'ಲವ್ ಜಿಹಾದ್' ವಿವಾದ: ಕೋಮುಗಲಭೆಗಳ ಕಾರಣ ಉತ್ತರಕಾಶಿಯ ಪುರೋಲಾದಲ್ಲಿ ಸೆಕ್ಷನ್ 144 ಜಾರಿ
ಉತ್ತರಕಾಶಿ, ಜೂನ್.14: ಕಳೆದ ತಿಂಗಳು ಅಪ್ರಾಪ್ತ ಬಾಲಕಿಯನ್ನು ಅಪಹರಿಸಲು ಯತ್ನಿಸಿದ ಆರೋಪದ ಮೇಲೆ ಕೋಮು ಗಲಭೆಗಳಿಗೆ ಸಾಕ್ಷಿಯಾದ ಪುರೋಲಾದಲ್ಲಿ ಉತ್ತರಾಖಂಡದ ಉತ್ತರಕಾಶಿ ಜಿಲ್ಲಾಡಳಿತ ಸೆಕ್ಷನ್ 144 ಜಾರಿಗೊಳಿಸಿದೆ. ಪುರೋಲಾದಲ್ಲಿ ಮಹಾ ಪಂಚಾಯಿತಿ ನಡೆಸಲು ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ.
ಜಿಲ್ಲೆಯ ಗಿರಿಧಾಮವಾಗಿರುವ ಪುರೋಲಾದಲ್ಲಿ ಸೆಕ್ಷನ್ 144 ಸಿಆರ್‌ಪಿಸಿ ವಿಧಿಸಲಾಗಿದೆ ಎಂದು ಉತ್ತರಕಾಶಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಭಿಷೇಕ್ ರೋಹಿಲ್ಲಾ ತಿಳಿಸಿದ್ದಾರೆ. ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC) ಯ ಸೆಕ್ಷನ್ 144 ಒಂದು ಪ್ರದೇಶದಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಜನರ ಸಭೆಯನ್ನು ನಿಷೇಧಿಸುವ ಆದೇಶವನ್ನು ಹೊರಡಿಸಲು ಅಧಿಕಾರಿಗಳಿಗೆ ಅಧಿಕಾರ ನೀಡುತ್ತದೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಉತ್ತರಾಖಂಡ ಡಿಜಿಪಿ ಅಶೋಕ್ ಕುಮಾರ್ ಬುಧವಾರ ಹೇಳಿದ್ದಾರೆ. "ಜಿಲ್ಲಾ ಪೊಲೀಸರು ಮತ್ತು ಆಡಳಿತವು ಸಂಪೂರ್ಣ ಸಿದ್ಧವಾಗಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನಾವು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಕಾನೂನು ಉಲ್ಲಂಘಿಸಲು ಯಾರಿಗೂ ಅವಕಾಶ ನೀಡುವುದಿಲ್ಲ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಪ್ರಯತ್ನಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು" ಎಂದು ಎಚ್ಚರಿಕೆ ನೀಡಿದ್ದಾರೆ.
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಕಳೆದ ವಾರ ಸಚಿವಾಲಯದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದರು. ಈ ವೇಳೆ ಮುಂಬರುವ ಲವ್ ಜಿಹಾದ್ ಪ್ರಕರಣಗಳ ಬಗ್ಗೆ ಕಟ್ಟುನಿಟ್ಟಾಗಿ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. ರಾಜ್ಯ ಡಿಜಿಪಿ ಅಶೋಕ್ ಕುಮಾರ್, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ವಿ ಮುರುಗೇಶನ್ ಮತ್ತು ಗುಪ್ತಚರ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಉತ್ತರಕಾಶಿ ಪಟ್ಟಣದಲ್ಲಿ ಕಳೆದ ತಿಂಗಳು ಅಲ್ಪಸಂಖ್ಯಾತ ಸಮುದಾಯದ ಒಬ್ಬ ಸೇರಿದಂತೆ ಇಬ್ಬರು ಯುವಕರು 14 ವರ್ಷದ ಬಾಲಕಿಯನ್ನು ಅಪಹತಿಸಲು ಯತ್ನಿಸಿದ್ದಾರೆ ಎಂಬ ವಿಷಯವಾಗಿ ಕೋಮು ಗಲಭೆಗಳು ಉಂಟಾಗಿದ್ದವು. ಇದೆ ಕಾರಣಕ್ಕೆ ಇಬ್ಬರನ್ನೂ ಬಂಧಿಸಲಾಯಿತು. ಕಾನೂನನ್ನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುರುಗೇಶನ್ ಹೇಳಿದ್ದಾರೆ.
"ಇತ್ತೀಚೆಗೆ ಉತ್ತರಕಾಶಿ, ವಿಕಾಸ್ ನಗರ ಮತ್ತು ಇತರ ಪ್ರದೇಶಗಳಲ್ಲಿ ಓಡಿಹೋದ ಘಟನೆಗಳು ನಡೆದಿವೆ, ಸ್ಥಳೀಯ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ, ಎಫ್ಐಆರ್‌ಗಳನ್ನು ದಾಖಲಿಸಲಾಗಿದೆ. ಶಾಂತಿ ಸ್ಥಾಪನೆಗೆ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಯಾರೇ ಕಾನೂನು ಉಲ್ಲಂಘಿಸಿದರೂ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಈ ಬಗ್ಗೆ ತನಿಖೆ ನಡೆಯುತ್ತಿದೆ" ಎಂದು ಮಾಹಿತಿ ನೀಡಿದ್ದಾರೆ.
ಇನ್ನು, ರಾಜ್ಯಾದ್ಯಂತ ಹೆಚ್ಚುತ್ತಿರುವ "ಲವ್ ಜಿಹಾದ್" ಘಟನೆಗಳ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಗಂಗೋತ್ರಿಯಲ್ಲಿ ಅಂಗಡಿಗಳನ್ನು ಮುಚ್ಚಲಾಗಿತ್ತು. ಪ್ರತಿಭಟನೆಯಲ್ಲಿ ಭಾಗವಹಿಸಿದ ಸ್ಥಳೀಯ ವ್ಯಾಪಾರಿಗಳು ರಸ್ತೆ ಬದಿಯ ಸಣ್ಣ ವ್ಯಾಪಾರಗಳಲ್ಲಿ ತೊಡಗಿರುವ ಹೊರಗಿನಿಂದ ಬಂದವರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಇದು ಚಾರ್ ಧಾಮ್ ಯಾತ್ರಾ ಪಟ್ಟಣಗಳಲ್ಲಿ ಒಂದಾದ ಗಂಗೋತ್ರಿಯ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications