School Holidays: ರಣಭೀಕರ ಚಳಿಗೆ ಬೆದರಿದ ಜನ; ಶಾಲೆಗಳಿಗೆ ಜನವರಿ 1ರಿಂದ 15ರ ವರೆಗೂ ರಜೆ ಘೋಷಣೆ

School Holidays: ಸಾಮಾನ್ಯವಾಗಿ ಪರೀಕ್ಷೆಗಳು ಮುಕ್ತಾಯದ ಬಳಿಕ, ಹಬ್ಬಗಳ ಸಂದರ್ಭಗಳಲ್ಲಿ ಹಾಗೂ ಅತೀ ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗುತ್ತದೆ. ಆದರೆ, ಇದೀಗ ದಿನದಿಂದ ದಿನಕ್ಕೆ ಚಳಿಯ ಪ್ರಮಾಣ ಹೆಚ್ಚಾಗುತ್ತಲಿದೆ. ಅದರಲ್ಲೂ ಉತ್ತರ ಭಾರತದಲ್ಲಿ ಮೇಲುಗೈ ಸಾಧಿಸಿದೆ. ಆದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಭಾಗದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಲ್ಲಿ ಎಷ್ಟು ದಿನ ರಜೆ ಎಂದು ತಿಳಿಯಿರಿ.

ಡಿಸೆಂಬರ್ ಅಂತ್ಯದಲ್ಲಿ ದೇಶದ ಎಲ್ಲಾ ರಾಜ್ಯಗಳಲ್ಲೂ ಕೂಡ ಚಳಿಯ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಕೆಲವು ಭಾಗಗಲ್ಲಿ ಬೆಳಗ್ಗೆ ಹಾಗೂ ಸಂಜೆ ವೇಳೆ ಚಳಿ ಇದ್ದರೆ, ಉತ್ತರ ಭಾರತದ ಬಹುತೇಕ ರಾಜ್ಯಗಳಲ್ಲಿ ಚಳಿಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ವಿದ್ಯರ್ಥಿಗಳ ಹಿತದೃಷ್ಟಿಯಿಂದ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

School Holidays Holiday Declaration in These States till January 15 From 1 know details

ಇಷ್ಟು ದಿನ ದಕ್ಷಿಣ ಭಾರತದಲ್ಲಿ ಚಳಿಯ ನಡುವೆಯೂ ಹಲವೆಡೆ ಮಳೆಯಾಗುತ್ತಿತ್ತು. ಇದೀಗ ಉತ್ತರ ಭಾರತದಲ್ಲೂ ಮಳೆ ಆರ್ಭಟ ಮುಂದುವರೆದಿದೆ. ಇನ್ನೂ ಈ ಭಾಗಗಳಲ್ಲಿ ಹಲವೆಡೆ ಭೀಕರ ಚಳಿ ಹಿನ್ನೆಲೆ ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳಿಗೆ ಅಲ್ಲಿ ಸರ್ಕಾರಗಳು ರಜೆ ಘೋಷಣೆ ಮಾಡಲಾಗಿದೆ. ಉತ್ತರ ಪ್ರದೇಶ ಮತ್ತು ಹರಿಯಾಣದಲ್ಲಿ ಭೀಕರ ಚಳಿಯ ನಡುವೆಯೂ ಧಾರಕಾರ ಮಳೆಯಾಗುತ್ತಿದೆ. ಪರಿಣಾಮ ಇಲ್ಲಿನ ಜನರು ತತ್ತರಿಸಿ ಹೋಗಿದ್ದಾರೆ.

ಈ ಹಿನ್ನಲೆ ಹರಿಯಾಣದಲ್ಲಿ ಮಕ್ಕಳ ಹಿತದೃಷ್ಟಿಯಿಂದ ಜನವರಿ 1ರಿಂದ 15ವರೆಗೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಚಳಿಗಾಲದ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್ ಬಂದರೆ ಸಾಕು ಉತ್ತರ ಭಾರತಕ್ಕೆ ಕೊರೆಯುವ ಚಳಿಯನ್ನು ಹೊರೆಯಂತೆ ಹೊತ್ತುಕೊಂಡುಬರುತ್ತದೆ. ಆದರೆ ಈ ಬಾರಿ ವಿಚಿತ್ರವೆಂಬಂತೆ ಕೊರೆಯುವ ಚಳಿ ಜೊತೆಗೆ ಬಿರುಗಾಳಿ ಮಳೆ ಕೂಡ ಎಂಟ್ರಿ ಕೊಟ್ಟ ಹಿನ್ನೆಲೆ ಈ ಭಾಗದ ಜನ ಬೆದರಿದ್ದಾರೆ.

ಈಗಾಗಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಮಳೆ ಆರ್ಭಟಿಸಿ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದೆ. ಇನ್ನು ಇದೀಗ ಭೀಕರ ಚಳಿ ನಡುವೆಯೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ದಕ್ಷಿಣ ಭಾರತದ ಹಲವೆಡೆ ಕೆಲವು ದಿನಗಳಿಂದ ಮಳೆ ಮಳೆ ಮುಂದುವರೆದಿದೆ. ಇನ್ನು ಇದೀಗ ಉತ್ತರ ಭಾರತದಲ್ಲೂ ಕೂಡ ಅದರಲ್ಲೂ ಹೆಚ್ಚು ಚಳಿ ಇರುವ ರಾಜ್ಯಗಳಲ್ಲಿ ದಟ್ಟ ಮಂಜಿನ ನಡುವೆಯೇ ಮಳೆ ಮುಂದುವರೆದಿದ್ದು, ಇದರಿಂದ ಜನರು ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮತ್ತೊಂದೆಡೆ ಸದ್ಯದ ಪರಿಸ್ಥತಿಯಲ್ಲಿ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸಲು ಪೋಷಕರು ಬಯಪಡುವಂತಾಗಿದೆ. ಈಗಾಗಲೇ ಉತ್ತರ ಭಾರತದ ಕೆಲವೆಡೆ ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+