ಕನ್ಹಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಅಸ್ತು ಎಂದ ದೆಹಲಿ ಸರ್ಕಾರ

ನವದೆಹಲಿ, ಫೆಬ್ರವರಿ 28 : ಮಹತ್ವದ ಬೆಳವಣಿಗೆಯೊಂದರಲ್ಲಿ ಕನ್ಹಯ್ಯ ಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ದೆಹಲಿ ಸರ್ಕಾರ ಒಪ್ಪಿಗೆ ನೀಡಿದೆ. 2016ರ ಫೆಬ್ರವರಿಯಲ್ಲಿ ಜೆಎನ್‌ಯು ಕ್ಯಾಂಪಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ರಾಷ್ಟ್ರ ವಿರೋಧಿ ಘೋಷಣೆ ಕೂಗಿದ್ದರು.

ರಾಷ್ಟ್ರ ವಿರೋಧಿ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 14ರಂದು ದೆಹಲಿ ಪೊಲೀಸರು ಚಾರ್ಜ್‌ ಶೀಟ್ ಸಲ್ಲಿಕೆ ಮಾಡಿದ್ದರು. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ದೆಹಲಿ ಸರ್ಕಾರದ ಒಪ್ಪಿಗೆಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದರು.

ಕನ್ಹಯ್ಯ ಕುಮಾರ್ ಮತ್ತು ಇತರ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ದೆಹಲಿ ಪೊಲೀಸರು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಪತ್ರ ಬರೆದಿದ್ದರು. ವರ್ಷಗಳಿಂದಲೂ ಇದು ದೆಹಲಿ ಸರ್ಕಾರದ ಮುಂದಿತ್ತು. ಈಗ ಒಪ್ಪಿಗೆ ನೀಡಲಾಗಿದೆ.

Sedition Case Delhi Govt Gives Permission To Prosecute Kanhaiya Kumar

2016ರಲ್ಲಿ ಜೆಎನ್‌ಯುನಲ್ಲಿ ಅಫ್ಜಲ್ ಗುರು ಸಾವಿನ ಸ್ಮರಣಾರರ್ಥ ನಡೆದ ಕಾರ್ಯಕ್ರಮದ ವೇಳೆ ರಾಷ್ಟ್ರ ವಿರೋಧಿ ಘೋಷಣೆ ಕೂಗಿದ್ದಾರೆ ಎಂಬುದು ಆರೋಪ. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಕನ್ಹಯ್ಯ ಕುಮಾರ್, ಉಮರ್ ಖಾಲಿದ್ ವಿರುದ್ಧ ರಾಜದ್ರೋಹದ ಪ್ರಕರಣ ದಾಖಲು ಮಾಡಲಾಗಿದೆ.

ನ್ಯಾಯಾಲಯ ಕಾನೂನು ಕ್ರಮ ಜರುಗಿಸಲು ಅಗತ್ಯವಾದ ಅನುಮತಿಯನ್ನು ಪಡೆದುಕೊಳ್ಳಿ. ಏಪ್ರಿಲ್ 3ರೊಳಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿ ಎಂದು ಸೂಚನೆ ನೀಡಿತ್ತು. ನ್ಯಾಯಾಲಯದ ಆದೇಶದ ಬಳಿಕ ದೆಹಲಿ ಸರ್ಕಾರ ಅನುಮತಿಯನ್ನು ನೀಡಿದೆ.

ಕನ್ಹಯ್ಯ ಟ್ವೀಟ್ : ದೆಹಲಿ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ ಬಳಿಕ ಕನ್ಹಯ್ಯ ಕುಮಾರ್ ಟ್ವೀಟ್ ಮಾಡಿದ್ದಾರೆ. "ಧನ್ಯವಾದಗಳು, ಈಗ ತ್ವರಿತವಾಗಿ ಪ್ರಕರಣದ ವಿಚಾರಣೆ ನಡೆಯುವಂತೆ ನೋಡಿಕೊಳ್ಳಿ" ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+