ಮೋದಿ ಭೇಟಿಗೂ ಮುನ್ನ ರಾಜಸ್ಥಾನದ ದೌಸಾದಲ್ಲಿ ಸೆಕ್ಷನ್ 144 ಜಾರಿ!
ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದ ದೌಸಾ ಜಿಲ್ಲೆಗೆ ಆಗಮಿಸುತ್ತಿದ್ದು ಜಿಲ್ಲೆಯಲ್ಲಿ ಸೆಕ್ಷನ್ 144 ವಿಧಿಸಲಾಗಿದೆ.
ಜೈಪುರ ಫೆಬ್ರವರಿ 12: ದೌಸಾದಲ್ಲಿ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯ ಸೊಹ್ನಾ-ದೌಸಾ ಭಾಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಫೆಬ್ರವರಿ 12) ಉದ್ಘಾಟಿಸಲು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಈ ಕಾರ್ಯಕ್ರಮವನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಆಯೋಜಿಸಿದೆ. ಅವರ ಭೇಟಿಗೂ ಮುನ್ನ ಪಟ್ಟಣದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಅಧಿಕಾರಿಗಳು ಮೂರು ಹಂತದ ಭದ್ರತೆಯನ್ನು ಏರ್ಪಡಿಸಿದ್ದಾರೆ.
ವಿವರಗಳನ್ನು ನೀಡಿದ ದೌಸಾ ಜಿಲ್ಲಾಧಿಕಾರಿ ಕಮರ್ ಚೌಧರಿ, ಆಡಳಿತ ದೌಸಾ ಜಿಲ್ಲೆಯಲ್ಲಿ ಸೆಕ್ಷನ್ 144 ವಿಧಿಸಿದೆ. ಅಧಿಕೃತ ಆದೇಶದ ಪ್ರಕಾರ, ಭಾನುವಾರ ಬೆಳಿಗ್ಗೆ 8:00 ರಿಂದ ಭಾನುವಾರ ರಾತ್ರಿ 8:00 ರವರೆಗೆ ಸೆಕ್ಷನ್ 144 ಅನ್ನು ಅನುಸರಿಸಬೇಕು. ಪ್ರಧಾನಿ ಮೋದಿಯವರ ಭದ್ರತೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.
ನಿರ್ಬಂಧಗಳ ಪಟ್ಟಿ ಹೀಗಿದೆ:
ಪ್ರಧಾನಿ ಮೋದಿಯವರ ಭೇಟಿಯ ಮೊದಲು ಮತ್ತು ನಂತರ ಜಿಲ್ಲೆಯಲ್ಲಿ ಯಾವುದೇ ಪ್ರಮುಖ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದಿಲ್ಲ.
ಪ್ರದೇಶದಲ್ಲಿ ಡ್ರೋನ್ ಕ್ಯಾಮೆರಾಗಳನ್ನು ಅನುಮತಿಸಲಾಗುವುದಿಲ್ಲ.
ಸೆಕ್ಷನ್ 144 ರ ಅನುಸರಿಸದವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ.

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯ 246-ಕಿಮೀ ದೆಹಲಿ-ದೌಸಾ-ಲಾಲ್ಸೋಟ್ ಹೆದ್ದಾರಿಯನ್ನು ಪ್ರಧಾನಿ ಮೋದಿ ಅವರು ಇಂದು ಉದ್ಘಾಟಿಸಲಿದ್ದಾರೆ. ಹೊಸ ಹೆದ್ದಾರಿಯಿಂದ ಪ್ರಯಾಣಿಕರಿಗೆ ರಾಷ್ಟ್ರ ರಾಜಧಾನಿಯಿಂದ ಜೈಪುರಕ್ಕೆ ಪ್ರಯಾಣದ ಸಮಯ ಐದು ಗಂಟೆಗಳಿಂದ ಸುಮಾರು ಮೂರೂವರೆ ಗಂಟೆಗಳವರೆಗೆ ಕಡಿಮೆ ಆಗುತ್ತದೆ.
ಇದನ್ನು 12,150 ಕೋಟಿ ರೂಪಾಯಿಗಿಂತ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯ ಈ ಮೊದಲ ಪೂರ್ಣಗೊಂಡ ಭಾಗ ಇಡೀ ಪ್ರದೇಶದ ಆರ್ಥಿಕ ಅಭಿವೃದ್ಧಿಗೆ ಉತ್ತೇಜನವನ್ನು ನೀಡುತ್ತದೆ ಎಂದು ಪ್ರಧಾನ ಮಂತ್ರಿ ಕಚೇರಿ (PMO) ಹೇಳಿದೆ.
18,100 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
ಜೊತೆಗೆ ಪ್ರಧಾನಿ ಮೋದಿ ಅವರು ದೌಸಾದಿಂದ 18,100 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರಿನ ಯಲಹಂಕದ ಏರ್ ಫೋರ್ಸ್ ಸ್ಟೇಷನ್‌ನಲ್ಲಿ ಏರೋ ಇಂಡಿಯಾ 2023 ರ 14 ನೇ ಆವೃತ್ತಿಯನ್ನು ಉದ್ಘಾಟಿಸಲು ಸೋಮವಾರ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ 1,386 ಕಿಮೀ ಉದ್ದದೊಂದಿಗೆ ಭಾರತದ ಅತಿ ಉದ್ದವಾದ ಹೆದ್ದಾರಿಯಾಗಿದೆ. ಇದು ದೆಹಲಿ ಮತ್ತು ಮುಂಬೈ ನಡುವಿನ ಪ್ರಯಾಣದ ದೂರವನ್ನು ಶೇಕಡಾ 12 ರಷ್ಟು ಕಡಿಮೆ ಮಾಡುತ್ತದೆ. ಆದರೆ ಪ್ರಯಾಣದ ಸಮಯವನ್ನು ಶೇಕಡಾ 50 ರಷ್ಟು ಕಡಿತಗೊಳಿಸಲಾಗುವುದು. ಪ್ರಸ್ತುತ 24 ಗಂಟೆಗಳಿಂದ 12 ಗಂಟೆಗಳವರೆಗೆ ಪ್ರಯಾಣ ಸಮಯ ಕಡಿಮೆಯಾಗುತ್ತದೆ.
ಈ ಎಕ್ಸ್‌ಪ್ರೆಸ್‌ವೇ ದೆಹಲಿ, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್ ಮತ್ತು ಮಹಾರಾಷ್ಟ್ರದ ಆರು ರಾಜ್ಯಗಳ ಮೂಲಕ ಹಾದುಹೋಗುತ್ತದೆ ಮತ್ತು ಕೋಟಾ, ಇಂದೋರ್, ಜೈಪುರ, ಭೋಪಾಲ್, ವಡೋದರಾ ಮತ್ತು ಸೂರತ್‌ನಂತಹ ಪ್ರಮುಖ ನಗರಗಳನ್ನು ಸಂಪರ್ಕಿಸುತ್ತದೆ.












Click it and Unblock the Notifications