Holiday: ಆಗಸ್ಟ್ 27ರ ವರೆಗೆ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
School Holiday: ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ ಕಾರಣಾಂತರಗಳಿಂದ ಶಾಲೆ-ಕಾಲೇಜುಗಳಿಗೆ ಸಾಲು ರಜೆಗಳನ್ನೇ ಘೋಷಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ರಜೆಗಳ ಹಬ್ಬದೂಟವನ್ನೇ ಬಡಿಸಿದಂತಾಗಿದೆ. ಹಾಗೆಯೇ, ಇದೀಗ ಈ ಭಾಗಗಳಲ್ಲಿ ಆಗಸ್ಟ್ 27ರ ವರೆಗೆ ರಜೆ ಘೋಷಣೆ ಮಾಡಲಾಗಿದೆ. ಹಾಗಾದ್ರೆ, ಎಲ್ಲೆಲ್ಲಿ ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕರ್ನಾಟಕದಲ್ಲಿ ಪ್ರತಿಭಟನೆ, ಮಳೆಯಂತಹ ಸಂದರ್ಭಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ, ಇವುಗಳನ್ನು ಸರಿದೂಗಿಸುವ ಕೆಲಸಗಳು ಕೂಡ ನಡೆಯುತ್ತಿವೆ. ಅದರಲ್ಲೂ ಭಾರೀ ಮಳೆ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕರಾವಳಿ ಜಿಲ್ಲೆಗಳಲ್ಲೇ ಹೆಚ್ಚು ರಜೆಗಳನ್ನು ನೀಡಲಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ವಿದ್ಯಾಭ್ಯಾಸ ಹಿಂದುಳಿಯಬಾರದು ಎಂಬ ಕಾರಣಕ್ಕೆ ಶನಿವಾರ ಪೂರ್ತಿ ತರಗತಿಗಳನ್ನು ನಡೆಸುವ ನಿರ್ಧಾರವನ್ನು ಸಹ ತೆಗೆದುಕೊಳ್ಳಲಾಗಿದೆ.

ಕರ್ನಾಟಕಕ್ಕೆ ಹೋಲಿಕೆ ಮಾಡಿದರೆ, ಬೇರೆ ರಾಜ್ಯಗಳಲ್ಲೇ ಹೆಚ್ಚು ರಜೆಗಳನ್ನು ನೀಡಲಾಗಿದೆ. ಮಳೆ, ವಿಶೇಷ ಕಾರ್ಯಕ್ರಮಗಳು, ಸ್ಥಳೀಯ ಹಬ್ಬಗಳ ವೇಳೆ ಶಾಲೆಗಳಿಗೆ ಸಾಲು ರಜೆಗಳನ್ನೇ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ರಜೆಗಳ ಹಬ್ಬದೂಟವನ್ನು ಬಡಿಸಿದಂತಾಗಿದೆ. ಈ ನಡುವೆಯೇ ಇದೀಗ ಆಗಸ್ಟ್ 17ರ ವರೆಗೆ ಈ ಭಾಗಗಳಲ್ಲಿ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇದೀಗ ದೇಶಾದ್ಯಂತ ಮುಂಗಾರು ಚುರುಕು ಪಡೆದಿದ್ದು, ರಣಭೀಕರ ಮಳೆ ಮುಂದುವರೆದಿದೆ. ಪರಿಣಾಮ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮತ್ತೊಂದೆಡೆ ಹಬ್ಬಗಳ ಹಿನ್ನೆಲೆ ದೇಶದ ಈ ಭಾಗಗಳ ಶಾಲೆಗಳಿಗೆ ಸಾಲು ರಜೆಗಳನ್ನೇ ಘೋಷಣೆ ಮಾಡಲಾಗಿದೆ.
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ರಾಜಸ್ಥಾನದ ಜೈಪುರ ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದೆ. ಅಲ್ಲದೆ, ಮುಂಜಾಗ್ರತಾಕ್ರವಾಗಿ ಈ ಭಾಗದ ಅಂಗನವಾಡಿ ಕೇಂದ್ರಗಳು ಹಾಗೂ 1ರಿಂದ 12ನೇ ತರಗತಿವರೆಗಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಆಗಸ್ಟ್ 25 ಮತ್ತು 26ರಂದು ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ.
ಈ ಎರಡು ದಿನ ವಿದ್ಯಾರ್ಥಿಗಳು ಮನೆಯಲ್ಲಿಯೇ ಇರುತ್ತಾರೆ. ಆದರೆ, ಶಿಕ್ಷಕರು ಮತ್ತು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಜಿತೇಂದ್ರ ಕುಮಾರ್ ಸೋನಿ ಅವರು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆ ಅತ್ಯಂತ ಮುಖ್ಯವಾಗಿದೆ ಎಂದು ಹೇಳಿದರು. ಜೊತೆಗೆ ನಿಯಮಗಳನ್ನು ಪಾಲಿಸದ ಸಂಸ್ಥೆಗಳಿಗೆ ವಿಪತ್ತು ನಿರ್ವಹಣಾ ಕಾಯ್ದೆ, 2005ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಅಂತಲೂ ಎಚ್ಚರಿಕೆ ನೀಡಿದರು.
ಆಗಸ್ಟ್ 27ರ ವರೆಗೆ ರಜೆ: ಅಲ್ಲದೆ, ರಾಜಸ್ಥಾನದ ಇತರ ಜಿಲ್ಲೆಗಳಾದ ಸಿಕರ್, ಕರೌಲಿ, ಕೋಟಾ, ಖೇತಲ್-ತಿಜಾರಾ, ಡುಂಗರ್‌ಪುರ್, ಚಿತ್ತೋರ್‌ಗಢ, ಅಜ್ಮೀರ್, ಕೊಟ್‌ಪುಟ್ಲಿ-ಬಹ್ರೋರ್, ಸಿರೋಹಿ, ಬುಂಡಿ, ಭಿಲ್ವಾರಾ, ಉದಯಪುರ, ಸವಾಯಿ ಮಾಧೋಪುರ್, ಅಲ್ವಾರ್, ಜೈಪುರ್, ದೌಸಾ ಮತ್ತು ದಿದ್ವಾನಾ-ಕುಚಮನ್‌ನಲ್ಲಿನ ಶಾಲೆಗಳು ಆಗಸ್ಟ್ 25ರಿಂದ 27ರ ವರೆಗೆ ಮುಚ್ಚಲ್ಪಡಲಿವೆ ಎಂದು ತಿಳಿಸಿದೆ.
ಇಂದು ರಜೆ ಘೋಷಣೆ: ಸೆಪ್ಟೆಂಬರ್ 27ರಂದು ಗಣೇಶ ಹಬ್ಬವನ್ನು ಇಡೀ ದೇಶಾದ್ಯಂತ ಆಚರಣೆ ಮಾಡಲಾಗುತ್ತದೆ. ಈ ವೇಳೆ ಶಾಲಾ-ಕಾಲೇಜುಗಳಿಗೂ ಸಹ ರಜೆ ನೀಡಲಾಗುತ್ತದೆ. ಅದರಲ್ಲೂ ವಿಶೇಷವಾಗಿ ಮಹಾರಾಷ್ಟ್ರದ ಮುಂಬೈನಲ್ಲಿ ಇಂದು (ಆಗಸ್ಟ್ 25) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮುಂದುವರೆದ ಭಾರೀ ಮಳೆಯಿಂದ ರಜೆ ಘೋಷಣೆ: ಹವಾಮಾನ ವೈಪರಿತ್ಯ ಹಿನ್ನೆಲೆ ಜಮ್ಮು ವಿಭಾಗದಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಇಂದು (ಆಗಸ್ಟ್ 25) ರಜೆ ಘೋಷಣೆ ಮಾಡಲಾಗಿದೆ. ಜಂಟಿ ಶಿಕ್ಷಣ ನಿರ್ದೇಶಕರು ಮುಂಜಾಗ್ರತಾ ಕ್ರಮವಾಗಿ ಈ ಆದೇಶವನ್ನು ಹೊರಡಿಸಿದ್ದಾರೆ.
ಅದೇ ರೀತಿಯಲ್ಲಿ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಇಂದು ರಜೆ ಘೋಷಣೆ ಮಾಡಲಾಗಿದೆ. ಈ ಆದೇಶ 1 ರಿಂದ 12 ನೇ ತರಗತಿಯವರೆಗಿನ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ಅನ್ವಯ ಆಗಲಿದೆ. ಅಲ್ಲದೆ, ಹಿಮಾಚಲ ಪ್ರದೇಶದ ನಾಲ್ಕು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಗಣೇಶ ಚತುರ್ಥಿ ಆಗಸ್ಟ್ 27, 2025ರಂದು ನಡೆಯಲಿದ್ದು, ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶ ಮತ್ತು ತೆಲಂಗಾಣದಂತಹ ರಾಜ್ಯಗಳು ದೊಡ್ಡ ಮಟ್ಟದಲ್ಲಿ ಹಬ್ಬವನ್ನು ಆಚರಣೆ ಮಾಡಲಿವೆ. ಈ ರಾಜ್ಯಗಳಾದ್ಯಂತ ಶಾಲೆಗಳು ಮತ್ತು ಕಾಲೇಜುಗಳು ಈ ದಿನದಂದು ಮುಚ್ಚಲ್ಪಟ್ಟಿರುತ್ತವೆ.












Click it and Unblock the Notifications