School Holidays: ಶಾಲೆಗಳಿಗೆ ರಜೆ ಘೋಷಣೆ; ಎಲ್ಲೆಲ್ಲಿ ಎಷ್ಟು ದಿನ ತಿಳಿಯಿರಿ
School Holidays: ಪರೀಕ್ಷೆಗಳು ಮುಕ್ತಾಯದ ಬಳಿಕ, ಹಬ್ಬಗಳ ಸಂದರ್ಭಗಳಲ್ಲಿ ಹಾಗೂ ಅತೀ ಹೆಚ್ಚು ಮಳೆಯಾಗುವ ಪ್ರದೇಶಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗುತ್ತದೆ. ಆದರೆ, ಇದೀಗ ದಿನದಿಂದ ದಿನಕ್ಕೆ ಚಳಿಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಭಾಗದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಾಗಾದರೆ ಯಾವ್ಯಾವ ರಾಜ್ಯಗಳಲ್ಲಿ ಎಷ್ಟು ದಿನ ರಜೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಡಿಸೆಂಬರ್ ಕೊನೆಯ ವಾರದಲ್ಲಿ ಉತ್ತರ ಭಾರತದಲ್ಲಿ ದಟ್ಟ ಮಂಜಿನ ಜೊತೆ ಚಳಿ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಹಲವು ರಾಜ್ಯಗಳಲ್ಲಿ ಶಾಳೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಈವರೆಗೆ ಮಧ್ಯಪ್ರದೇಶ, ಛತ್ತೀಸ್‌ಗಢ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರ ಭಾಗಗಳಲ್ಲಿ ಶಾಲೆಗಳಿಗೆ ಚಳಿಗಾಲದ ರಜೆಯನ್ನು ಘೋಷಣೆ ಮಾಡಲಾಗಿದೆ. ಮತ್ತೊಂದೆಡೆ ಮಾಲಿನ್ಯ ಹೆಚ್ಚಳ ಹಿನ್ನೆಲೆ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಗ್ರೇಟರ್ ನೋಯ್ಡಾ ಮತ್ತು ಗಾಜಿಯಾಬಾದ್‌ನಲ್ಲಿ 5ನೇ ತರಗತಿಯವರೆಗಿನ ತಗರಗತಿಗಳನ್ನು ಮುಚ್ಚಲಾಗಿದೆ. ಇನ್ನು 5ನೇ ತರಗತಿ ಮೇಲ್ಪಟ್ಟ ಎಲ್ಲಾ ತರಗತಿಗಳಿಗೂ ಗ್ರೇಟರ್ ನೋಯ್ಡಾದಲ್ಲಿ ಶಾಲೆಗಳು ನಡೆಯುತ್ತವೆ.
ಮಧ್ಯಪ್ರದೇಶದಲ್ಲಿ ಡಿಸೆಂಬರ್ 31ರಿಂದ ಜನವರಿ 4, 2025ರ ವರೆಗೆ ಚಳಿಗಾಲ ಹಿನ್ನೆಲೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್ 5ರಂದು ಭಾನುವಾರ ಆಗಿರುವುದರಿಂದ ಶಾಲೆಗಳು ಜನವರಿ 6, 2025ರಂದು ಪುನರಾರಂಭಗೊಳ್ಳುತ್ತವೆ. ಪಂಜಾಬ್‌ನಲ್ಲಿ 2024ರ ಡಿಸೆಂಬರ್ 24ರಿಂದ 31ರ ವರೆಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇಲ್ಲಿನ ಶಾಲೆಗಳು 1 ಜನವರಿ 2025ರಂದು ಪುನರಾರಂಭಗೊಳ್ಳಲಿವೆ.
ಛತ್ತೀಸ್‌ಗಢದಲ್ಲಿ ಸರ್ಕಾರಿ ಶಾಲೆಗಳಿಗೆ ಡಿಸೆಂಬರ್ 23ರಿಂದ 28ರ ವರೆಗೆ 6 ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್ 29 ಭಾನುವಾರ ಆಗಿರುವುದರಿಂದ ಡಿಸೆಂಬರ್ 30ಕ್ಕೆ ಶಾಲೆ ಪುನಾರಂಭ ಆಗಲಿವೆ. ರಾಯ್‌ಪುರ ವಿಭಾಗದ ಕೇಂದ್ರೀಯ ವಿದ್ಯಾಲಯಗಳನ್ನು ಡಿಸೆಂಬರ್ 24ರಿಂದ 2025ರ ಜನವರಿ 2ರ ವರೆಗೆ ಮುಚ್ಚಲಾಗುತ್ತದೆ ಎಂದು ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ 5ನೇ ತರಗತಿಯವರೆಗಿನ ಶಾಲೆಗಳನ್ನು ಡಿಸೆಂಬರ್ 10 ರಿಂದ 2025ರ ಫೆಬ್ರವರಿ 28ರ ವರೆಗೆ ಮುಚ್ಚಲಾಗುವುದು. 6 ರಿಂದ 12ನೇ ತರಗತಿಯ ಶಾಲೆಗಳನ್ನು ಡಿಸೆಂಬರ್ 16ರಿಂದ 2025ರ ಫೆಬ್ರವರಿ 28ರ ವರೆಗೆ ಮುಚ್ಚಲಾಗುತ್ತದೆ ಎಂದು ತಿಳಿಸಿದೆ.
ನವದೆಹಲಿಯಲ್ಲಿ ಸರ್ಕಾರಿ ಶಾಲೆಗಳಿಗೆ ಇನ್ನೂ ರಜೆ ಘೋಷಣೆ ಮಾಡಿಲ್ಲ. ಆದ್ದರಿಂದ ಇಲ್ಲಿನ ಚಳಿಗಾಲದ ರಜಾ ದಿನಗಳು ಜನವರಿ ಮೊದಲ ವಾರದಿಂದ 15ರ ವರೆಗೆ ಇರಬಹುದೆಂದು ನಿರೀಕ್ಷಿಸಲಾಗಿದೆ. ಇನ್ನುಳಿದಂತೆ ಹೆಚ್ಚು ಚಳಿ ಇರುವಂತಹ ಹರಿಯಾಣ, ರಾಜಸ್ಥಾನ ಮತ್ತು ಬಿಹಾರದಲ್ಲಿ ಶಾಲೆಗಳಿಗೆ ಇನ್ನೂ ಅಧಿಕೃತವಾಗಿ ರಜೆ ಘೋಷಣೆ ಮಾಡಿಲ್ಲ.
This is an AI generated image through WISE
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications