಿಕ ಅಪರಾಧಿ ಎಂದು ಹೊಸ ತಿದ್ದುಪಡಿ ಕಾಯ್ದೆಯಡಿಯಲ್ಲಿ ಜಾರಿ ನಿರ್ದೇಶನಾಲಯವು ಕರೆದು, ದೋಷರೋಪಣ ಸಲ್ಲಿಸಲು ಮುಂದಾಗಿರುವುದಕ್ಕೆ ತಡೆ ನೀಡುವಂತೆ ಕೋರಿ, ಕೋರ್ಟಿಗೆ ಕಳೆದ ವಾರ ಹಾಕಿದ್ದ ಅರ್ಜಿ ಕೂಡಾ ತಿರಸ್ಕೃತಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು

SC notice to ED on Mallya’s plea to remove ‘fugitive’ tag

ಮೋದಿಗೆ ಪತ್ರ ಬರೆದು ನೋವು ತೋಡಿಕೊಂಡ ಮಲ್ಯ ಮೋದಿಗೆ ಪತ್ರ ಬರೆದು ನೋವು ತೋಡಿಕೊಂಡ ಮಲ್ಯ

ಲಂಡನ್ನಿನ ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟಿನಲ್ಲಿ ನಡೆದ ವಿಚಾರಣೆ ಸಂದರ್ಭದಲ್ಲಿ ಮಲ್ಯ ಅವರು, ತಮ್ಮ ಬಳಿ 14,000 ಕೋಟಿ ರು ಮೌಲ್ಯದ ಆಸ್ತಿ ಇದ್ದು, ಇದನ್ನು ಮಾರಿ, ಸಾಲ ವಾಪಸ್ ಮಾಡುತ್ತೇನೆ ಎಂದು ಮಲ್ಯ ಅವರು ಘೋಷಿಸಿದ್ದರು.

'ಮಲ್ಯ ಮೇಲಿರುವ 'ಆರ್ಥಿಕ ಅಪರಾಧಿ' ಟ್ಯಾಗ್ ಕಳಚಲು ಸಾಧ್ಯವಿಲ್ಲ' 'ಮಲ್ಯ ಮೇಲಿರುವ 'ಆರ್ಥಿಕ ಅಪರಾಧಿ' ಟ್ಯಾಗ್ ಕಳಚಲು ಸಾಧ್ಯವಿಲ್ಲ'

ಹೀಗಾಗಿ, ಆರ್ಥಿಕ ಅಪರಾಧಿಗಳನ್ನು ಕುರಿತಂತೆ ರೂಪಿಸಲಾಗಿರುವ ಹೊಸ ನಿಯಮದ ಅನ್ವಯ, ಮಲ್ಯ ಒಡೆತನದ 12.5 ಸಾವಿರ ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶ ನೀಡಬೇಕೆಂದು ಜಾರಿ ನಿರ್ದೇಶನಾಲಯವು ನ್ಯಾಯಾಲಯ ಅರ್ಜಿ ಹಾಕಿದೆ.

English summary
The Supreme Court has issued notices to the Enforcement Directorate on a plea by Vijay Mallya seeking to remove the 'fugitive' tag against his name.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X