ಜಯಾ ಸಾವು: ತನಿಖಾ ಆಯೋಗ ರದ್ದುಗೊಳಿಸಲು ನಿರಾಕರಿಸಿದ ಸುಪ್ರೀಂ

Posted By: ವಿಕಾಸ್ ನಂಜಪ್ಪ
Subscribe to Oneindia Kannada

ನವದೆಹಲಿ, ನವೆಂಬರ್ 03:ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಸಾವಿನ ಬಗ್ಗೆ ತನಿಖೆ ನಡೆಸಲು ಏಕ ವ್ಯಕ್ತಿ ಆಯೋಗವನ್ನು ರಚಿಸುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರದಂದು ತಿರಸ್ಕರಿಸಿದೆ.

ಆಯೋಗ ರಚನೆ ಕುರಿತಂತೆ ಇರುವ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

The Supreme Court has dismissed a petition that sought the setting up of a one man commission to probe the death of Jayalalithaa.

ಜೆ ಜಯಲಲಿತಾ ಅವರ ಸಾವಿನ ಕುರಿತಂತೆ ಇರುವ ಗೊಂದಲ ನಿವಾರಣೆಗಾಗಿ ತಮಿಳುನಾಡಿನ ಸರ್ಕಾರ ಇತ್ತೀಚೆಗೆ ನಿವೃತ್ತ ಹೈಕೋರ್ಟ್ ಜಡ್ಜ್ ಆರ್ಮುಗಸ್ವಾಮಿ ಅವರಿರುವ ಆಯೋಗವನ್ನು ರಚಿಸಿತ್ತು. ಈ ಆಯೋಗದ ರಚನೆ ಹಾಗೂ ತನಿಖೆಯ ಬಗ್ಗೆ ಪ್ರಶ್ನಿಸಿ ಸುಪ್ರೀಂಕೋರ್ಟಿನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

75 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಜೆ.ಜಯಲಲಿತಾ ಅವರು 2016ರ ಡಿಸೆಂಬರ್ 5ರಂದು ಮೃತಪಟ್ಟಿದ್ದರು. ಅವರ ಸಾವಿನ ಬಳಿಕ ಸಾವಿನ ಕಾರಣದ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಸಾವಿನ ಕುರಿತು ತನಿಖೆ ನಡೆಸಬೇಕು ಎಂಬ ಒತ್ತಾಯ ಕೇಳಿಬಂದಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Supreme Court has dismissed a petition that sought the setting up of a one man commission to probe the death of Jayalalithaa.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ