ಶಾಲಾ ವಾಹನ ಕಂದಕಕ್ಕೆ ಉರುಳಿದ್ದು ಗಾಳಿಸುದ್ದಿ : ಪೂಂಚ್ ಪೊಲೀಸರು
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ ನ ಮಾನ್ಸ ಮೊರ್ ಬಳಿ ಭೀಕರ ದುರಂತ ಸಂಭವಿಸಿದೆ. 40 ವಿದ್ಯಾರ್ಥಿಗಳಿದ್ದ ಶಾಲಾ ವಾಹನವೊಂದು ಕಂದಕಕ್ಕೆ ಉರುಳಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾಗಿದೆ, ಜನತೆ ಆತಂಕ ಪಡುವ ಅಗತ್ಯವಿಲ್ಲ
ಶ್ರೀನಗರ, ಮೇ 25 : ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ ನ ಮಾನ್ಸ ಮೊರ್ ಬಳಿ ಭೀಕರ ದುರಂತ ಸಂಭವಿಸಿದೆ. 40 ವಿದ್ಯಾರ್ಥಿಗಳಿದ್ದ ಶಾಲಾ ವಾಹನವೊಂದು ಕಂದಕಕ್ಕೆ ಉರುಳಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾಗಿದೆ, ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ ನ ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಆದರೆ, ಇದೊಂದು ಗಾಳಿಸುದ್ದಿಯಿಂದ ಹಬ್ಬಿದ್ದ ಸಮಾಚಾರವಾಗಿದ್ದು, ಸುದ್ದಿ ಏಜೆನ್ಸಿಗಳ ಮೂಲಕ ಎಲ್ಲಾ ಪ್ರಮುಖ ವೆಬ್ ಸೈಟ್ ಗಳಲ್ಲಿ ಪ್ರಕಟವಾಗಿತ್ತು. ಈ ಸಂಜೆ ಈ ಮುಂಚೆ ಬಂದಿದ್ದ ವರದಿ ಹೀಗಿತ್ತು..
***
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ ನ ಮಾನ್ಸ ಮೊರ್ ಬಳಿ ಭೀಕರ ದುರಂತ ಸಂಭವಿಸಿದೆ. 40 ವಿದ್ಯಾರ್ಥಿಗಳಿದ್ದ ಶಾಲಾ ವಾಹನವೊಂದು ಕಂದಕಕ್ಕೆ ಉರುಳಿದೆ.
ರಜೌರಿ ಜಿಲ್ಲೆಯ ಮಂಜಾಕೋಟ್ ನ ಗರೀಬ್ ನವಾಜ್ ಶಾಲೆಯ ವಿದ್ಯಾರ್ಥಿಗಳು ಸೇರಿದಂತೆ 40 ಮಂದಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು.ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿದೆ. ಪ್ರಯಾಣಿಕರು ಬದುಕುಳಿದಿರುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ವಿದ್ಯಾರ್ಥಿಗಳೆಲ್ಲರೂ ಪಿಕ್ನಿಕ್ ಗೆ ತೆರಳಿದ್ದರು. ಮೊಘಲ್ ರಸ್ತೆಯ ಪಿರ್ ಕಿ ಘಲಿ ಬಳಿ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ 12ಕ್ಕೂ ಅಧಿಕ ಆಂಬ್ಯುಲೆನ್ಸ್ ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.












Click it and Unblock the Notifications