"ಪಟಾಕಿ ನಿಷೇಧದಿಂದ ಹಲವರು ನಿರುದ್ಯೋಗಿಗಳಾಗಿದ್ದಾರೆ!" ಆರೆಸ್ಸೆಸ್ ಮುಖ್ಯಸ್ಥ
ನವದೆಹಲಿ, ಅಕ್ಟೋಬರ್ 19: ದೆಹಲಿಯಲ್ಲಿ ಪಟಾಕಿ ನಿಷೇಧಿಸಿರುವ ಸುಪ್ರೀ ಕೋರ್ಟ್ ಆದೇಶದ ಕುರಿತು ಪರ ವಿರೋಧ ಚರ್ಚೆ ನಡೆಯುತ್ತಲೇ ಇವೆ.
ಈ ನಿರ್ಧಾರದಿಂದ ಅಸಂಖ್ಯಾತ ಪಟಾಕಿ ತಯಾರಕರು, ಮಾರಾಟಗಾರರು ಸಂಕಷ್ಟಪಡಬೇಕಅಗುತ್ತದೆ, ಆದ್ದರಿಂದ ಸುಪ್ರೀಂ ಕೋರ್ಟ್ ಮತ್ತೊಮ್ಮೆ ತನ್ನ ನಿರ್ಧಾರವನ್ನು ಮರುಪರಿಶೀಲಿಸುವುದು ಒಳಿತು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಇಂದ್ರೇಶ್ ಕುಮಾರ್ ಹೇಳಿದರು.

ಸುಪ್ರೀಂ ಕೋರ್ಟ್ ನ ನಿರ್ಧಾರದಿಂದ ದೇಶದಲ್ಲಿರುವ ಹಲವು ಬಡವರು ನಿರುದ್ಯೋಗಿಗಳಾಗುವಂತಾಗಿದೆ. ಯಾವುದೇ ಚರ್ಚೆಯಿಲ್ಲದೆ ಏಕಾಏಕಿ ಇಂಥ ನಿರ್ಧಾರ ತೆಗೆದುಕೊಳ್ಳುವುದು ಸರಿಯಲ್ಲ. ಆದ್ದರಿಂದ ಈ ವಿಷಯವನ್ನು ಇನ್ನೊಮ್ಮೆ ಪರಿಶೀಲಿಸಬೇಕು ಎಂದು ಮನವಿ ಮಾಡಿದರು.
ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ಪಟಾಕಿ ನಿಷೇಧಿಸುವಂತೆ ಸೆಪ್ಟೆಂಬರ್ ತಿಂಗಳಿನಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು.












Click it and Unblock the Notifications