ಅತ್ಯಾಚಾರ ಆರೋಪಿ ಶಿಕ್ಷಕನಿಗೆ ಶಾಲಾ ಆಡಳಿತದ ರಕ್ಷಣೆ: ಕುಟುಂಬಸ್ಥರ ಆಕ್ರೋಶ!

ನಾಲ್ಕು ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿ ಶಿಕ್ಷಕನಿಗೆ ಶಾಲಾ ಆಡಳಿತ ರಕ್ಷಣೆ ನೀಡಿದೆ ಎಂಬ ಆರೋಪ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಕೇಳಿಬಂದಿದೆ. ಹೀಗಾಗಿ ಗ್ರಾಮಸ್ಥರು ಖಾಸಗಿ ಶಾಲೆಯೊಂದರ ಮೇಲೆ ದಾಳಿ ಮಾಡಿದ್ದಾರೆ. ಶಾಲೆಯ ಆವರಣದಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಇದನ್ನು ಶಾಲೆಯ ಆಡಳಿತ ವಿರೋಧಿಸುತ್ತಿದ್ದಂತೆ ಪ್ರತಿಭಟನೆ ಭುಗಿಲೆದ್ದಿದೆ.

ಆರೋಪಿ ಶಿಕ್ಷಕನನ್ನು ರಕ್ಷಿಸುವಲ್ಲಿ ಶಾಲೆಯ ಆಡಳಿತ ಸಹಕರಿಸಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಆರೋಪಿಯನ್ನು 23 ವರ್ಷದ ರವಿ ವಗೋರಿಯಾ ಎಂದು ಗುರುತಿಸಲಾಗಿದ್ದು, ಖಾಸಗಿ ಶಾಲೆಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದಾನೆ. ಈತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

school-administration-defends-rape

ಸೆಪ್ಟೆಂಬರ್ 22 ರಂದು ವಗೋರಿಯಾ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ನಡೆದಿತ್ತು. ಘಟನೆಯ ಕುರಿತು ಶಾಲೆಯ ಪ್ರಾಂಶುಪಾಲರಿಗೆ ಕೂಡಲೇ ಮಾಹಿತಿ ನೀಡಿದ್ದೇವೆ ಎಂದು ಬಾಲಕಿಯ ಕುಟುಂಬದವರು ಹೇಳಿದ್ದಾರೆ. ಆದರೆ ಆರೋಪಿ ಶಿಕ್ಷಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಬದಲು ಪ್ರಾಂಶುಪಾಲರು ವಿಷಯವನ್ನು ಹತ್ತಿಕ್ಕಲು ಯತ್ನಿಸಿದ್ದಾರೆ ಎಂದಿದ್ದಾರೆ.

ಮಗುವಿನ ತಾಯಿಯು ಭಯಾನಕ ಸಂಕಟವನ್ನು ವಿವರಿಸುತ್ತಾ, "ನನ್ನ ಮಗಳಿಗೆ ರಕ್ತಸ್ರಾವವಾಗುತ್ತಿರುವುದನ್ನು ನಾನು ನೋಡಿದೆ, ನಾನು ಅದರ ಬಗ್ಗೆ ಪ್ರಾಂಶುಪಾಲರನ್ನು ಕೇಳಿದೆ. ಆದರೆ ಅವರು ಅವಳಿಗೆ ಯಾವುದಾದರೂ ಚೂಪಾದ ವಸ್ತು ಚುಚ್ಚಿರಬಹುದು" ಎಂದು ಹೇಳಿದರು ಎಂದು ತಾಯಿ ಬೇಸರದಿಂದ ಹೇಳಿಕೊಂಡಿದ್ದಾರೆ.

ಉದ್ರಿಕ್ತ ಗ್ರಾಮಸ್ಥರ ಗುಂಪು ಶಾಲೆಯ ಆವರಣವನ್ನು ಧ್ವಂಸ ಮಾಡುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದರು. ಶಾಲೆಯ ಪೀಠೋಪಕರಣಗಳನ್ನು ಎಸೆದಾಡಿದರು. ಈ ವೇಳೆ ಶಾಲೆಯ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ, ಮ್ಯಾನೇಜರ್ ಅವರು ಹತ್ತಿರದ ಮನೆಯಲ್ಲಿ ಆಶ್ರಯ ಪಡೆದಿದ್ದಾರೆಂದು ತಿಳಿದು ಬಂದಿದೆ.

ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದು, ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಶಿಕ್ಷಕನನ್ನು ಮುಂದಿನ ತನಿಖೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ರಾಜಸ್ಥಾನ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಸಂಗೀತಾ ಬೇನಿವಾಲ್ ಅವರು ಈ ವಿಷಯವನ್ನು ಅರಿತು ಮೂರು ದಿನಗಳಲ್ಲಿ ಸಮಗ್ರ ವರದಿಯನ್ನು ನೀಡುವಂತೆ ಜಿಲ್ಲಾ ಶಿಕ್ಷಣಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+