ರಫೇಲ್ ದಾಖಲೆಗಳ ಬಗ್ಗೆ ಬುಧವಾರದಂದು ಸುಪ್ರೀಂ ತೀರ್ಪು

ಫ್ರಾನ್ಸ್ ಜತೆಗೆ ಮಾಡಿಕೊಂಡಿರುವ ರಫೇಲ್ ಯುದ್ಧ ವಿಮಾನ ಖರೀದಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಇರುವ ದಾಖಲೆಗಳನ್ನು ಪುನರ್ ಪರಿಶೀಲಿಸಿ, ಈಗಾಗಲೇ ನೀಡಿದ ತೀರ್ಪು ಮತ್ತೊಮ್ಮೆ ಪರಾಮರ್ಶೆ ಮಾಡಬೇಕು ಎಂಬ ಆಕ್ಷೇಪಣೆಗೆ ಸಂಬಂಧಿಸಿದಂತೆ ಬುಧವಾರ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಲಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠವು ತೀರ್ಪು ಪ್ರಕಟಿಸಲಿದೆ. ಕೇಂದ್ರದ್ ಮಾಜಿ ಸಚಿವರಾದ ಯಶವಂತ್ ಸಿನ್ಹಾ, ಅರುಣ್ ಶೌರಿ ಹಾಗೂ ವಕೀಲರಾದ ಪ್ರಶಾಂತ್ ಭೂಷಣ್ ಸಲ್ಲಿಸಿದ ಪ್ರಾಥಮಿಕ ಅಕ್ಷೇಪಣೆಗೆ ಸಂಬಂಧಿಸಿದ ತೀರ್ಪನ್ನು ಮಾರ್ಚ್ ಹದಿನಾಲ್ಕರಂದು ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು.

ಅದಕ್ಕೂ ಮುನ್ನ ರಫೇಲ್ ವ್ಯವಹಾರಕ್ಕೆ ವಿರುದ್ಧವಾಗಿ ಸಲ್ಲಿಸಿದ್ದ ಎಲ್ಲ ಅರ್ಜಿಗಳನ್ನು ಡಿಸೆಂಬರ್ ಹದಿನಾಲ್ಕರಂದು ಸುಪ್ರೀಂ ಕೋರ್ಟ್ ರದ್ದು ಮಾಡಿತ್ತು. "ಮೊದಲಿಗೆ ಕೇಂದ್ರ ಸರಕಾರದಿಂದ ಎತ್ತಿರುವ ಪ್ರಾಥಮಿಕ ಆಕ್ಷೇಪಣೆಗಳನ್ನು ನಿರ್ಧರಿಸಿ, ಆ ನಂತರ ಪುನರ್ ಪರಿಶೀಲನಾ ಅರ್ಜಿಯ ಇತರ ಅಂಶಗಳ ಬಗ್ಗೆ ಗಮನ ಹರಿಸುವುದಾಗಿ" ಪೀಠವು ಹೇಳಿತ್ತು. ಜತೆಗೆ, ಕೇಂದ್ರದ ಆಕ್ಷೇಪಣೆಗೆ ಸಹಮತ ಇಲ್ಲದಿದ್ದಲ್ಲಿ ಮಾತ್ರ ಇತರ ಸಂಗತಿಗಳ ಬಗ್ಗೆ ವಿಚಾರಣೆ ನಡೆಸುವುದಾಗಿ ತಿಳಿಸಲಾಗಿತ್ತು.

SC to decide on Wednesday if ‘privileged’ Rafale papers can be used as evidence

ಭಾರತೀಯ ಸಾಕ್ಷ್ಯಾಧಾರ ಕಾಯ್ದೆ ಸೆಕ್ಷನ್ 123ರ ಅನ್ವಯ ರಫೇಲ್ ಯುದ್ಧ ವಿಮಾನ ವ್ಯವಹಾರದ ದಾಖಲಾತಿಗಳನ್ನು ಸಾಕ್ಷ್ಯಗಳಾಗಿ ಪರಿಗಣಿಸಬಾರದು ಎಂದು ಕೇಂದ್ರ ಸರಕಾರ ಸುಪ್ರೀಂ ಕೋರ್ಟ್ ನಲ್ಲಿ ಸಮರ್ಥನೆ ನೀಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+