ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಧಾರ್ ಅರ್ಜಿಗಳ ವಿಚಾರಣೆಗೆ ಸಾಂವಿಧಾನಿಕ ಪೀಠ ರಚನೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 30 : ವಿವಿಧ ಯೋಜನೆಗಳಿಗೆ ಆಧಾರ್ ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ. ಎಲ್ಲಾ ಅರ್ಜಿಗಳ ವಿಚಾರಣೆಗೆ ಸಾಂವಿಧಾನಿಕ ಪೀಠ ರಚನೆಗೆ ಸುಪ್ರೀಂಕೋರ್ಟ್ ಮುಂದಾಗಿದೆ.

ಸೋಮವಾರ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಎ.ಎಂ.ಖನ್ವೀಲ್ಕರ್ ಮತ್ತು ಡಿ.ವೈ.ಚಂದ್ರಚೂಡ್ ಅವರಿದ್ದ ನ್ಯಾಯಪೀಠ ಸಾಂವಿಧಾನಿಕ ಪೀಠ ರಚನೆ ಮಾಡುವುದಾಗಿ ಹೇಳಿದೆ. ನವೆಂಬರ್ ಕೊನೆಯ ವಾರದಿಂದ ಪೀಠದಲ್ಲಿ ಅರ್ಜಿಗಳ ವಿಚಾರಣೆ ನಡೆಯಲಿದೆ.

ಪಡಿತರ ಪಡೆಯಲು ಆಧಾರ್ ಕಡ್ಡಾಯವಲ್ಲ : ಯು.ಟಿ.ಖಾದರ್ಪಡಿತರ ಪಡೆಯಲು ಆಧಾರ್ ಕಡ್ಡಾಯವಲ್ಲ : ಯು.ಟಿ.ಖಾದರ್

Supreme Court

ಆಧಾರ್ ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಆದಷ್ಟು ಬೇಗ ಆರಂಭಿಸಬೇಕು ಎಂದು ಹಿರಿಯ ವಕೀಲರಾದ ಗೋಪಾಲ್ ಸುಬ್ರಣಿಯನ್ ಮತ್ತು ಶ್ಯಾಮ್ ದಿವಾನ್ ಕೋರ್ಟಿಗೆ ಮನವಿ ಮಾಡಿದ್ದರು.

ಸಿಮ್-ಆಧಾರ್ ಲಿಂಕ್: ಸುಪ್ರಿಂನಿಂದ ಕೇಂದ್ರಕ್ಕೆ ನೋಟಿಸ್ ಜಾರಿಸಿಮ್-ಆಧಾರ್ ಲಿಂಕ್: ಸುಪ್ರಿಂನಿಂದ ಕೇಂದ್ರಕ್ಕೆ ನೋಟಿಸ್ ಜಾರಿ

ಸುಪ್ರೀಂ ತೀರ್ಪು ನೀಡಿತ್ತು : ಹಿಂದೆಯೂ ಆಧಾರ್ ಕುರಿತ ವಿಚಾರಣೆ ಸಾಂವಿಧಾನಿಕ ಪೀಠದಲ್ಲಿ ನಡೆದಿತ್ತು. 'ಖಾಸಗಿತನ ಹಕ್ಕು ಮೂಲಭೂತ ಹಕ್ಕು' ಎಂದು ಕೋರ್ಟ್ ತೀರ್ಪು ಕೊಟ್ಟಿತ್ತು. 9 ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಸರ್ವಾನುಮತದಿಂದ ಈ ತೀರ್ಪು ನೀಡಿತ್ತು.

ಆಧಾರ್‌ ಕಾರ್ಡ್ ಮಾಡಿಸುವಾಗ ಬೆರಳಚ್ಚು, ಕಣ್ಣು ಪಾಪೆಯ ಗುರುತುಗಳು ಮತ್ತು ವೈಯಕ್ತಿಕ ಮಾಹಿತಿಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಆದರೆ, ಈ ಮಾಹಿತಿಗಳನ್ನು ವಾಣಿಜ್ಯ ಸಂಸ್ಥೆಗಳು ಬಳಸಿಕೊಳ್ಳುತ್ತಿವೆ. ಇದು ಖಾಸಗಿತನದ ಹಕ್ಕಿನ ಉಲ್ಲಂಘನೆ ಎಂದು ಅರ್ಜಿದಾರರು ವಾದಿಸಿದ್ದರು.

English summary
The Supreme Court of India on Monday decided to constitute a 5 judges constitution bench to hear petitions against the validity of Aadhaar scheme. Bench to hear petitions from the last week of November, 2017.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X