ನ್ಯಾಷನಲ್ ಹೆರಾಲ್ಡ್ ಕೇಸ್ : ಸೋನಿಯಾ, ರಾಹುಲ್‌ಗೆ ರಿಲೀಫ್

Posted By:
Subscribe to Oneindia Kannada

ನವದೆಹಲಿ, ಫೆಬ್ರವರಿ 12 : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ವಿಚಾರಣೆಗೆ ಖುದ್ದು ಹಾಜರಾಗಬೇಕು ಎಂಬ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸಮನ್ಸ್ ರದ್ದುಗೊಳಿಸಲು ನಿರಾಕರಿಸಿರುವ ದೆಹಲಿ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸೋನಿಯಾ ಮತ್ತು ರಾಹುಲ್ ಗಾಂಧಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ದೆಹಲಿ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನಿರಾಕರಿಸಿತು. [ಏನಿದು ನ್ಯಾಷನಲ್ ಹೆರಾಲ್ಡ್ ಹಗರಣ?]

rahul gandhi

ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಬೇಕು ಎಂಬ ಅರ್ಜಿದಾರರ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿಗಳಾದ ಜೆ.ಎಸ್.ಖೇಹರ್ ಮತ್ತು ಸಿ.ನಾಗಪ್ಪನ್ ಅವರನ್ನು ಒಳಗೊಂಡ ಪೀಠ, ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸಮನ್ಸ್ ರದ್ದುಗೊಳಿಸುವಂತೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿತು. [50 ಸಾವಿರ ಶೂರಿಟಿ ಕೊಟ್ಟು ಜೈಲು ತಪ್ಪಿಸಿಕೊಂಡ ತಾಯಿಮಗ]

ಜಾಮೀನು ದೊರಕಿತ್ತು : 2015ರ ಡಿಸೆಂಬರ್ 19ರಂದು ನ್ಯಾಷನಲ್ ಹೆರಾಲ್ಡ್ ಆಸ್ತಿಯ ಅಕ್ರಮ ಪರಭಾರೆ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ದೆಹಲಿಯ ಪಟಿಯಾಲಾ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. [ಹೆರಾಲ್ಡ್ : ಒಂದಿಷ್ಟು ತಮಾಷೆಯ, ಕೆಣಕುವ ಟ್ವೀಟುಗಳು]

ಇಬ್ಬರು ನಾಯಕರು ಕೋರ್ಟ್‌ಗೆ ಖುದ್ದಾಗಿ ಹಾಜರಾಗಿದ್ದರು. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ವೈಯಕ್ತಿಕ 50 ಸಾವಿರ ರೂ. ಬಾಂಡ್ ಮತ್ತು ಒಬ್ಬರ ಶ್ಯೂರಿಟಿ ಆಧಾರದ ಮೇಲೆ ಜಾಮೀನು ನೀಡಲಾಗಿತ್ತು. ಪ್ರಕರಣದ ಮುಂದಿನ ವಿಚಾರಣೆಯನ್ನು ಫೆಬ್ರವರಿ 20ರ ಮಧ್ಯಾಹ್ನ 2ಗಂಟೆಗೆ ಮುಂದೂಡಲಾಗಿತ್ತು.

ಈ ಪ್ರಕರಣದಲ್ಲಿ ನೀಡಿರುವ ಸಮನ್ಸ್ ರದ್ದುಗೊಳಿಸುವಂತೆ ಸೋನಿಯಾ ಮತ್ತು ರಾಹುಲ್ ಗಾಂಧಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಖುದ್ದು ಹಾಜರಾತಿಗೆ ವಿನಾಯಿತಿ ನೀಡಿದೆ. ಆದರೆ, ಸಮನ್ಸ್ ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Supreme Court of India on Friday refused to quash criminal proceedings against Congress president Sonia Gandhi, vice-president Rahul Gandhi in the National Herald case. A bench of Justices J.S. Khehar and C. Nagappan granted the accused Gandhis and Congress leaders exemption from personal appearance in the magistrate court for future hearings.
Please Wait while comments are loading...