School Holiday: ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಸೆಪ್ಟೆಂಬರ್ 3ರ ವರೆಗೂ ರಜೆ ಘೋಷಣೆ
School Holiday: ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ ಕಾರಣಾಂತರಗಳಿಂದ ಶಾಲಾ-ಕಾಲೇಜುಗಳಿಗೆ ಸಾಲು ರಜೆಗಳನ್ನೇ ನೀಡಲಾಗಿದೆ. ಹಾಗೆಯೇ ಇದೀಗ ಈ ಭಾಗಗಳಲ್ಲಿನ ಎಲ್ಲಾ ಶಾಲೆಗಳಿಗೆ ಸೆಪ್ಟೆಂಬರ್ 3ರ ವರೆಗೂ ರಜೆ ಘೋಷಣೆ ಮಾಡಲಾಗಿದೆ. ಹಾಗಾದ್ರೆ, ಎಲ್ಲೆಲ್ಲಿ ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ವಿಶೇಷ ಕಾರ್ಯಕ್ರಮಗಳು, ಸ್ಥಳೀಯ ಹಬ್ಬಗಳು, ಹವಾಮಾನ ವೈಪರಿತ್ಯದಂತಹ ಸಂದರ್ಭಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸ್ಥಳೀಯ ರಜೆಗಳು ಆಯಾ ಜಿಲ್ಲಾಡಳಿತ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೇಲೆ ನಿರ್ಧಾರ ಆಗಲಿವೆ. ಯಾಕಂದ್ರೆ, ಸ್ಥಳೀಯವಾಗಿ ಏನೇ ನಡೆದರೂ ಅವರಿಗೇ ಮೊದಲ ಗೊತ್ತಾಗೋದು. ಇದೀಗ ಎಲ್ಲಾ ಶಾಲೆಗಳಿಗೂ ರಜೆ ಘೋಷಣೆ ಮಾಡಿ ಈ ರಾಜ್ಯ ಸರ್ಕಾರ ಆದೇಶ ಹೊರಡಿಸಿವೆ.

ಭಾರೀ ಮಳೆ ಆದಂತಹ ಸಂದರ್ಭಗಳಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಹಲವೆಡೆ ಶಾಲೆಗಳಿಗೆ ಸಾಲು ರಜೆಗಳನ್ನೇ ಘೋಷಣೆ ಮಾಡಲಾಗಿದೆ. ಹಾಗೆಯೇ ಇದೀಗ ಭಾರೀ ಮಳೆ ಹಿನ್ನೆಲೆ ಪಂಜಾಬ್‌ನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಣಭೀಕರ ಮಳೆ ಮುಂದುವರೆದ ಹಿನ್ನೆಲೆ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದಾಗಿ ಪಂಜಾಬ್ ಸರ್ಕಾರವು ಶಾಲೆಗಳ ರಜೆ ವಿಸ್ತರಣೆ ಮಾಡಿದೆ.
ಪಂಜಾಬ್‌ನಲ್ಲಿ ಶಾಲಾ ರಜಾ ದಿನಗಳನ್ನು ಅಧಿಕೃತವಾಗಿ ಸೆಪ್ಟೆಂಬರ್ 3, 2025ರ ವರೆಗೆ ವಿಸ್ತರಣೆ ಮಾಡಲಾಗಿದೆ. ಪಂಜಾಬ್ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್, ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಅವರ ಸೂಚನೆ ಮೇರೆಗೆ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗಳಿಗೆ ರಜೆ ನೀಡಲಾಗಿದೆ. ಸೆಪ್ಟೆಂಬರ್ 3ರ ನಂತರವೇ ಶಾಲೆಗಳು ಮತ್ತೆ ತೆರೆಯಲ್ಪಡುತ್ತವೆ ಎಂದು ತಿಳಿದುಬಂದಿದೆ.
ಈಗಾಗಲೇ ರಣಭೀಕರ ಮಳೆ ಮುಂದುವರೆದ ಕಾರಣ, ಪಂಜಾಬ್‌ನಲ್ಲಿ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ಶಾಲೆಗಳಿಗೆ ಆಗಸ್ಟ್ 27ರಿಂದ 30ರ ವರೆಗೆ ರಜೆ ಘೋಷಣೆ ಮಾಡಲಾಗಿತ್ತು. ಒಂದು ವೇಳೆ ರಜೆ ಘೋಷಣೆ ಮಾಡದಿದ್ದರೆ, ಅಂತಹ ಶಾಲೆಗಳ ಶಿಕ್ಷಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ರಂದು ಪಂಜಾಬ್ ಸರ್ಕಾರ ಎಚ್ಚರಿಕೆ ನೀಡಿತ್ತು. ಸರ್ಕಾರದ ಸೂಚನೆಯಂತೆ ವಿದ್ಯಾರ್ಥಿಗಳ ಸುರಕ್ಷತೆಯನ್ನ ಮೊದಲ ಆದ್ಯತೆಯಾಗಿಟ್ಟುಕೊಂಡು ಅಧಿಕಾರಿಗಳು ಈ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಂಡು ರಜೆ ಘೋಷಣೆ ಮಾಡಿದ್ದರು.
ರಣಮಳೆಗೆ ಬೆದರಿದ ಜನ: ಮುಂಗಾರು ಮಳೆ ಆರ್ಭಟಕ್ಕೆ ದೇಶದ ಬಹುತೇಕ ರಾಜ್ಯಗಳ ಜನರು ತತ್ತರಿಸಿ ಹೋಗಿದ್ದಾರೆ. ಹಲವು ರಾಜ್ಯಗಳಲ್ಲಿ ಜಲಪ್ರಳಯ ಸಂಭವಿಸಿ ತುಂಬಾ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ ಕೆಲವರು ಮನೆ-ಮಠಗಳನ್ನು ಕಳೆದುಕೊಂಡು ಬೀದಿಗೆ ಬಂದಿರುವ ಉದಹಾರಣೆಗಳಿವೆ. ಈ ನಡುವೆಯೇ ಇದೀಗ ಮುಂದಿನ ದಿನಗಳಲ್ಲಿ ಮತ್ತೆ ಮುಂಗಾರು ಮಳೆ ಚುರುಕು ಪಡೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದ ಹಲವು ರಾಜ್ಯಗಳ ಜನರು, ಅದರಲ್ಲೂ ನದಿ ತೀರಗಳಮತಹ ಪ್ರದೇಶದಲ್ಲಿ ವಾಸ ಮಾಡುವವರು ಜೀವವವನ್ನು ಕೈಯಲ್ಲಿ ಹಿಡಿದು ಜೀವನ ಸಾಗಿಸುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ.












Click it and Unblock the Notifications