School Holiday: ಇಂದಿನಿಂದ 30 ದಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

School Holiday: ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ ಕಾರಣಾಂತರಗಳಿಂದ ಶಾಲಾ-ಕಾಲೆಜುಗಳಿಗೆ ಸಾಲು ರಜೆಗಳನ್ನೇ ನೀಡಲಾಗಿದೆ. ಹಾಗೆಯೇ ಇದೀಗ ಈ ಭಾಗದಲ್ಲಿ ಜುಲೈ 12ರಿಂದ ಆಗಸ್ಟ್‌ 12ರ ವರೆಗೆ ಬರೋಬ್ಬರಿ ಒಂದು ತಿಂಗಳು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಾಗಾದ್ರೆ ಎಲ್ಲಿ ಹಾಗೂ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಕರ್ನಾಟಕದಲ್ಲಿ ಸರ್ಕಾರಿ ರಜೆಗಳನ್ನು ಹೊರತುಪಡಿಸಿ ಪ್ರತಿಭಟನೆ, ವಿಶೇಷ ಕಾರ್ಯಕ್ರಮಗಳು ಹಾಗೂ ಭಾರೀ ಮಳೆ ವೇಳೆ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ಸಾಲು ರಜೆಗಳನ್ನು ನೀಡಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ರಜೆಗಳ ಹಬ್ಬದೂಟವನ್ನೇ ಬಡಿಸಿದಂತಾಗಿದೆ. ಕೆಲವೆಡೆ ರಜೆಗಳನ್ನು ಸರಿದೂಗಿಸಲು ಶನಿವಾರ ಪೂರ್ತಿ ತರಗತಿ ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

School Holiday All Schools to Remain Closed from July 12 to August 12 for this reason

ಇನ್ನೂ ಕೆಲವು ಭಾಗಗಳಲ್ಲಿ ಕಾರಣಾಂತರಗಳಿಂದ ಕರ್ನಾಟಕಕ್ಕಿಂತಲೂ ಹೆಚ್ಚಿನ ರಜೆಗಳನ್ನು ನೀಡಲಾಗಿದೆ. ಹಾಗೆಯೇ ಇದೀಗ ಈ ಭಾಗದಲ್ಲಿ ಭಾರೀ ಮಳೆ ಮುಂದುವರೆದ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗಳಿಗೆ ಒಂದು ತಿಂಗಳು ರಜೆ ಘೋಷಣೆ ಮಾಡಲಾಗಿದೆ. ಇದರಿಂದ ಪೋಷಕರು ಮಕ್ಕಳ ವಿದ್ಯಾಭ್ಯಾಸದ ಕಥೆ ಎನ್ನುವ ಆತಂಕಕ್ಕೆ ಒಳಗಾಗಿದ್ದಾರೆ.

ಈಗಾಗಲೇ ದೇಶಾದ್ಯಂತ ಮುಂಗಾರು ಮಳೆ ಆವರಿಸಿಬಿಟ್ಟಿದೆ. ಪರಿಣಾಮ ಹಲವು ಭಾಗಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾದ ಘಟನೆಗಳು ನಡೆದಿವೆ. ಇನ್ನು ಹಿಮಾಚಲ ಪ್ರದೇಶದ ಭಾಗದಲ್ಲಿ ಭಾರೀ ಮಳೆ ಮುಂದುವರೆದು ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದ್ದು, ಈಗಾಗಲೇ ಸುಮಾರು 100 ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಭಾರೀ ಮಳೆ ಹಿನ್ನೆಲೆ ಹಿಮಾಚಲ ಪ್ರದೇಶ ಸರ್ಕಾರ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.

ಭಾರೀ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಇಲ್ಲಿನ ಕೆಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಕೂಡ ಘೋಷಿಸಲಾಗಿದೆ. ಇನ್ನು ರಣಭೀಕರ ಮಳೆ ಮುಂದುವರೆದ ಹಿನ್ನೆಲೆ ಹಿಮಾಚಲ ಪ್ರದೇಶ ಶಾಲಾ ಶಿಕ್ಷಣ ಮಂಡಳಿಯು ಮುಂಜಾಗ್ರತಾ ಕ್ರಮವಾಗಿ ಇಲ್ಲಿನ ಶಾಲೆಗಳಿಗೆ ಒಂದು ತಿಂಗಳ ರಜೆಯನ್ನ ಘೋಷಣೆ ಮಾಡಿದೆ.

ಆಗಷ್ಟ್‌ 12ರ ವರೆಗೆ ರಜೆ ಘೋಷಣೆ: ಅಲ್ಲದೆ, ರಾಜ್ಯದ ಎಲ್ಲಾ ಶಾಲೆಗಳಿಗೆ ಮಾನ್ಸೂನ್ ರಜೆ ದಿನಾಂಕಗಳನ್ನ ಘೋಷಣೆ ಮಾಡಲಾಗಿದ್ದು, ಭಾರೀ ಮಳೆ ಹಿನ್ನೆಲೆ ಜುಲೈ 12ರಿಂದ ಆಗಸ್ಟ್ 12ರ ವರೆಗೆ ಎಲ್ಲಾ ಶಾಲೆಗಳು ಮುಚ್ಚಲ್ಪಡಲಿವೆ ಎಂದು ಇಲ್ಲಿನ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಒಂದು ವೇಳೆ ಆದೇಶವನ್ನು ಮೀರಿಯೂ ಯಾರಾದರೂ ಶಾಲೆಗಳನ್ನು ತೆರೆದರೆ, ಸಂಭವಿಸುವ ಅಹಿತಕರ ಘಟನೆಗೆ ಅವರೇ ಸಂಪೂರ್ಣ ಜವಾಬ್ದಾರರು ಆಗಿರುತ್ತಾರೆ ಎಂದು ಹಿಮಾಚಲ ಪ್ರದೇಶ ಸರ್ಕಾರ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಈಗಾಗಲೇ ಹಲವು ರಾಜ್ಯಗಳಲ್ಲಿಯೂ ಭಾರೀ ಮಳೆ ಸಂದಂರ್ಭದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳು, ಶಾಲೆಗಳಿಗೆ ರಜೆಗಳನ್ನು ಘೋಷಣೆ ಮಾಡಿದ್ದು, ಈ ರಜೆಗಳನ್ನು ಸರಿದೂಗಿಸುವ ನಿರ್ಧಾರಕ್ಕೂ ಮುಂದಾಗಿವೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದೆನ್ನುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+