ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ಪ್ರಜಾಸತ್ತಾತ್ಮಕ ಶಕ್ತಿಗಳು ಒಂದಾಗಬೇಕು: ಎಂಕೆ ಸ್ಟಾಲಿನ್
ಚೆನ್ನೈ, ಜೂನ್. 21: ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ತಮಿಳುನಾಡಿನ ಜಾತ್ಯತೀತ ಪ್ರಜಾಸತ್ತಾತ್ಮಕ ಶಕ್ತಿಗಳ ಒಗ್ಗಟ್ಟು ಮತ್ತು ಯಶಸ್ಸನ್ನು ರಾಷ್ಟ್ರಮಟ್ಟದಲ್ಲಿ ಪುನರಾವರ್ತಿಸಬೇಕು ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತಿರುವಾರೂರಿನಲ್ಲಿ ಹೇಳಿದ್ದಾರೆ. ತಿರುವಾರೂರಿನಲ್ಲಿ ತಮ್ಮ ತಂದೆ ಮತ್ತು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಸ್ಮಾರಕವಾದ ಕಲೈಂಜರ್ ಕೊಟ್ಟಂ (Kalaignar Kottam) ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ್ದಾರೆ.
"ನಾವು ಈಗ ನಿರ್ಣಾಯಕ ಘಟ್ಟದಲ್ಲಿ ನಿಂತಿದ್ದೇವೆ. ದೇಶದಲ್ಲಿ ಪ್ರಜಾಪ್ರಭುತ್ವವನ್ನು ರಕ್ಷಿಸುವ ಕರ್ತವ್ಯವನ್ನು ಹೊಂದಿದ್ದೇವೆ. ನಾವು ಅದನ್ನು ಮಾಡಲು ವಿಫಲವಾದರೆ, 3,000 ರಿಂದ 4,000 ವರ್ಷಗಳ ಇತಿಹಾಸವಿರುವ ತಮಿಳುನಾಡು ನಾಶವಾಗುತ್ತದೆ. ಹೀಗಾಗಿ ಬಿಜೆಪಿಗೆ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ನೀಡುವುದು ತಮಿಳುನಾಡು, ತಮಿಳರು ಮತ್ತು ಭಾರತದ ಭವಿಷ್ಯಕ್ಕೆ ಹಾನಿಕರ" ಎಂದು ಎಂಕೆ ಸ್ಟಾಲಿನ್ ಹೇಳಿದ್ದಾರೆ.

ಬಿಜೆಪಿ ಮತ್ತೆ ಅಧಿಕಾರಕ್ಕೆ ಬರದಂತೆ ತಡೆಯಲು ಜಾತ್ಯತೀತ ಪ್ರಜಾಸತ್ತಾತ್ಮಕ ಶಕ್ತಿಗಳು ತಮಿಳುನಾಡಿನಲ್ಲಿ ಒಂದಾದ ಹಾಗೆ, ಅದೇ ರೀತಿಯ ಏಕೀಕೃತ ಕ್ರಮ ಮತ್ತು ಸಮನ್ವಯವನ್ನು ರಾಷ್ಟ್ರಮಟ್ಟದಲ್ಲಿ ಪುನರಾವರ್ತಿಸಬೇಕು. ನಾವು ಗೆಲ್ಲಬೇಕು ಮತ್ತು ಅದಕ್ಕೂ ಮೊದಲು ನಮಗೆ ಏಕತೆ ಬೇಕು. ದೇಶದಲ್ಲಿ ಪ್ರಜಾಪ್ರಭುತ್ವವನ್ನು ರಕ್ಷಿಸುವಲ್ಲಿ ಬಿಹಾರ ಮುಂದಾಳತ್ವ ವಹಿಸಿದೆ ಎಂದು ಸ್ಟಾಲಿನ್ ತಿಳಿಸಿದ್ದಾರೆ.
ಜೂನ್ 23 ರಂದು ಪಾಟ್ನಾದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕರೆದಿರುವ ಜಾತ್ಯತೀತ ಪ್ರಜಾಸತ್ತಾತ್ಮಕ ಶಕ್ತಿಗಳ ಮುಂಬರುವ ಸಭೆಯನ್ನು ಉಲ್ಲೇಖಿಸಿದೆ. ಬಿಜೆಪಿ ವಿರುದ್ಧ ಪ್ರತಿಪಕ್ಷಗಳನ್ನು ಒಂದಾಗಿಸಲು ಪ್ರಯತ್ನಿಸುತ್ತಿರುವ ನಿತೀಶ್ ಕುಮಾರ್ ಬಿಜೆಪಿಯೇತರ ಪಕ್ಷಗಳ ಸಭೆ ಕರೆದಿದ್ದಾರೆ.
"ದೇಶದಲ್ಲಿ 10 ವರ್ಷಗಳ ಬಿಜೆಪಿ ಆಡಳಿತದಲ್ಲಿ ಹಬ್ಬಿರುವ ಬೆಂಕಿಯನ್ನು ನಂದಿಸುವ ಜವಾಬ್ದಾರಿ ನಮ್ಮ ಮೇಲಿದೆ. ನಿಮ್ಮ ಆಶಯಗಳನ್ನು ಹೊತ್ತು ಸಭೆಗೆ ಹಾಜರಾಗುತ್ತೇನೆ. ಪಾಟ್ನಾದಲ್ಲಿ ಪ್ರಜಾಪ್ರಭುತ್ವದ ದೀಪ ಬೆಳಗಲಿದೆ. ಭಾರತದ ಭವಿಷ್ಯವನ್ನು ನಿರ್ಧರಿಸುವ ಲೋಕಸಭೆ ಚುನಾವಣೆಗೆ ನಾವು ಸಜ್ಜಾಗೋಣ" ಎಂದು ಸ್ಟಾಲಿನ್ ಕರೆ ನೀಡಿದ್ದಾರೆ.
ಎಂಕೆ ಸ್ಟಾಲಿನ್ ಅವರು ತಮ್ಮ ತಂದೆಯನ್ನು ಉತ್ತಮ ರಾಷ್ಟ್ರೀಯ ರಾಜಕೀಯ ನಾಯಕ ಎಂದು ಹೊಗಳಿದ್ದಾರೆ. ಅವರು ಪ್ರಧಾನ ಮಂತ್ರಿಗಳು ಮತ್ತು ರಾಷ್ಟ್ರಪತಿಗಳೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದರು. ದೇಶದಲ್ಲಿ ಪ್ರಮುಖ ರಾಜಕೀಯ ಬದಲಾವಣೆಗಳು ಮತ್ತು ಸರ್ಕಾರಗಳ ಬದಲಾವಣೆಗೆ ಅವರು ಕಾರಣರಾಗಿದ್ದರು ಎಂದು ಹೇಳಿದ್ದಾರೆ.
ಸ್ಮಾರಕವನ್ನು ಉದ್ಘಾಟಿಸಬೇಕಿದ್ದ ನಿತೀಶ್ ನಿತೀಶ್ ಕುಮಾರ್ ಅವರು ಆರೋಗ್ಯದ ಕಾರಣದಿಂದ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ. ಜೂನ್ 23 ರಂದು ಪಾಟ್ನಾದಲ್ಲಿ ನಡೆದ ಸಭೆಯನ್ನು ಉಲ್ಲೇಖಿಸಿದ ನಿತೀಶ್ ಕುಮಾರ್, ವಿರೋಧ ಪಕ್ಷಗಳು ಒಗ್ಗೂಡಿದರೆ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಆಡಳಿತವನ್ನು ಕೊನೆಗೊಳಿಸಬಹುದು ಎಂದು ತಿಳಿಸಿದ್ದಾರೆ.
ಕಲೈಂಜರ್ ಕೊಟ್ಟಂನಲ್ಲಿ 'ಮುತ್ತುವೇಲರ್ ನೂಲಗಂ' (ಗ್ರಂಥಾಲಯ)ವನ್ನು ಉದ್ಘಾಟಿಸಿದ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ಕರುಣಾನಿಧಿಯವರ ಸಾಮಾಜಿಕ ನ್ಯಾಯದ ಪರಂಪರೆಯನ್ನು ಮುನ್ನಡೆಸುವಂತೆ ಪ್ರಜಾಪ್ರಭುತ್ವ ಶಕ್ತಿಗಳಿಗೆ ಕರೆ ನೀಡಿ, ದಿವಂಗತ ದ್ರಾವಿಡ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಜೊತೆಗೆ ಎಂಕೆ ಸ್ಟಾಲಿನ್ ಅವರು ತಮ್ಮ ತಂದೆಯ ಪರಂಪರೆಯನ್ನು ಮುನ್ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ











Click it and Unblock the Notifications