ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿ ಚಿದಂಬರಂ ಬಂಧನಕ್ಕೆ ಅಡ್ಡಿಯಿಲ್ಲ, ಸುಪ್ರೀಂಕೋರ್ಟ್ ಮಹತ್ವದ ಆದೇಶ

|
Google Oneindia Kannada News

ನವದೆಹಲಿ, ಆಗಸ್ಟ್ 05: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ ಕಸ್ಟಡಿಯಲ್ಲಿರುವ ಕೇಂದ್ರದ ಮಾಜಿ ವಿತ್ತ ಸಚಿವ ಪಿ ಚಿದಂಬರಂಗೆ ಗುರುವಾರದಂದು ಸುಪ್ರೀಂಕೋರ್ಟಿನಿಂದ ಕಹಿ ಸುದ್ದಿ ಸಿಕ್ಕಿದೆ. ಬಂಧನದಿಂದ ರಕ್ಷಣೆ ಕೋರಿ ಚಿದಂಬರಂ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

ಸಿಬಿಐ ವಶದಲ್ಲಿರುವ ಪಿ.ಚಿದಂಬರಂ ಅವರ ವಿಚಾರಣೆಯನ್ನು ಸಿಬಿಐ ಮುಗಿಸಿದ್ದು, ಈಗಾಗಲೇ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ. ಜಾರಿ ನಿರ್ದೇಶನಾಲಯವು ಸೆ.05ರ ತನಕ ಬಂಧಿಸದಂತೆ ಕೋರ್ಟ್ ಸೂಚಿಸಿದೆ.

ಪಿ ಚಿದಂಬರಂ ಬಂಧನದ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ ಇಂದ್ರಾಣಿಪಿ ಚಿದಂಬರಂ ಬಂಧನದ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ ಇಂದ್ರಾಣಿ

ಆದರೆ, ನಿರೀಕ್ಷಣಾ ಜಾಮೀನು ಕೋರಿ ಚಿದಂಬರಂ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಚಿದಂಬರಂಗೆ ನಿರಾಶೆಯಾಗಿದೆ.

SC refuses to grant Chidambaram protection from arrest

ಸೆ.2ರಂದು ಮುಂದಿನ ಆದೇಶದ ತನಕ ಚಿದಂಬರಂ ಬಂಧಿಸಿ, ತಿಹಾರ್ ಜೈಲಿಗೆ ಕಳಿಸುವಂತಿಲ್ಲ ಎಂದು ತನಿಖಾ ಸಂಸ್ಥೆಗೆ ನ್ಯಾಯಮೂರ್ತಿಗಳಾದ ಎಎಸ್ ಬೋಪಣ್ಣ ಹಾಗೂ ಆರ್ ಬಾನುಮತಿ ವರಿರುವ ನ್ಯಾಯಪೀಠವು ಸೂಚಿಸಿತ್ತು. ಗುರುವಾರದವರೆಗೂ ಕಸ್ಟಡಿಯಲ್ಲೇ ವಿಚಾರಣೆ ನಡೆಸಲು ಮಾತ್ರ ನಿರ್ದೇಶನ ನೀಡಲಾಗಿತ್ತು.

"ಆಗಸ್ಟ್ 21ರಂದು ದೆಹಲಿ ನಿವಾಸದಲ್ಲಿದ್ದ ಚಿದಂಬರಂರನ್ನು ಸಿಬಿಐ ಅಧಿಕಾರಿಗಳು ತಮ್ಮ ವಶಕ್ಕೆ ತೆಗೆದುಕೊಂಡಿದ್ದು, 11 ದಿನಗಳ ಕಾಲ ಕಸ್ಟಡಿಯಲ್ಲಿಟ್ಟುಕೊಂಡು ವಿಚಾರಣೆ ನಡೆಸಿದ್ದಾರೆ. ಅವರಿಗೆ ಭದ್ರತೆ ಬೇಕಿದೆ, ತಿಹಾರ್ ಜೈಲಿಗೆ ಕಳಿಸದಿದ್ದರೆ ಗೃಹಬಂಧನ ವಿಧಿಸಿ' ಎಂದು ಚಿದಂಬರಂ ಪರ ವಕೀಲ ಕಪಿಲ್ ಸಿಬಾಲ್ ವಾದಿಸಿದ್ದರು.

ಕಾರ್ತಿ ಇಂದ್ರಾಣಿ ಭೇಟಿ; ಚಿದು ಕಾರ್ಯತಂತ್ರ ರಹಸ್ಯ ಬಯಲು ಮಾಡಿದ 'ಇಡಿ'ಕಾರ್ತಿ ಇಂದ್ರಾಣಿ ಭೇಟಿ; ಚಿದು ಕಾರ್ಯತಂತ್ರ ರಹಸ್ಯ ಬಯಲು ಮಾಡಿದ 'ಇಡಿ'

"ಆದರೆ ಗೃಹ ಬಂಧನವನ್ನು ರಾಜಕೀಯ ಕೈದಿಗಳಿಗೆ ಬಳಸುವ ವಿಧಾನವಾಗಿದೆ, ಇದು ಭ್ರಷ್ಟಾಚಾರ ಪ್ರಕರಣವಾಗಿದ್ದು, ಚಿದಂಬರಂ ಜಾಮೀನಿಗಾಗಿ ಅರ್ಜಿ ಸಲ್ಲಿಸಬಹುದು' ಎಂದು ಸುಪ್ರೀಂಕೋರ್ಟ್ ಸೂಚಿಸಿತ್ತು. ಅದರಂತೆ, ಚಿದಂಬರಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆದು, ಅರ್ಜಿ ತಿರಸ್ಕಾರಗೊಂಡಿದೆ.

English summary
The Supreme Court has rejected the appeal filed by P Chidambaram against the order of the Delhi High Court which had rejected his anticipatory bail plea.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X