ಮಹಾರಾಷ್ಟ್ರ: ರಾಯಗಡದಲ್ಲಿ ಹಳ್ಳಕ್ಕೆ ಬಿದ್ದ 32 ಜನರಿದ್ದ ಶಾಲಾ ಬಸ್
ರಾಯಗಡ ನವೆಂಬರ್ 12: ಮಹಾರಾಷ್ಟ್ರದಲ್ಲಿ ಶುಕ್ರವಾರ ರಾತ್ರಿ ಭಾರಿ ಅಪಘಾತ ಸಂಭವಿಸಿದ್ದು, ರಾಯಗಢದಲ್ಲಿ ಶಾಲಾ ಬಸ್ ಕಮರಿಗೆ ಬಿದ್ದಿದೆ. ಬಸ್ ನಲ್ಲಿ 32 ಮಂದಿ ಪ್ರಯಾಣಿಕರಿದ್ದು, ಚಾಲಕ ಸೇರಿ ಏಳು ಮಂದಿ ಗಾಯಗೊಂಡಿದ್ದಾರೆ. ತಕ್ಷಣ ಹೊರತೆಗೆದವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು. ಗಾಯಾಳುಗಳ ಪೈಕಿ ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಸಾಮಾನ್ಯವಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ರಾಯಗಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಮಾಹಿತಿಯ ಪ್ರಕಾರ, ಬಸ್ ರಾಯಗಢ ಕಿಲ್ಲಾ ರಸ್ತೆಯಲ್ಲಿ ಹೋಗುತ್ತಿದ್ದಾಗ, ಘರೋಶಿ ವಾಡಿ ಬಳಿ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಘಟನೆಯ ವೇಳೆ 32 ಮಂದಿ ಶಾಲಾ ಮಕ್ಕಳಿದ್ದರು ಎಂದು ತಿಳಿದು ಬಂದಿದೆ. ಘಟನೆಯ ಸುದ್ದಿ ತಿಳಿದ ತಕ್ಷಣ ಪೊಲೀಸ್ ತಂಡ ಕೂಡ ಸ್ಥಳಕ್ಕೆ ಧಾವಿಸಿದ್ದು, ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಸದ್ಯ ಎಲ್ಲರ ಸ್ಥಿತಿ ಅಪಾಯದಿಂದ ಪಾರಾಗಿದೆ ಎಂದು ಹೇಳಲಾಗುತ್ತಿದೆ.

ಸೋಮವಾರ ಸಂಭವಿಸಿದ ದೊಡ್ಡ ಅಪಘಾತ
ಮತ್ತೊಂದೆಡೆ, ಸೋಮವಾರವೂ ರಾಯಗಢದಲ್ಲಿ ಭಾರಿ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಮಾಹಿತಿ ಪ್ರಕಾರ ಡಂಪರ್ ನಿಯಂತ್ರಣ ತಪ್ಪಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಇದರಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎರಡೂ ವಾಹನಗಳು ಪೊಲಾದ್‌ಪುರ ಕಡೆಗೆ ಹೋಗುತ್ತಿದ್ದವು. ಘಟನೆಯ ನಂತರ ಮೃತರ ಕುಟುಂಬಗಳಿಗೆ ತಲಾ ಐದು ಲಕ್ಷ ನೆರವು ನೀಡುವುದಾಗಿ ಸರ್ಕಾರದಿಂದ ಘೋಷಣೆ ಮಾಡಲಾಗಿತ್ತು.












Click it and Unblock the Notifications