Holiday: ನಾಳೆ ಸೋಮವಾರ ಶಾಲೆಗಳಿಗೆ ರಜೆ ಘೋಷಣೆ ಸಾಧ್ಯತೆ..
School Holiday: ದೇಶದ ಹಲವು ಭಾಗಗಳಲ್ಲಿ ಈಗಾಗಲೇ ಕಾರಣಾಂತರಗಳಿಂದ ಶಾಲಾ-ಕಾಲೇಜುಗಳಿಗೆ ಸಾಲು ರಜೆಗಳನ್ನೇ ಘೋಷಣೆ ಮಾಡಲಾಗಿದೆ. ಹಾಗೆಯೇ ಇದೀಗ ಡಿಸೆಂಬರ್ 1ರ ಸೋಮವಾರ ಕೂಡ ಶಾಲೆಗಳಿಗೆ ರಜೆ ಘೋಷಿಸುವ ಸಾಧ್ಯತೆಯಿದೆ. ಹಾಗಾದ್ರೆ ಎಲ್ಲೆಲ್ಲಿ ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ವೇಳೆ ಭಾರೀ ಮಳೆ ಹಿನ್ನೆಲೆ ಶಾಲೆಗಳಿಗೆ ಸಾಲು ರಜೆಗಳನ್ನೇ ಘೋಷಣೆ ಮಾಡಲಾಗಿತ್ತು. ಅದರಲ್ಲೂ ಕರವಾಳಿ ಜಿಲ್ಲೆಗಳಲ್ಲೇ ಶಾಲೆಗಳಿಗೆ ಹೆಚ್ಚು ರಜೆಗಳನ್ನು ನೀಡಲಾಗಿತ್ತು. ಅಲ್ಲದೆ, ಈ ರಜೆಗಳನ್ನು ಸರಿದೂಗಿಸುವ ಕಾರ್ಯ ಕೂಡ ನಡೆದಿದ್ದು, ಆನ್‌ಲೈನ್ ತರಗತಿಗಳನ್ನು ನಡೆಸಲಾಗಿತ್ತು. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗಬಾರದೆನ್ನುವ ದೃಷ್ಟಿಯಿಂದ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಇದೀಗ ಈ ಭಾಗಗಳಲ್ಲಿ ಸದ್ಯ ಮಳೆ ನಿಂತಿದ್ದು, ಎಂದಿನಂತೆ ತರಗತಿಗಳು ಮುಂದುವರೆದಿವೆ.

ಈ ನಡುವೆಯೇ ಇದೀಗ ದಿತ್ವಾ ಚಂಡಮಾರುತ ಹಿನ್ನೆಲೆ ಶೀತಗಾಳಿ ನಡುವೆಯೂ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ರಣಭೀಕರ ಮಳೆ ಮುಂದುವರೆದಿದೆ. ಈಗಾಗಲೇ ಭಾರೀ ಮಳೆ ಕಾರಣ ನವೆಂಬರ್ 29, 30ರಂದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಾಗೆಯೇ ಡಿಸೆಂಬರ್ 1ರಂದು ಕೂಡ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ರಜೆ ಮುಂದುವರೆಸುವ ಸಾಧ್ಯತೆಯಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಕೆಳಗೆ ನೀಡಲಾಗಿದೆ ತಿಳಿಯಿರಿ.
ದಿತ್ವಾ ಚಂಡಮಾರುತ ಪರಿಣಾಮ ಇಂದು (ನವೆಂಬರ್ 30) ಕೂಡ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತುದೆ. ಆದ್ದರಿಂದ ತಮಿಳುನಾಡಿನ ತಿರುಚಿ, ತಂಜಾವೂರು, ನಾಗಪಟ್ಟಣಂ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಮಧ್ಯೆಯೆ ಪಾಂಡಿಚೇರಿ ಕೇಂದ್ರ ವಿಶ್ವವಿದ್ಯಾಲಯವು ಸಹ ನವೆಂಬರ್ 29ರ ಶನಿವಾರ ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿದೆ. ನವೆಂಬರ್ 29 ರಂದು ನಿಗದಿಯಾಗಿದ್ದ ಎಲ್ಲಾ ತರಗತಿಗಳು ಮತ್ತು ಪರೀಕ್ಷೆಗಳನ್ನು ಮುಂದೂಡಲಾಗಿದೆ. "ಮುಂದೂಡಲ್ಪಟ್ಟ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಸೂಕ್ತ ಸಮಯದಲ್ಲಿ ತಿಳಿಸಲಾಗುವುದು," ಎಂದು ಪಾಂಡಿಚೇರಿ ಕೇಂದ್ರ ವಿಶ್ವವಿದ್ಯಾಲಯದ ಪ್ರಕಟಣೆಯಲ್ಲಿ ತಿಳಿಸಿದೆ.
ದಿತ್ವಾ ಚಂಡಮಾರುತವು ನವೆಂಬರ್ 30ರ ಭಾನುವಾರ ಭೂಕುಸಿತ ಉಂಟು ಮಾಡುವ ಸಾಧ್ಯತೆಯಿದೆ. ಡಿಸೆಂಬರ್ 1ರ ಸೋಮವಾರದಂದು ಕೂಡ ತಮಿಳುನಾಡಿನ ಚೆನ್ನೈ ಭಾಗದಲ್ಲಿ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಇದೆ. ಈ ಹಿನ್ನೆಲೆ ಅಂದು ಕೂಡ ತಮಿಳುನಾಡಿನ ವಿವಿಧ ಭಾಗಗಳಲ್ಲಿನ ಶಾಲೆಗಳಿಗೆ ರಜೆ ನೀಡುವ ಸಾಧ್ಯತೆಯಿದೆ. ಇನ್ನೂ ಈ ಬಗ್ಗೆ ಯಾವುದೇ ಅಧಿಕೃತ ಅಧಿಸೂಚನೆ ಹೊರಬಿದ್ದಿಲ್ಲ. ಆದರೂ, ವಿದ್ಯಾರ್ಥಿಗಳು ಮತ್ತು ಪೋಷಕರು ಮುಂಚಿತವಾಗಿ ತಮ್ಮ ಶಾಲಾ ಪ್ರಾಧಿಕಾರದೊಂದಿಗೆ ಸಂಪರ್ಕದಲ್ಲಿರಲು ಸೂಚಿಸಲಾಗಿದೆ.
ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರದ ಪ್ರಕಾರ, ದಿಟ್ವಾ ಚಂಡಮಾರುತ ನಿಧಾನವಾಗಿ ಉತ್ತರದ ಕಡೆಗೆ ಚಲಿಸುತ್ತಿದ್ದು, ನವೆಂಬರ್ 30ರ ಬೆಳಗ್ಗೆ ನೈಋತ್ಯ ಬಂಗಾಳ ಕೊಲ್ಲಿಯನ್ನು ತಲುಪುವ ಸಾಧ್ಯತೆಯಿದೆ. ದಿಟ್ವಾ ಚಂಡಮಾರುತವು ನವೆಂಬರ್ 30ರಂದು ತಮಿಳುನಾಡು ಮತ್ತು ಪುದುಚೇರಿಯಲ್ಲಿ ಮತ್ತು ನವೆಂಬರ್, ಡಿಸೆಂಬರ್ 1ರ ವರೆಗೆ ಕರಾವಳಿ ಆಂಧ್ರಪ್ರದೇಶ-ರಾಯಲಸೀಮಾ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ನೀಡಿದೆ.
ಮುಂದಿನ ಎರಡ್ಮೂರು ದಿನಗಳ ಕಾಲ ತಮಿಳುನಾಡಿನ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಹಿನ್ನೆಲೆ ಹವಾಮಾನ ಇಲಾಖೆ ಕಲವು ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ರಾಮನಾಥಪುರಂ, ಶಿವಗಂಗೈ, ವಿರುಧುನಗರ, ಥೇಣಿ, ಮಧುರೈ, ಪುದುಕೊಟ್ಟೈ, ತಂಜಾವೂರು, ತಿರುವರೂರ್, ನಾಗಪಟ್ಟಣಂ, ಮೈಲಾಡುತುರೈ, ಕರೂರ್, ಸೇಲಂ, ಅರಿಯಲೂರ್, ಪೆರಂಬಲೂರು, ಕಲ್ಲಕುರಿಚಿ, ವಿಲ್ಲುಪುರಂ, ತಿರುವಣ್ಣಾಮಲೈ, ಕಾಂಚಿಪುರಂ, ಚೆನ್ನೈ, ಚೆಂಗಲ್ವಪ್ಪತ್, ಪುದುಚೇರಿ, ಕಾರೈಕಲ್ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.












Click it and Unblock the Notifications