ಐವರು ಲಷ್ಕರ್ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಅಥವಾ ಎಲ್‌ಒಸಿಯಲ್ಲಿ ಪೊಲೀಸರು ಮತ್ತು ಸೇನೆ ನಡೆಸಿದ ಎನ್‌ಕೌಂಟರ್ ಒಳನುಸುಳುವಿಕೆ ಕಾರ್ಯಾಚರಣೆಯಲ್ಲಿ ಐವರು ಲಷ್ಕರ್ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್ ನಲ್ಲಿ ಎನ್ ಕೌಂಟರ್ ನಡೆದಿದೆ. ಇಂದು ನಡೆದ ಆರಂಭಿಕ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಮತ್ತು ನಂತರದ ಗುಂಡಿನ ಕಾಳಗದಲ್ಲಿ ಇನ್ನೂ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಹತ್ಯೆಯಾದ ಭಯೋತ್ಪಾದಕರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಗೆ ಸೇರಿದವರಾಗಿದ್ದಾರೆ. ಈ ಹಿಂದೆ ಸೇನೆಯಿಂದ ಪ್ರತ್ಯೇಕವಾಗಿ ನಡೆಸಲಾಗಿದ್ದ ಒಳನುಸುಳುವಿಕೆ ವಿರುದ್ಧದ ಕಾರ್ಯಾಚರಣೆಯಲ್ಲಿ ಪೊಲೀಸರನ್ನು ಹೆಚ್ಚಾಗಿ ಬಳಸಿಕೊಳ್ಳಲಾಗುತ್ತಿದೆ, ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.
ಭಾರತಕ್ಕೆ ನುಗ್ಗುವ ಪ್ರಯತ್ನ
16 ಭಯೋತ್ಪಾದಕ ಲಾಂಚಿಂಗ್ ಪ್ಯಾಡ್‌ಗಳು ಎಲ್‌ಒಸಿಯಾದ್ಯಂತ ಇನ್ನೂ ಕಾರ್ಯನಿರ್ವಹಿಸುತ್ತಿವೆ ಮತ್ತು ಪಾಕಿಸ್ತಾನದಿಂದ ಭಯೋತ್ಪಾದಕರನ್ನು ಭಾರತಕ್ಕೆ ಕಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಜಮ್ಮ ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಉನ್ನತ ಅಧಿಕಾರಿಗಳು ಮತ್ತು ಭದ್ರತಾ ಏಜೆನ್ಸಿಗಳ ಸಭೆಯು ಶ್ರೀನಗರದಲ್ಲಿರುವ 15 ಕಾರ್ಪ್ಸ್‌ನ ಪ್ರಧಾನ ಕಚೇರಿಯಲ್ಲಿ ಬುಧವಾರ ನಡೆಯಿತು. ಕಾಶ್ಮೀರದಲ್ಲಿ ವಿದೇಶಿ ಭಯೋತ್ಪಾದಕರ ಪಾತ್ರವು ಸಭೆಯಲ್ಲಿ ದೊಡ್ಡ ಚರ್ಚೆಯ ಅಂಶಗಳಲ್ಲಿ ಒಂದಾಗಿದೆ.
"ಸ್ಥಳೀಯ ನೇಮಕಾತಿಗಳು ತೀವ್ರವಾಗಿ ಕಡಿಮೆಯಾಗಿರುವುದರಿಂದ ವಿದೇಶಿ ಭಯೋತ್ಪಾದಕರ ಸಂಖ್ಯೆ ಮತ್ತೆ ಹೆಚ್ಚಾಗಿದೆ" ಎಂದು ಅಧಿಕಾರಿಯೊಬ್ಬರು ಹೇಳಿದರು.
ಈ ವರ್ಷ ಕೇಂದ್ರಾಡಳಿತ ಪ್ರದೇಶದಲ್ಲಿ ಹತರಾದ 46 ಭಯೋತ್ಪಾದಕರ ಪೈಕಿ 37 ಮಂದಿ ಪಾಕಿಸ್ತಾನೀಯರು ಮತ್ತು ಒಂಬತ್ತು ಮಂದಿ ಮಾತ್ರ ಸ್ಥಳೀಯರು ಎಂದು ಅಧಿಕೃತ ಅಂಕಿ ಅಂಶಗಳು ಬಹಿರಂಗಪಡಿಸಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ 33 ವರ್ಷಗಳ ಭಯೋತ್ಪಾದನೆಯಲ್ಲಿ ವಿದೇಶಿ ಭಯೋತ್ಪಾದಕರ ಸಂಖ್ಯೆ ಸ್ಥಳೀಯ ಭಯೋತ್ಪಾದಕರಿಗಿಂತ ನಾಲ್ಕು ಪಟ್ಟು ಹೆಚ್ಚಿರುವುದು ಇದೇ ಮೊದಲು.
ಪ್ರಸ್ತುತ ಕಣಿವೆಯಲ್ಲಿ ಸುಮಾರು 130 ಭಯೋತ್ಪಾದಕರು ಕಾರ್ಯನಿರ್ವಹಿಸುತ್ತಿದ್ದಾರೆ, ಅದರಲ್ಲಿ ಅರ್ಧದಷ್ಟು ವಿದೇಶಿ ಭಯೋತ್ಪಾದಕರು ಎಂದು ಗೃಹ ಸಚಿವಾಲಯ ತಿಳಿಸಿದೆ.












Click it and Unblock the Notifications