School Holiday: ಶಾಲೆಗಳಿಗೆ 45 ದಿನ ರಜೆ ಘೋಷಣೆ
School Holiday: ಈಗಾಗಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಪರೀಕ್ಷೆಗಳು ಮುಗಿದಿದ್ದು, ಶಾಲೆಗಳಿಗೆ ಬೇಸಿಗೆ ರಜೆಯನ್ನು ಕೂಡ ಘೋಷಣೆ ಮಾಡಲಾಗಿದೆ. ಹಾಗೆಯೇ ಇದೀಗ ಈ ಭಾಗದಲ್ಲಿ 45 ದಿನಗಳ ಕಾಲ ರಜೆ ನೀಡಲಾಗಿದೆ. ಹಾಗಾದ್ರೆ ಎಲ್ಲಿ ಹಾಗೂ ಎಲ್ಲಿಂದ ಎಲ್ಲಿಯವರೆಗೂ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕರ್ನಾಟಕದಲ್ಲಿ ಈಗಾಗಲೇ ಪರೀಕ್ಷೆಗಳು ಮುಗಿದಿದ್ದು, ಬೇಸಿಗೆ ರಜೆಯನ್ನು ಸಹ ಘೋಷಣೆ ಮಾಡಲಾಗಿದೆ. ಇದಕ್ಕೂ ಮುಂಚೆ ರಾಜ್ಯದಲ್ಲಿ ಸರ್ಕಾರಿ ರಜೆಗಳನ್ನು ಹೊರತುಪಡಿಸಿ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ, ವಿಶೇಷ ಕಾರ್ಯಕ್ರಮಗಳ ಸಂದರ್ಭಗಳಲ್ಲೂ ಶಾಲೆಗಳಿಗೆ ಸಾಲು ರಜೆಗಳನ್ನೇ ಘೋಷಣೆ ಮಾಡಲಾಗಿದೆ. ಇದರ ಬೆನ್ನಲ್ಲೇ ಬೇಸಿಗೆ ರಜೆ ಕೂಡ ಸಿಕ್ಕಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ರಜೆಯ ಹಬ್ಬದೂಟವನ್ನೇ ಬಡಿಸಿದಂತಾಗಿದೆ.

ರಾಜ್ಯದಲ್ಲಿ ಪರೀಕ್ಷೆಗಳು ಮುಗಿಯುವ ಮುನ್ನ ಪೋಷಕರು ತಮ್ಮ ಮಕ್ಕಳಿಗೆ ಯಾವಾಗ ರಜೆ ಘೋಷಣೆ ಮಾಡುತ್ತಾರೋ ಎಂದು ಕಾದು ಕುಳಿತ್ತಿದ್ದರು. ಯಾಕಂದ್ರೆ.. ಅಷ್ಟರ ಮಟ್ಟಿಗೆ ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿತ್ತು. ಅದರಂತೆಯೇ ಬೇಗ ಪರೀಕ್ಷೆಗಳನ್ನು ಮುಗಿಸಿ ಅವಧಿಗೂ ಮುನ್ನ ಬೇಸಿಗೆ ರಜೆಯನ್ನು ಮಾಡಲಾಗಿತ್ತು. ಮತ್ತೊಂದೆಡೆ ಬಹುತೇಕ ಭಾಗಗಳಲ್ಲಿ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಮಾಡಲಾಗಿದೆ. ಕೆಲವು ರಾಜ್ಯಗಳಲ್ಲಿ ಈಗ ಬೇಸಿಗೆ ರಜೆ ಆರಂಭವಾಗುತ್ತಿದೆ.
ಹಾಗೆಯೇ ಇದೀಗ ರಾಜಸ್ಥಾನದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಮಾಡಲಾಗಿದೆ. ಈ ವರ್ಷ ಶಾಲೆಗಳು 45 ದಿನಗಳ ಕಾಲ ಮುಚ್ಚಲ್ಪಡುತ್ತವೆ. ಮೇ 17ರಿಂದ ಜೂನ್ 31 2025ರ ವರೆಗೆ ಎಲ್ಲಾ ಶಾಲೆಗಳಿಗೂ ಬೇಸಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲೆ ಮುಚ್ಚುವ ಒಂದು ದಿನ ಮೊದಲು ಅಂದರೆ ಮೇ 16ರಂದು ಪೋಷಕರು-ಶಿಕ್ಷಕರ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯ ನಂತರ ಜುಲೈ 1ರಂದು ಶಾಲೆಗಳು ತೆರೆಯುತ್ತವೆ ಎಂದು ತಿಳಿಸಿದ್ದಾರೆ.
ಹವಾಮಾನ ತಜ್ಞರು ಹೇಳೋದೇನು?: ಹಿರಿಯ ಹವಾಮಾನ ತಜ್ಞ ಡಾ.ನರೇಶ್ ಕುಮಾರ್ ಅವರು, ದೇಶಾದ್ಯಂತ ಹವಾಮಾನ ಪರಿಸ್ಥಿತಿಗಳ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅವರ ಪ್ರಕಾರ, ವಾಯುವ್ಯ ಭಾರತದಲ್ಲಿ ಕೆಲವೆಡೆ ತಾಪಮಾನ ಪ್ರಮಾಣ ಏರಿಕೆಯಾಗುತ್ತಲೇ ಇದೆಯೇ ಹೊರತು ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ. ಅದರಲ್ಲೂ ರಾಜಸ್ಥಾನದಲ್ಲಿ ಹೆಚ್ಚಿನ ಬಿಸಿಲಿನ ವಾತಾವರಣವೇ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಗಗನಕ್ಕೇರಿದ ತಾಪಮಾನ: ರಾಜಸ್ಥಾನದ ಗಂಗಾನಗರದಂತಹ ಪ್ರದೇಶಗಳಲ್ಲಿ ತಾಪಮಾನವು 45 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಇದರಿಂದ ಈ ಭಾಗದ ಜನರು ಬೇಸತ್ತಿದ್ದಾರೆ. ಅಲ್ಲದೆ, ಮಳೆ ಯಾವಾಗ ಅಬ್ಬರಿಸಲಿದೆ ಎಂದು ಮೋಡ ನೋಡುತ್ತಾ ಕುಳಿತುಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಶಾಖದ ಅಲೆಗಳಿಂದ ತಪ್ಪಿಸಿಕೊಳ್ಳಲು ಸೂಕ್ತ ಸಲಹೆಗಳು: ಹೆಚ್ಚು ತಾಪಮಾನ ದಾಖಲಾಗುತ್ತಿರು ಪ್ರದೇಶಗಳ ಜನರು ಎಚ್ಚರಿಕೆಯಿಂದ ಇರಬೇಕಾಗುತ್ತದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಶಾಖದ ಅಲೆಯಿಂದ ತಪ್ಪಿಸಿಕೊಳ್ಳಲು ಸಾಕಷ್ಟು ನೀರು ಕುಡಿಯುವುದು, ಹಗುರವಾದ ಬಟ್ಟೆಗಳನ್ನು ಧರಿಸುವುದು ಮತ್ತು ಮಧ್ಯಾಹ್ನದ ಸಮಯದಲ್ಲಿ ಹೊರಗೆ ಹೋಗುವುದನ್ನು ತಪ್ಪಿಸುವುದು ಉತ್ತಮ ಅಂತಲೂ ತಿಳಿಸಿದೆ.












Click it and Unblock the Notifications