ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶಾದ್ಯಂತ ಇಂದಿನಿಂದ ಎರಡನೇ ಹಂತದ ಕೊರೊನಾ ಲಸಿಕೆ ಡ್ರೈ ರನ್

|
Google Oneindia Kannada News

ನವದೆಹಲಿ, ಜನವರಿ 08: ದೇಶಾದ್ಯಂತ ಇಂದಿನಿಂದ(ಜನವರಿ 08)ರಿಂದ ಎರಡನೇ ಹಂತದ ಕೊರೊನಾ ಲಸಿಕೆ ಡ್ರೈ ರನ್ ಕಾರ್ಯಕ್ರಮ ಆರಂಭವಾಗಲಿದೆ.

ಗುರುವಾರ ಆರೋಗ್ಯ ಸಚಿವ ಡಾ. ಹರ್ಷ್‌ವರ್ಧನ್ ಎಲ್ಲಾ ರಾಜ್ಯಗಳ ಆರೋಗ್ಯ ಮಂತ್ರಿಗಳು ಮತ್ತು ಯುಟಿಗಳೊಂದಿಗೆ ಸಂವಹನ ನಡೆಸಿದರು. ಸಭೆಯಲ್ಲಿ ಲಸಿಕೆ ಬಗ್ಗೆ ಯಾವುದೇ ತಪ್ಪು ಮಾಹಿತಿ ಹೋಗದಂತೆ ಎಚ್ಚರಿಕೆವಹಿಸಬೇಕು ಎಂದರು.

 ಕರ್ನಾಟಕದಲ್ಲಿ ಎರಡನೇ ಸುತ್ತಿನ ಲಸಿಕೆ ಡ್ರೈ ರನ್; ಏನೆಲ್ಲಾ ತಯಾರಿಯಾಗಿದೆ? ಕರ್ನಾಟಕದಲ್ಲಿ ಎರಡನೇ ಸುತ್ತಿನ ಲಸಿಕೆ ಡ್ರೈ ರನ್; ಏನೆಲ್ಲಾ ತಯಾರಿಯಾಗಿದೆ?

ಕೊವಿಡ್ 19ಲಸಿಕೆಗಳು ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ದೇಶದಲ್ಲಿ ಲಭ್ಯವಾಗುವ ಹಾದಿಯಲ್ಲಿದೆ. ಲಸಿಕೆಯಲ್ಲಿ ಯಾವುದೇ ಕಾರಣಕ್ಕೂ ಕೊರತೆ ಉಂಟಾಗಬಾರದು.

Second Covid Vaccination Dry Run Across Country Today

ತಡೆರಹಿತ ವಿತರಣೆಯಾಗುವ ಹಾಗೆ ನಾವು ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ, ಅಷ್ಟೇ ಅಲ್ಲದೆ ಜನವರಿ 08ರಿಂದ 33 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಡ್ರೈ ರನ್ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ನಾಲ್ಕು ರಾಜ್ಯಗಳಲ್ಲಿ ಕೊವಿಡ್ ಲಸಿಕೆ ಡ್ರೈ ರನ್ ಬಗ್ಗೆ ಪರಿಶೀಲಿಸಲಾಗಿದೆ.

ಕರ್ನಾಟಕದ 263 ಕಡೆಗಳಲ್ಲಿ ಲಸಿಕೆ ವಿತರಣೆಯ ತಾಲೀಮು (ಡ್ರೈ ರನ್) ನಡೆಯಲಿದೆ. ಲಸಿಕೆ ಬಂದ ಬಳಿಕ ವಿತರಣೆಯ ಕಾರ್ಯ ಜನಾಂದೋಲನದಂತೆ ನಡೆಯಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರೊಂದಿಗೆ ಗುರುವಾರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಲಸಿಕೆಯ ವಿತರಣೆಗೆ ಸಿದ್ಧತೆ, ಕೇಂದ್ರ ಸರ್ಕಾರದಿಂದ ಬೇಕಿರುವ ಸಹಾಯದ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ.

ಜನವರಿ 8ರಂದು ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಮೂರು ಕಡೆ ಲಸಿಕೆ ವಿತರಣೆಯ ತಾಲೀಮು ನಡೆಯಬೇಕಿತ್ತು. ಆದರೆ ನಮ್ಮ ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿ ಏಳು ಕಡೆಗಳಲ್ಲಿ ತಯಾರಿ ಮಾಡಿಕೊಳ್ಳಲಾಗಿದೆ ಎಂದರು.

ಪ್ರತಿ ಜಿಲ್ಲೆಯ ಏಳು ಕಡೆ, 263 ಪ್ರದೇಶಗಳಲ್ಲಿ ಲಸಿಕೆ ವಿತರಣೆ ನಡೆಯಲಿದೆ. 24 ಜಿಲ್ಲಾಸ್ಪತ್ರೆ, 20 ಮೆಡಿಕಲ್ ಕಾಲೇಜು, 43 ತಾಲೂಕು ಆಸ್ಪತ್ರೆ, 31 ಸಮುದಾಯ ಆರೋಗ್ಯ ಕೇಂದ್ರ, 87 ಪ್ರಾಥಮಿಕ ಆರೋಗ್ಯ ಕೇಂದ್ರ, 30 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, 28 ಖಾಸಗಿ ಆರೋಗ್ಯ ಕೇಂದ್ರಗಳಲ್ಲಿ ತಾಲೀಮು ನಡೆಯಲಿದೆ ಎಂದು ತಿಳಿಸಿದರು.

English summary
A second dry run to check the best way to vaccinate people against COVID-19 and plug loopholes in logistics and training will take place today from which a few states, which had undergone it earlier, will be exempt.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X