ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ಹಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಅಸ್ತು ಎಂದ ದೆಹಲಿ ಸರ್ಕಾರ

|
Google Oneindia Kannada News

ನವದೆಹಲಿ, ಫೆಬ್ರವರಿ 28 : ಮಹತ್ವದ ಬೆಳವಣಿಗೆಯೊಂದರಲ್ಲಿ ಕನ್ಹಯ್ಯ ಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ದೆಹಲಿ ಸರ್ಕಾರ ಒಪ್ಪಿಗೆ ನೀಡಿದೆ. 2016ರ ಫೆಬ್ರವರಿಯಲ್ಲಿ ಜೆಎನ್‌ಯು ಕ್ಯಾಂಪಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ರಾಷ್ಟ್ರ ವಿರೋಧಿ ಘೋಷಣೆ ಕೂಗಿದ್ದರು.

ರಾಷ್ಟ್ರ ವಿರೋಧಿ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 14ರಂದು ದೆಹಲಿ ಪೊಲೀಸರು ಚಾರ್ಜ್‌ ಶೀಟ್ ಸಲ್ಲಿಕೆ ಮಾಡಿದ್ದರು. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ದೆಹಲಿ ಸರ್ಕಾರದ ಒಪ್ಪಿಗೆಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದರು.

ವಿಶೇಷ ಲೇಖನ; 'ರಾಜದ್ರೋಹ' ಕಾಯ್ದೆ ಆಳ-ಅಗಲ ಏನು?ವಿಶೇಷ ಲೇಖನ; 'ರಾಜದ್ರೋಹ' ಕಾಯ್ದೆ ಆಳ-ಅಗಲ ಏನು?

ಕನ್ಹಯ್ಯ ಕುಮಾರ್ ಮತ್ತು ಇತರ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ದೆಹಲಿ ಪೊಲೀಸರು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಪತ್ರ ಬರೆದಿದ್ದರು. ವರ್ಷಗಳಿಂದಲೂ ಇದು ದೆಹಲಿ ಸರ್ಕಾರದ ಮುಂದಿತ್ತು. ಈಗ ಒಪ್ಪಿಗೆ ನೀಡಲಾಗಿದೆ.

ಕನ್ಹಯ್ಯ ವಿರುದ್ಧ ದೇಶದ್ರೋಹ ಪ್ರಕರಣ: ಮಧ್ಯ ಪ್ರವೇಶಕ್ಕೆ ಸುಪ್ರೀಂ ನಕಾರ ಕನ್ಹಯ್ಯ ವಿರುದ್ಧ ದೇಶದ್ರೋಹ ಪ್ರಕರಣ: ಮಧ್ಯ ಪ್ರವೇಶಕ್ಕೆ ಸುಪ್ರೀಂ ನಕಾರ

Sedition Case Delhi Govt Gives Permission To Prosecute Kanhaiya Kumar

2016ರಲ್ಲಿ ಜೆಎನ್‌ಯುನಲ್ಲಿ ಅಫ್ಜಲ್ ಗುರು ಸಾವಿನ ಸ್ಮರಣಾರರ್ಥ ನಡೆದ ಕಾರ್ಯಕ್ರಮದ ವೇಳೆ ರಾಷ್ಟ್ರ ವಿರೋಧಿ ಘೋಷಣೆ ಕೂಗಿದ್ದಾರೆ ಎಂಬುದು ಆರೋಪ. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಕನ್ಹಯ್ಯ ಕುಮಾರ್, ಉಮರ್ ಖಾಲಿದ್ ವಿರುದ್ಧ ರಾಜದ್ರೋಹದ ಪ್ರಕರಣ ದಾಖಲು ಮಾಡಲಾಗಿದೆ.

ಫೋರ್ಬ್ಸ್ ಭವಿಷ್ಯದ ಪ್ರಭಾವಿಗಳ ಪಟ್ಟಿಯಲ್ಲಿ ಪ್ರಶಾಂತ್, ಕನ್ಹಯ್ಯ ಫೋರ್ಬ್ಸ್ ಭವಿಷ್ಯದ ಪ್ರಭಾವಿಗಳ ಪಟ್ಟಿಯಲ್ಲಿ ಪ್ರಶಾಂತ್, ಕನ್ಹಯ್ಯ

ನ್ಯಾಯಾಲಯ ಕಾನೂನು ಕ್ರಮ ಜರುಗಿಸಲು ಅಗತ್ಯವಾದ ಅನುಮತಿಯನ್ನು ಪಡೆದುಕೊಳ್ಳಿ. ಏಪ್ರಿಲ್ 3ರೊಳಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿ ಎಂದು ಸೂಚನೆ ನೀಡಿತ್ತು. ನ್ಯಾಯಾಲಯದ ಆದೇಶದ ಬಳಿಕ ದೆಹಲಿ ಸರ್ಕಾರ ಅನುಮತಿಯನ್ನು ನೀಡಿದೆ.

ಕನ್ಹಯ್ಯ ಟ್ವೀಟ್ : ದೆಹಲಿ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ ಬಳಿಕ ಕನ್ಹಯ್ಯ ಕುಮಾರ್ ಟ್ವೀಟ್ ಮಾಡಿದ್ದಾರೆ. "ಧನ್ಯವಾದಗಳು, ಈಗ ತ್ವರಿತವಾಗಿ ಪ್ರಕರಣದ ವಿಚಾರಣೆ ನಡೆಯುವಂತೆ ನೋಡಿಕೊಳ್ಳಿ" ಎಂದು ಹೇಳಿದ್ದಾರೆ.

English summary
Delhi government gave permission to the city police to prosecute Kanhaiya Kumar in sedition case. Kanhaiya Kumar accused of leading a procession in JNU that chanted anti-national slogans in 2016.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X