Jharkhand Assembly Election 2024: ಸೀಟು ಹಂಚಿಕೆ ಬಗ್ಗೆ ಮಹತ್ವದ ಸುಳಿವು ನೀಡಿದ ಕಾಂಗ್ರೆಸ್‌ ಅಧ್ಯಕ್ಷ

Jharkhand Assembly Election 2024: ಈಗಾಗಲೇ ಹರಿಯಾಣದ 91 ಹಾಗೂ ಜಮ್ಮು-ಕಾಶ್ಮೀರದ 91 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಫಲಿತಾಂಶ ಕೂಡ ಹೊರಬಿದ್ದಿದೆ. ಇನ್ನು ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳಲ್ಲೂ ಸೀಟು ಹಂಚಿಕೆ ಚರ್ಚೆಗಳು ಭಾರೀ ಜೋರಾಗಿ ನಡೆಯುತ್ತಿವೆ.

ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮಾದರಿ ನೀತಿ ಸಂಹಿತೆ ಜಾರಿಯಾದ ಬಳಿಕ, ಮೈತ್ರಿ ಪಕ್ಷಗಳೊಂದಿಗಿನ ಸೀಟು ಹಂಚಿಕೆ ಬಗ್ಗೆ ನಿರ್ಧರಿಸಲಾಗುವುದು ಎಂದು ಜಾರ್ಖಂಡ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೇಶವ್ ಮಹ್ತೊ ಕಮಲೇಶ್ ಇಂದು (ಅಕ್ಟೋಬರ್‌ 12) ಹೇಳಿದರು.

Seat sharing in Jharkhand After Election Code of Conduct Implementation Cogress President

ಈ ವರ್ಷಾಂತ್ಯದಲ್ಲಿ 81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಗೆ ಚುನಾವಣೆ ನಡೆಯುವ ಮುನ್ಸೂಚನೆ ಸಿಕ್ಕಿದ್ದು, ಜನವರಿ 5, 2025ರೊಳಗೆ ಚುನಾವಣೆ ಅಂತ್ಯ ಆಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಸುದ್ದಿಗಾರರೊಂದಿಗೆ ಮಾತನಾಡಿದ ಮಹ್ತೊ ಅವರು, "ಮಾದರಿ ನೀತಿ ಸಂಹಿತೆ ಜಾರಿಯಾದ ಬಳಿಕ ಸೀಟು ಹಂಚಿಕೆ ಬಗ್ಗೆ ಮಿತ್ರ ಪಕ್ಷಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು," ಎಂದು ಹೇಳಿದರು.

ಅಲ್ಲದೆ, ಮಿತ್ರ ಪಕ್ಷಗಳು ಒಗ್ಗಟ್ಟಾಗಿದ್ದು, ಜೆಎಂಎಂ ನೇತೃತ್ವದ ಸರ್ಕಾರದೊಂದಿಗಿವೆ ಎಂದು ಹೇಳಿದ್ದಾರೆ.
ಇನ್ನು ಈ ತಿಂಗಳು ಅಂದರೆ ಅಕ್ಟೋಬರ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಂಚಿಗೆ ಆಗಮಿಸಲಿದ್ದಾರೆ. ಆದರೆ ರಾಹುಲ್ ಗಾಂಧಿಯ ರಾಂಚಿ ಭೇಟಿಯ ದಿನಾಂಕ ಇನ್ನೂ ಅಂತಿಮ ಆಗಿಲ್ಲ ಅಂತಾ ಹೇಳಿದರು.

2019ರಲ್ಲಿ ನವೆಂಬರ್ 30 ಮತ್ತು ಡಿಸೆಂಬರ್ 20ರ ನಡುವೆ 5 ಹಂತಗಳಲ್ಲಿ 81 ವಿಧಾನಸಭಾ ಸ್ಥಾನಗಳಿಗೆ ಚುನಾವಣೆಗಳನ್ನು ನಡೆಸಲಾಗಿದ್ದು, ಡಿಸೆಂಬರ್ 23ರಂದು ಫಲಿತಾಂಶಗಳನ್ನು ಘೋಷಣೆ ಮಾಡಲಾಯಿತು. ಇನ್ನು ಈ ಬಾರಿ 2024 ವರ್ಷದ ಕೊನೆಯಲ್ಲಿ ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಮಹಾರಾಷ್ಟ್ರ ವಿಧಾನಸಭೆಯ ಅಧಿಕಾರಾವಧಿಯು ನವೆಂಬರ್ 25ರಂದು ಕೊನೆಗೊಳ್ಳಲಿದೆ. ಆದ್ದರಿಂದ ಇಲ್ಲಿ ನವೆಂಬರ್‌ 2ನೇ ವಾರದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿ ಎಂದು ಹೇಳಲಾಗುತ್ತಿದೆ. ಅಲ್ಲದೆ, ಜೊತೆಗೆ ಇದೇ ವೇಳೆ ಜಾರ್ಖಂಡ್‌ನಲ್ಲೂ ಚುನಾವಣೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇನ್ನು ಜಮ್ಮು ಮತ್ತು ಕಾಶ್ಮಿರ ವಿಧಾನಸಭೆ ಚುನಾವಣೆಯ ಮೂರು ಹಂತಗಳಲ್ಲಿ ಸೇರಿ ಒಟ್ಟಾರೆ ಶೇಕಡ 63.88ರಷ್ಟು ಮತದಾನವಾಗಿತ್ತು. ಮೊದಲ ಹಂತದಲ್ಲಿ ಶೇಕಡ 61.38ರಷ್ಟು, ಎರಡನೇ ಹಂತದಲ್ಲಿ 57.31 ರಷ್ಟು ಮತದಾನ ಆಗಿತ್ತು. ಅಕ್ಟೋಬರ್ 1ರಂದು ನಡೆದ ಮೂರನೇ ಹಂತದಲ್ಲಿ 69.69 ರಷ್ಟು ಮತದಾನವಾಗಿದೆ. ಸೆಪ್ಟೆಂಬರ್ 15, 18 ಹಾಗೂ ಅಕ್ಟೋಬರ್ 1ರಂದು ಮೂರು ಹಂತಗಳಲ್ಲಿ ಮತದಾನ ನಡೆದಿತ್ತು. ಇನ್ನು ಅಕ್ಟೋಬರ್‌ 8ರಂದು ಮತ ಎಣಿಕೆ ಮುಕ್ತಾಯವಾಗಿದ್ದು, ಜಮ್ಮು ಕಾಶ್ಮೀರದಲ್ಲಿ ನ್ಯಾಷನಲ್ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟಕ್ಕೆ 48 ಸೀಟ್‌ಗಳು ಸಿಕ್ಕಿದ್ದು, ಬಿಜೆಪಿಗೆ 29 ಸೀಟ್ ಗಳಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+