ಅಂತಾರಾಷ್ಟ್ರೀಯ ವಿಮಾನ ಹಾರಾಟ ನಿಷೇಧ ಸೆಪ್ಟೆಂಬರ್ 30ರವರೆಗೆ ವಿಸ್ತರಣೆ

ನವದೆಹಲಿ, ಆಗಸ್ಟ್ 31: ಅಂತಾರಾಷ್ಟ್ರೀಯ ವಿಮಾನ ಹಾರಾಟ ನಿಷೇಧ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

ಈ ಕುರಿತು ನಾಗರಿಕ ವಿಮಾನಯಾನ ನಿರ್ದೇಶನಾಲಯ ಸೋಮವಾರ ತಿಳಿಸಿದೆ. ಈ ಹಿಂದೆಯೇ ಸರ್ಕಾರದ ವಂದೇ ಭಾರತ್ ಮಿಷನ್ ಮೂಲಕ ಹಾರಾಟ ನಡೆಸುತ್ತಿದ್ದ ವಿಮಾನಗಳು ಎಂದಿನಂತೆ ಹಾರಾಡಲಿವೆ.

ಕೊರೊನಾ ಸೋಂಕಿನಿಂದಾಗಿ ಮಾರ್ಚ್ 23ರಂದು ಅಂತಾರಾಷ್ಟ್ರೀಯವ ವಿಮಾನಗಳ ಹಾರಾಟವನ್ನು ನಿಷೇಧಿಸಲಾಗಿತ್ತು.ಈ ಆದೇಶ ಸರಕು ವಿಮಾನಗಳು ಮತ್ತು ವಿಶೇಷ ಅನುಮತಿ ಪಡೆದ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

Scheduled International Passenger Flights To Remain Suspended Till Sept 30

ಅಲ್ಲದೆ ಆಯ್ದ ಮಾರ್ಗಗಳಲ್ಲಿ ನಿಯಮಿತವಾಗಿ ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ಸಂಬಂಧಿತ ಆಡಳಿತಗಳು ಅನುಮತಿಸಬಹುದಾಗಿದೆ ಎಂದು ತಿಳಿಸಿದೆ.

ಮಾರ್ಚ್ 23ರಂದು ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ ನಂತರ ಎಲ್ಲಾ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು.

ಮೇ 25ರಿಂದ ದೇಶಿಯ ವಿಮಾನ ಹಾರಾಟ ಆರಂಭವಾಗಿದೆ. ಆದರೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರೆಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+