ಡೀಸೆಲ್ ವಾಹನಗಳ ಮೇಲೆ 10% ಹೆಚ್ಚುವರಿ ಜಿಎಸ್‌ಟಿ : ನಿತಿನ್ ಗಡ್ಕರಿ ಸ್ಪಷ್ಟನೆ
ವಾಯು ಮಾಲಿನ್ಯವನ್ನು ತಗ್ಗಿಸುವ ಸಲುವಾಗಿ ಡೀಸೆಲ್ ವಾಹನಗಳು ಮತ್ತು ಜೆನ್‌ಸೆಟ್‌ಗಳ ಮೇಲೆ 10% ಹೆಚ್ಚುವರಿ ಜಿಎಸ್‌ಟಿ ರೂಪದಲ್ಲಿ 'ಮಾಲಿನ್ಯ ತೆರಿಗೆ'ಯನ್ನು ಕೋರುವುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಂಗಳವಾರ ಹೇಳಿದ್ದಾರೆ ಎಂದು ವರದಿಯಾಗಿದೆ.
ಈ ಬಗ್ಗೆ ವ್ಯಾಪಕ ವಿರೋಧ ವ್ಯಕ್ತವಾದ ನಂತರ ಸ್ಪಷ್ಟನೆ ನೀಡಿದ ನಿತಿನ್ ಗಡ್ಕರಿ, ಅಂತಹ ಯಾವುದೇ ಪ್ರಸ್ತಾಪವು ಪ್ರಸ್ತುತ ಸರ್ಕಾರದ ಸಕ್ರಿಯ ಪರಿಗಣನೆಯಲ್ಲಿಲ್ಲ ಎಂದು ಅವರು ಟ್ವೀಟ್ ಮಾಡಿದ್ದಾರೆ ಮತ್ತು ಸ್ಪಷ್ಟಪಡಿಸಿದ್ದಾರೆ.

ನವದೆಹಲಿಯಲ್ಲಿ 63 ನೇ ವಾರ್ಷಿಕ ಎಸ್‌ಐಎಎಂ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು, ಹೆಚ್ಚುತ್ತಿರುವ ಮಾಲಿನ್ಯದ ಮಟ್ಟವು ನಾಗರಿಕರ ಆರೋಗ್ಯಕ್ಕೆ ಅಪಾಯವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಡೀಸೆಲ್ ವಾಹನದ ಮೇಲೆ ಹೆಚ್ಚು ಜಿಎಸ್‌ಟಿ
'ಡೀಸೆಲ್ ಚಾಲಿತ ವಾಹನಗಳ ಮೇಲೆ ಹೆಚ್ಚುವರಿಯಾಗಿ ಶೇ 10ರಷ್ಟು ಜಿಎಸ್‌ಟಿ ಹಾಕುವಂತೆ ನಾನು ಇಂದು ಸಂಜೆ ಹಣಕಾಸು ಸಚಿವರಿಗೆ ಪತ್ರವನ್ನು ನೀಡಲಿದ್ದೇನೆ' ಎಂದು ಗಡ್ಕರಿ ಹೇಳಿದ್ದಾರೆ. ದೇಶದ ಬಹುತೇಕ ವಾಣಿಜ್ಯ ವಾಹನಗಳು ಪ್ರಸ್ತುತ ಡೀಸೆಲ್‌ನಲ್ಲಿ ಚಲಿಸುತ್ತಿವೆ ಇದು ವಾಹನ ಸವಾರರ ಆತಂಕಕ್ಕೆ ಕಾರಣವಾಗಿತ್ತು.
ಪ್ರಯಾಣಿಕ ವಾಹನ ವಿಭಾಗದಲ್ಲಿ, ಮಾರುತಿ ಸುಜುಕಿ ಇಂಡಿಯಾ ಮತ್ತು ಹೋಂಡಾ ಸೇರಿದಂತೆ ವಿವಿಧ ಕಾರು ತಯಾರಕರು ಈಗಾಗಲೇ ಡೀಸೆಲ್ ಕಾರುಗಳ ಉತ್ಪಾದನೆಯನ್ನು ನಿಲ್ಲಿಸಿದ್ದಾರೆ. ದೇಶದಲ್ಲಿ ಈಗಾಗಲೇ ಡೀಸೆಲ್ ಕಾರುಗಳ ಕೊಡುಗೆ ತೀವ್ರವಾಗಿ ಕುಸಿದಿದ್ದು, ತಯಾರಕರು ಮಾರುಕಟ್ಟೆಯಲ್ಲಿ ಅವುಗಳನ್ನು ಮಾರಾಟ ಮಾಡುವುದನ್ನು ನಿಲ್ಲಿಸಬೇಕಾಗಿದೆ ಎಂದು ಗಡ್ಕರಿ ಹೇಳಿದರು.
ಡೀಸೆಲ್ ಅನ್ನು ಅಪಾಯಕಾರಿ ಇಂಧನ ಎಂದು ಕರೆದ ಅವರು, ಬೇಡಿಕೆಯನ್ನು ಪೂರೈಸಲು ದೇಶವು ಇಂಧನವನ್ನು ಆಮದು ಮಾಡಿಕೊಳ್ಳಬೇಕು ಎಂದು ಹೇಳಿದರು.
ಡೀಸೆಲ್‌ಗೆ ವಿದಾಯ ಹೇಳಿ
ದಯವಿಟ್ಟು ಡೀಸೆಲ್ ವಾಹನಗಳನ್ನು ತಯಾರಿಸುವುದನ್ನು ನಿಲ್ಲಿಸಿ, ಇಲ್ಲದಿದ್ದರೆ ನಾವು ಡೀಸೆಲ್ ಕಾರುಗಳನ್ನು ಮಾರಾಟ ಮಾಡಲು ಕಷ್ಟವಾಗುವಷ್ಟು ತೆರಿಗೆಯನ್ನು ಹೆಚ್ಚಿಸುತ್ತೇವೆ ಎಂದು ಗಡ್ಕರಿ ಹೇಳಿದರು. ಡೀಸೆಲ್ ಚಾಲಿತ ಜನರೇಟರ್‌ಗಳ ಮೇಲೆ ಹೆಚ್ಚುವರಿ ಜಿಎಸ್‌ಟಿಯನ್ನು ಪ್ರಸ್ತಾಪಿಸುವುದಾಗಿ ಅವರು ಹೇಳಿದರು.
ಆಟೋಮೊಬೈಲ್‌ಗಳಿಗೆ ಪ್ರಸ್ತುತ ಶೇಕಡಾ 28 ರಷ್ಟು ಜಿಎಸ್‌ಟಿ ತೆರಿಗೆ ವಿಧಿಸಲಾಗುತ್ತದೆ, ವಾಹನದ ಪ್ರಕಾರವನ್ನು ಅವಲಂಬಿಸಿ ಹೆಚ್ಚುವರಿ ಸೆಸ್ ಶೇಕಡಾ 1 ರಿಂದ 22 ರವರೆಗೆ ಇರುತ್ತದೆ.
There is an urgent need to clarify media reports suggesting an additional 10% GST on the sale of diesel vehicles. It is essential to clarify that there is no such proposal currently under active consideration by the government. In line with our commitments to achieve Carbon Net…
— Nitin Gadkari (@nitin_gadkari) September 12, 2023
ನಂತರ ಉಲ್ಟಾ ಹೊಡೆದ ನಿತಿನ್ ಗಡ್ಕರಿ
ಈ ಬಗ್ಗೆ ಭಾರಿ ವಿರೋಧ ವ್ಯಕ್ತವಾಗುತ್ತಿದ್ದಂತೆ ನಿತಿನ್ ಗಡ್ಕರಿ ಟ್ವೀಟ್ ಮಾಡಿದ್ದು, ಜಿಎಸ್‌ಟಿ ಹೆಚ್ಚಿಸುವ ಪ್ರಸ್ತಾವನೆ ಇಲ್ಲ ಎಂದ ಹೇಳಿದರು. ಟ್ವೀಟ್‌ನಲ್ಲಿ "ಡೀಸೆಲ್ ವಾಹನಗಳ ಮಾರಾಟದ ಮೇಲೆ ಹೆಚ್ಚುವರಿ 10% ಜಿಎಸ್‌ಟಿಯನ್ನು ಸೂಚಿಸುವ ಮಾಧ್ಯಮ ವರದಿಗಳನ್ನು ಸ್ಪಷ್ಟಪಡಿಸುವ ತುರ್ತು ಅಗತ್ಯವಿದೆ. ಅಂತಹ ಯಾವುದೇ ಪ್ರಸ್ತಾವನೆಯು ಪ್ರಸ್ತುತ ಸರ್ಕಾರದ ಸಕ್ರಿಯ ಪರಿಗಣನೆಯಲ್ಲಿಲ್ಲ ಎಂಬುದನ್ನು ಸ್ಪಷ್ಟಪಡಿಸುವುದು ಅತ್ಯಗತ್ಯ. 2070 ರ ವೇಳೆಗೆ ಕಾರ್ಬನ್ ನೆಟ್ ಶೂನ್ಯವನ್ನು ಸಾಧಿಸಲು ಮತ್ತು ಡೀಸೆಲ್‌ನಂತಹ ಅಪಾಯಕಾರಿ ಇಂಧನಗಳಿಂದ ಉಂಟಾಗುವ ವಾಯು ಮಾಲಿನ್ಯದ ಮಟ್ಟವನ್ನು ಕಡಿಮೆ ಮಾಡಲು ಮತ್ತು ಆಟೋಮೊಬೈಲ್ ಮಾರಾಟದಲ್ಲಿನ ತ್ವರಿತ ಬೆಳವಣಿಗೆಗೆ ಅನುಗುಣವಾಗಿ, ಸ್ವಚ್ಛ ಮತ್ತು ಹಸಿರು ಪರ್ಯಾಯ ಇಂಧನಗಳನ್ನು ಸಕ್ರಿಯವಾಗಿ ಅಳವಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ. ಈ ಇಂಧನಗಳು ಆಮದು ಬದಲಿಗಳಾಗಿರಬೇಕು, ವೆಚ್ಚ-ಪರಿಣಾಮಕಾರಿ, ಸ್ಥಳೀಯ ಮತ್ತು ಮಾಲಿನ್ಯ-ಮುಕ್ತವಾಗಿರಬೇಕು." ಎಂದು ಹೇಳಿದ್ದಾರೆ.
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications