School Holiday: ಈ ಭಾಗಗಳಲ್ಲಿ ಏಕಾಏಕಿ ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ, ಕಾರಣವೇನು ?
ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶವು ಕ್ಷಣ ಕ್ಷಣಕ್ಕೂ ರೋಚಕ ತಿರುವನ್ನು ಪಡೆದುಕೊಂಡಿದೆ. ಈ ರೀತಿ ಇರುವಾಗಲೇ ವಿವಿಧ ಭಾಗದಲ್ಲಿ ಶಾಲಾ - ಕಾಲೇಜುಗಳಿಗೆ ಏಕಾಏಕಿ ರಜೆ ಘೋಷಣೆ ಮಾಡಲಾಗಿದೆ. ದೇಶದಾದ್ಯಂತ ಜನ ಕುತೂಹಲದಿಂದ ಬಿಹಾರದ ವಿಧಾನಸಭೆಯ ಚುನಾವಣೆ ಫಲಿತಾಂಶವನ್ನು ಎದುರು ನೋಡುತ್ತಿರುವಾಗಲೇ ಈ ಬೆಳವಣಿಗೆ ನಡೆದಿದೆ.
ಬಿಹಾರದಲ್ಲಿ ಪ್ರಾರಂಭಿಕ ಹಂತದಲ್ಲಿ ಎನ್‌ಡಿಎ ಭಾರೀ ಮುನ್ನಡೆ ಸಾಧಿಸಿದೆ. ಚುನಾವಣೆ ಫಲಿತಾಂಶ ಬರುವ ಸಂದರ್ಭದಲ್ಲಿಯೇ ಕೆಲವೊಂದು ಗೊಂದಲಗಳು ಸೃಷ್ಟಿಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಪೊಲೀಸರು ಕೆಲವೊಂದು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಈ ರೀತಿ ಇರುವಾಗಲೇ ಏಕಾಏಕಿ ವಿವಿಧ ಭಾಗಗಳಲ್ಲಿ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮತ ಎಣಿಕೆಯ ಸಂದರ್ಭದಲ್ಲಿ ಯಾವುದೇ ಅಕ್ರಮಗಳು ನಡೆದರೆ ನೇಪಾಳ ಮಾದರಿಯ ಪ್ರತಿಭಟನೆ ಭುಗಿಲೇಳಬಹುದು ಎಂದು ಆರ್‌ಜೆಡಿ ಎಂಎಲ್‍ಸಿ ಹಾಗೂ ಲಾಲೂಪ್ರಸಾದ್ ಆಪ್ತ ಸುನೀಲ್ ಕುಮಾರ್ ಸಿಂಗ್ ಎಚ್ಚರಿಕೆ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ಭದ್ರತಾ ವ್ಯವಸ್ಥೆ ಹೆಚ್ಚಿಸಲಾಗಿದ್ದು, ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಆರ್‌ಜೆಡಿ ಶಾಸಕರ ಎಚ್ಚರಿಕೆ ಚುನಾವಣೆ ಫಲಿತಾಂಶದ ಸಂದರ್ಭದಲ್ಲಿ ಭಾರೀ ಆತಂಕಕ್ಕೂ ಕಾರಣವಾಗಿದೆ. ಅಧಿಕಾರಿಗಳು ಎಣಿಕೆ ವಂಚನೆಯಲ್ಲಿ ತೊಡಗಿದರೆ, ಬಿಹಾರದ ಬೀದಿಗಳು, ನೇಪಾಳ, ಬಾಂಗ್ಲಾದೇಶ ಮತ್ತು ಶ್ರೀಲಂಕಾದಲ್ಲಿ ನಡೆದ ಪ್ರತಿಭಟನೆಗಳನ್ನೇ ಎದುರಿಸಲಿವೆ. ಒಟ್ಟಾರೆ ಪರಿಸ್ಥಿತಿ ಸರ್ಕಾರದ ನಿಯಂತ್ರಣವನ್ನು ಮೀರಲಿದೆ ಎಂದು ವಿರೋಧ ಪಕ್ಷಗಳು ಎಚ್ಚರಿಕೆ ಕೊಟ್ಟಿರುವುದು ಶಾಲೆಗಳಿಗೆ ರಜೆ ಘೋಷಣೆ ಮಾಡುವುದಕ್ಕೆ ಮುಖ್ಯ ಕಾರಣವಾಗಿದೆ.
ಬಿಹಾರದ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಏಕೆಂದರೆ ಈ ಬಾರಿ ಜನತೆ ಹೆಚ್ಚು ಜಾಗರೂಕರಾಗಿದ್ದು, ಸೂಕ್ತವಾಗಿಯೇ ಪ್ರತಿಕ್ರಿಯಸಲಿದ್ದಾರೆ ಎಂದಿದ್ದಾರೆ. ಹಲವು ಜಿಲ್ಲೆಗಳಲ್ಲಿ ಆರ್‌ಜೆಡಿ ಶಾಸಕರ ಈ ಹೇಳಿಕೆಯಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ, ಚುನಾವಣಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾಧಿಕಾರಿಗಳು, ಸಂಭಾವ್ಯ ಕಾನೂನು ಮತ್ತು ಸುವ್ಯವಸ್ಥೆ ಆತಂಕದ ದೃಷ್ಟಿಯಿಂದ ಮುಂಜಾಗ್ರತಾ ನಿರ್ಬಂಧಗಳನ್ನು ವಿಧಿಸಿ ಆದೇಶ ಹೊರಡಿಸಿದ್ದಾರೆ.












Click it and Unblock the Notifications