Holiday: ಡಿಸೆಂಬರ್ 14ರ ವರೆಗೂ ಶಾಲೆಗಳಿಗೆ ರಜೆ ಘೋಷಣೆ..
School Holiday: ದೇಶದ ಹಲವೆಡೆ ಕಾರಣಾಂತರಗಳಿಂದ ಇಲ್ಲಿಯವರೆಗೂ ಶಾಲಾ-ಕಾಲೇಜುಗಳಿಗೆ ಸಾಲು ರಜೆಗಳನ್ನೇ ನೀಡಲಾಗಿದೆ. ಹಾಗೆಯೇ ಇದೀಗ ಡಿಸೆಂಬರ್ 14ರ ವರೆಗೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹಾಗಾದ್ರೆ, ಎಲ್ಲೆಲ್ಲಿ ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭಾರೀ ಮಳೆ ವೇಳೆ ಈ ವರ್ಷ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ಸಾಲು ರಜೆಗಳನ್ನೇ ನೀಡಲಾಗಿದೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಹೆಚ್ಚು. ಅಲ್ಲದೆ, ಈ ರಜೆಗಳನ್ನು ಸರಿದೂಗಿಸುವ ಕಾರ್ಯ ಕೂಡ ನಡೆಯಿತು. ಆನ್ಲೈನ್ ತರಗತಿ ಹಾಗೂ ಶನಿವಾರ ಪೂರ್ತಿ ತರಗತಿಗಳನ್ನು ನಡೆಸಲಾಯಿತು. ಈ ಮಹತ್ವದ ನಿರ್ಧಾರದ ಉದ್ದೇಶ ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆ ಆಗದಿರಲಿ ಎಂದು.

ಇನ್ನೂ ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲೇ ಅತೀ ಕಡಿಮೆ ರಜೆಗಳನ್ನು ನೀಡಲಾಗಿದೆ. ಹಲವು ರಾಜ್ಯಗಳಲ್ಲಿ ಮಳೆಗಾಲದಲ್ಲಿ ವಾರಗಟ್ಟಲೇ ರಜೆ ನೀಡಲಾಗಿದೆ. ಇನ್ನೂ ಇದೀಗ ಭಾರೀ ಚಳಿ ಮುಂದುವರೆದಿದೆ. ಅದರಲ್ಲೂ ಉತ್ತರ ಭಾರತದ ಬಹುತೇಕ ರಾಜ್ಯಗಳಲ್ಲಿ ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಭೀಕರ ಚಳಿ ಮುಂದುವರೆದ ಹಿನ್ನೆಲೆ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಈ ಭಾಗಗಳಲ್ಲಿ ಡಿಸೆಂಬರ್ 14ರ ವರೆಗೂ ರಜೆ ಘೋಷಣೆ ಮಾಡಲಾಗಿದೆ. ಹೌದು.. ಭಾರತದ ಹಲವು ಭಾಗಗಳಲ್ಲಿ ತಾಪಮಾನ ಕುಸಿಯುತ್ತಿದ್ದು, ಚಳಿ ಪ್ರಮಾಣ ತೀವ್ರಗೊಳ್ಳುತ್ತಿದೆ. ಈ ಹಿನ್ನೆಲೆ ಪೋಷಕರು ಮಕ್ಕಳನ್ನು ಈ ವಾತಾವರಣದಲ್ಲಿ ಶಾಲೆಗಳಿಗೆ ಕಳುಹಿಸುವುದು ಹೇಗೆ ಎನ್ನುವ ಚಿಂತೆಯಲ್ಲಿದ್ದರು.
ತಾಪಮಾನದಲ್ಲಿನ ಇಳಿಕೆಯಾಗಿ, ದಟ್ಟ ಮಂಜಿನ ಜೊತೆ ಭೀಕರ ಚಳಿ ವಾತಾವರಣ ಮುಂದುವರೆದಿದೆ. ಚಳಿಗಾಲದ ರಜೆಯ ಕ್ಯಾಲೆಂಡರ್ ಇನ್ನೂ ಬಿಡುಗಡೆ ಆಗಿಲ್ಲ. ಆದರೆ, ದೇಶದ ಈ ಭಾಗದಲ್ಲಿ ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳಿಗೆ ಡಿಸೆಂಬರ್ 14ರ ವರೆಗೆ ರಜೆ ಘೋಷಣೆ ಮಾಡಲಾಗಿದೆ. ಈ ಸುದ್ದಿ ತಿಳಿದ ಮಕ್ಕಳ ಪೋಷಕರು ಸಂತಸಗೊಂಡಿದ್ದಾರೆ.
ಗುಡ್ಡಗಾಡು ಪ್ರದೇಶಗಳಲ್ಲಿ ಚಳಿ ಪ್ರಮಾಣ ಹೆಚ್ಚಾಗುತ್ತಿದೆ. ಚಳಿ, ದಟ್ಟವಾದ ಮಂಜು ಮತ್ತು ಹಿಮಪಾತ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಲೆಗಳಿಗೆ ಡಿಸೆಂಬರ್ 14ರ ವರೆಗೆ ರಜೆ ಘೋಷಣೆ ಮಾಡಲಾಗಿದೆ. ಚಳಿ ಹೀಗೆಯೇ ಮುಂದುವರೆದರೆ, ಡಿಸೆಂಬರ್ 14ರ ನಂತರವೂ ಶಾಲೆಗಳು ಮುಚ್ಚುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಚಳಿಗಾಲದ ರಜೆಯ ವೇಳಾಪಟ್ಟಿ: ಪೂರ್ವ ಪ್ರಾಥಮಿಕ ಶಾಲೆಗಳು ಫೆಬ್ರವರಿ 28, 2026ರ ವರೆಗೆ ಮುಚ್ಚಲ್ಪಡುತ್ತವೆ. 1ರಿಂದ 8ನೇ ತರಗತಿಗಳ ಶಾಲೆಗಳು ಫೆಬ್ರವರಿ 2026ರ ವರೆಗೆ ಮುಚ್ಚಲ್ಪಡುತ್ತವೆ. 9ರಿಂದ 12ನೇ ತರಗತಿಗಳ ಶಾಲೆಗಳು ಡಿಸೆಂಬರ್ 11, 2025ರಿಂದ ಫೆಬ್ರವರಿ 22, 2026ರ ವರೆಗೆ ಮುಚ್ಚಲ್ಪಡುತ್ತವೆ. ಇನ್ನೂ ಶಾಲಾ ರಜೆ ವಿಸ್ತರಿಸಿರುವುದರಿಂದ ವಿದ್ಯಾರ್ಥಿಗಳಿಗೆ ರಜೆಗಳ ಹಬ್ಬದೂಟವನ್ನೇ ಬಡಿಸಿದಂತಾಗಿದೆ.
ಚಳಿಗಾಲದ ರಜೆಯ ವೇಳಾಪಟ್ಟಿ
* ಪೂರ್ವ ಪ್ರಾಥಮಿಕ: 26 ನವೆಂಬರ್ 2025 - 28 ಫೆಬ್ರವರಿ 2026
* 1-8 ತರಗತಿ ತರಗತಿಗಳು: 1 ಡಿಸೆಂಬರ್ 2025 - 28 ಫೆಬ್ರವರಿ 2026
* 9-12 ತರಗತಿಗಳು: 11 ಡಿಸೆಂಬರ್ 2025 - 22 ಫೆಬ್ರವರಿ 2026
ಸಾಮಾನ್ಯವಾಗಿ ಚಳಿಗಾಲದ ಸಂದರ್ಭದಲ್ಲಿ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಶಾಲೆಗಳಿಗೆ ಸಾಲು ರಜೆಗಳನ್ನೇ ನೀಡಲಾಗುತ್ತದೆ. ಕಳೆದ ಬಾರಿಯೂ ಕೂಡ ಭೀಕರ ಚಳಿ ಹಿನ್ನೆಲೆ ಈ ಭಾಗಗಳಲ್ಲಿ ಶಾಲೆಗಳಿಗೆ ತಿಂಗಳುಗಟ್ಟಲೇ ರಜೆ ಘೋಷಣೆ ಮಾಡಲಾಗಿದ್ದು, ಆನ್ಲೈನ್ ತರಗತಿಗಳನ್ನು ನಡೆಸಲಾಗಿತ್ತು. ಈಗಲೂ ಮುಂದಿನ ದಿನಗಳಲ್ಲಿ ಚಳಿ ಹೀಗೆ ಹೆಚ್ಚಾದರೆ, ರಜೆ ಮತ್ತೆ ವಿಸ್ತರಣೆಯಾಗಿ ಆನ್ಲೈನ್ ತರಗತಿ ಮೊರೆ ಹೋಗುವ ಸಾಧ್ಯತೆಯಿದೆ. ಯಾಕಂದ್ರೆ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆ ಆಗಬಾರದು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications