ಕಾವೇರಿ ಸ್ಕೀಂ: ಕರ್ನಾಟಕದ ಮನವಿ ತಿರಸ್ಕರಿಸಿದ ಸುಪ್ರೀಂಕೋರ್ಟ್
ನವದೆಹಲಿ, ಮೇ 16: ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯ ಪ್ರಕ್ರಿಯೆಗಳು ನಡೆಯುತ್ತಿರುವುದರಿಂದ ಕಾವೇರಿ ನಿರ್ವಹಣಾ ಸ್ಕೀಂ ಕರಡನ್ನು ಅಂತಿಮಗೊಳಿಸುವ ಕಾರ್ಯವನ್ನು ತಡೆಹಿಡಿಯಬೇಕು ಎಂಬ ಕರ್ನಾಟಕದ ಮನವಿಯನ್ನು ಸುಪ್ರೀಂಕೋರ್ಟ್ ಬುಧವಾರ ತಿರಸ್ಕರಿಸಿದೆ.
ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೆರಿಗಳ ನಡುವೆ ಕಾಲಕಾಲಕ್ಕೆ ನೀರು ಹಂಚಿಕೆ ಸಂಬಂಧ ಸೂಚನೆಗಳನ್ನು ನೀಡಲು ಕೇಂದ್ರ ಸರ್ಕಾರವೇ ಅಧಿಕಾರ ಹೊಂದುವಂತೆ ಕಾವೇರಿ ನಿರ್ವಹಣಾ ಸ್ಕೀಂನ ಕರಡಿನ ನಿಯಮದಲ್ಲಿ ಬದಲಾವಣೆ ಮಾಡಬೇಕು ಎಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.
ಸ್ಕೀಂನಲ್ಲಿ ಬದಲಾವಣೆ ಮಾಡಿ ಅದನ್ನು ಗುರುವಾರ ಸಲ್ಲಿಕೆ ಮಾಡುವಂತೆ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರಿಗೆ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ನೇತೃತ್ವದ ನ್ಯಾಯಪೀಠ ನಿರ್ದೇಶಿಸಿದೆ.

ಮುಂದೂಡಲು ನಕಾರ
ಕರ್ನಾಟಕದಲ್ಲಿ ಹೊಸ ಸರ್ಕಾರ ರಚನೆಯ ಪ್ರಕ್ರಿಯೆಗಳು ನಡೆಯುತ್ತಿರುವುದರಿಂದ ಕಾವೇರಿ ಸ್ಕೀಂನ ಕರಡನ್ನು ಅಂತಿಮಗೊಳಿಸುವುದನ್ನು ಜುಲೈ ಮೊದಲ ವಾರದವರೆಗೂ ತಡೆಹಿಡಿಯಬೇಕು ಎಂಬ ಕರ್ನಾಟಕದ ಪರ ಹಿರಿಯ ವಕೀಲ ಶ್ಯಾಮ್ ದಿವಾನ್ ಅವರ ಮನವಿಯನ್ನು ಪೀಠ ಒಪ್ಪಿಕೊಳ್ಳಲಿಲ್ಲ.
ಕರಡು ಸ್ಕೀಂ ಸಲ್ಲಿಕೆ ಕುರಿತು ಎಲ್ಲ ರಾಜ್ಯಗಳೂ ಕಾಳಜಿ ಹೊಂದಿವೆ. ಆದರೆ, ಕರ್ನಾಟಕ ಸರ್ಕಾರದ ಸಚಿವರ ನೆರವು ಮತ್ತು ನಿರ್ದೇಶನಗಳಿಲ್ಲದ ಕಾರಣ ಜುಲೈ ಮೊದಲ ವಾರದವರೆಗೂ ವಿಚಾರಣೆಯನ್ನು ಮುಂದೂಡಬೇಕು ಎಂದು ದಿವಾನ್ ಮನವಿ ಮಾಡಿದರು.

ಆದರೆ, ಕರಡು ಸ್ಕೀಂ ಸಿದ್ಧಪಡಿಸಬೇಕಿರುವುದು ಕೇಂದ್ರ ಸರ್ಕಾರ ಎಂದು ಖಾರವಾಗಿ ನುಡಿದ ಪೀಠ ಮನವಿಯನ್ನು ತಳ್ಳಿಹಾಕಿತು.
ಕರಡು ಸ್ಕೀಂನಲ್ಲಿ ಮಾಡಲಾದ ಬದಲಾವಣೆಗಳನ್ನು ಪರಿಗಣಿಸುವ ಸಂಬಂಧದ ವಿಚಾರಣೆಯನ್ನು ನ್ಯಾಯಪೀಠ ಗುರುವಾರಕ್ಕೆ ನಿಗದಿಪಡಿಸಿದೆ.
-
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ












Click it and Unblock the Notifications