School Holiday: ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ
School Holiday: ಈಗಾಗಲೇ ದೇಶದ ಬಹುತೇಕ ಭಾಗಗಳಲ್ಲಿ ಭಾರೀ ಶೀತಗಾಳಿ ಜೊತೆ ವಾಯುಮಾಲಿನ್ಯ ಪ್ರಮಾಣ ಹೆಚ್ಚಾಗುತ್ತಲಿದೆ. ಪರಿಣಾಮ ಜನರು ತತ್ತರಿಸಿದ್ದಾರೆ. ಇನ್ನೂ ಈ ಭಾಗಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಮಕ್ಕಳ ಹಿತದೃಷ್ಟಿಯಿಂದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮತ್ತೊಂದೆಡೆ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ನೀಡಲಾಗಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕಳೆದ ವರ್ಷವೂ ಸಹ ಚಳಿ ಪ್ರಮಾಣ ಹೆಚ್ಚಿದ ಹಿನ್ನೆಲೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಶಾಲಾ-ಕಾಲೇಜುಗಳಿಗೆ ತಿಂಗಳುಗಟ್ಟಲೇ ರಜೆ ನೀಡಲಾಗಿತ್ತು. ಮತ್ತೆ ಚಳಿ ಮುಂದುವರೆದ ಕಾರಣ ಹೆಚ್ಚುವರಿ ರಜೆಗಳನ್ನು ನೀಡಲಾಗಿದ್ದು, ಇವುಗಳನ್ನು ಸರಿದೂಗಿಸಲು ಆನ್ಲೈನ್ ತರಗತಿಗಳನ್ನು ನಡೆಸಲಾಗಿತ್ತು. ವಿದ್ಯಾರ್ಥಿಗಳ ವಿದ್ಯಾಭ್ಯಸಕ್ಕೆ ಯಾವುದೇ ಅಡಚಣೆ ಆಗಬಾರದು ಎನ್ನುವ ದೃಷ್ಟಿಯಿಂದ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

ಇದೀಗ ಕಳೆದ ಬಾರಿಯಂತೆ ಚಳಿ ಹೆಚ್ಚಿದ ಕಾರಣ ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೀಕರ ದಟ್ಟ ಮಂಜಿನ ಜೊತೆ ವಾಯುಮಾಲಿನ್ಯ ಪ್ರಮಾಣ ಹೆಚ್ಚಾಗಿದೆ. ಆದ್ದರಿಂದ ಈ ಭಾಗಗಳ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಇಂದು (ಡಿಸೆಂಬರ್18) ರಜೆ ಘೋಷಣೆ ಮಾಡಲಾಗಿದೆ.
ದೆಹಲಿಯಲ್ಲಿ ವಾಯು ಮಾಲಿನ್ಯ ತೀವ್ರಗೊಂಡಿದೆ. ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನರ್ಸರಿಯಿಂದ 5ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಇತರ ವಿದ್ಯಾರ್ಥಿಗಳಿಗೂ ಮಾರ್ಗಸೂಚಿ ಹೊರಡಿಸಲಾಗಿದೆ. ದೆಹಲಿಯಲ್ಲಿ ವಾಯುಮಾಲಿನ್ಯದ ಪರಿಣಾಮ ಜಿಆರ್ಎಪಿ 4 ಹಂತದ ನಿರ್ಬಂಧಗಳು ಜಾರಿ ಆಗಿದೆ. ಆದ್ದರಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಲಾಗಿದೆ.
ಒಂದು ವೇಳೆ ಮಾಲಿನ್ಯದ ಪ್ರಮಾಣ ಕಡಿಮೆಯಾದ್ರೆ, ಮುಂದಿನ ದಿನಗಳಲ್ಲಿ ಶಾಲೆಗಳನ್ನು ತೆರೆಯಲಾಗುತ್ತದೆ ಅಂತಲೂ ದೆಹಲಿ ಸರ್ಕಾರ ತಿಳಿಸಿದೆ ಎಂದು ವರದಿಯಾಗಿದೆ. ಅಲ್ಲದೆ, 6ರಿಂದ 11ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಹೈಬ್ರಿಡ್ ಮಾದರಿಯಲ್ಲಿ ತರಗತಿ ನಡೆಸಲು ಸೂಚನೆ ನೀಡಲಾಗಿದೆ. ಆನ್ಲೈನ್ ಹಾಗೂ ಒಂದಷ್ಟು ದಿನ ಶಾಲಾ ತರಗತಿ ಮೂಲಕ ಬೋಧನೆ ಮಾಡಬೇಕು. 10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಬೇಕು. ಬೋರ್ಡ್ ಪರೀಕ್ಷೆ ಇರುವ ಹಿನ್ನೆಲೆ ಈ ವಿದ್ಯಾರ್ಥಿಗಳಿಗೆ ತರಗತಿಗೆ ಹಾಜರಾಗಲು ಸೂಚನೆ ನೀಡಲಾಗಿದೆ.
ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಯಾವುದೇ ವಿದ್ಯಾರ್ಥಿಯಲ್ಲಿ ಅಸ್ವಸ್ಥತೆ, ಉಸಿರಾಟದ ಸಮಸ್ಯೆ ಕಂಡುಬಂದಲ್ಲಿ ಗಂಭೀರವಾಗಿ ಪರಿಗಣಿಸಬೇಕು ಎಂದು ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೋಷಕರಿಗೂ ಸಹ ಮಕ್ಕಳ ಆರೋಗ್ಯದ ಕಡೆಗೆ ಆದ್ಯತೆ ನೀಡುವಂತೆಯೂ ತಿಳಿಸಲಾಗಿದೆ. ಒಂದು ವೇಳೆ ಭೀಕರ ಚಳಿ ಜೊತೆ ಹೀಗೆ ವಾಯುಮಾಲಿನ್ಯ ಮುಂದುವರೆದರೆ, 5ನೇ ತರಗತಿವರೆಗಿನ ಶಾಲೆಗಳಿಗೆ ರಜೆ ವಿಸ್ತರಣೆ ಮಾಡುವ ಸಾಧ್ಯತೆಯಿದೆ.
ಮತ್ತೊಂದೆಡೆ ವಾಯುಮಾಲಿನ್ಯ ಹೆಚ್ಚಳ ಕಾರಣ ಖಾಸಗಿ ಹಾಗೂ ಸರ್ಕಾರಿ ಉದ್ಯೋಗಿಗಳ ಪೈಕಿ ಶೇಕಡಾ 50ರಷ್ಟು ಮಂದಿಗೆ ಕಡ್ಡಾಯವಾಗಿ ಮನೆಯಿಂದ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ. ಈ ಆದೇಶವನ್ನು ಖಾಸಗಿ ಹಾಗೂ ಸರ್ಕಾರಿ ಕಂಪನಿಗಳು ಆದೇಶ ಕಡ್ಡಾಯವಾಗಿ ಪಾಲನೆ ಮಾಡಲು ದೆಹಲಿ ಸರ್ಕಾರ ಸೂಚನೆ ನೀಡಿದೆ. ಒಂದು ವೇಳೆ ಈ ನಿಯಮವನ್ನು ಉಲ್ಲಂಘಣೆ ಮಾಡಿದಲ್ಲಿ ದಂಡ ವಿಧಿಸಲಾಗಿತ್ತದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ. ಒಟ್ಟಾರೆಯಾಗಿ ಹೇಳುವುದಾದರೆ, ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಲ್ಲಿನ ವಾಹನ ಸವಾರರು ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದಾರೆ. ಇದೇ ದೃಷ್ಟಿಕೋನದಿಂದ ಇಲ್ಲಿನ ಸರ್ಕಾರ ಈ ಮಹತ್ವದ ನಿರ್ಧಾರಕ್ಕೆ ಕೈಹಾಕಿದೆ ಎಂದು ಹೇಳಲಾಗುತ್ತಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications