Breaking; ಬಿಜೆಪಿ ಹಿರಿಯ ನಾಯಕ ಕೇಸರಿನಾಥ್ ತ್ರಿಪಾಠಿ ನಿಧನ
ಬೆಂಗಳೂರು, ಜನವರಿ 08; ಬಿಜೆಪಿಯ ಹಿರಿಯ ನಾಯಕ ಕೇಸರಿನಾಥ್ ತ್ರಿಪಾಠಿ ವಿಧಿವಶರಾದರು. ಸ್ಪೀಕರ್ ಆಗಿ, ರಾಜ್ಯಪಾಲರಾಗಿ ಅವರು ಕಾರ್ಯ ನಿರ್ವಹಣೆ ಮಾಡಿದ್ದರು.
88 ವರ್ಷದ ಕೇಸರಿನಾಥ್ ತ್ರಿಪಾಠಿ ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ಭಾನುವಾರ ಮುಂಜಾನೆ 5 ಗಂಟೆ ಸುಮಾರಿಗೆ ನಿಧನ ಹೊಂದಿದರು. ಹಲವು ದಿನಗಳಿಂದ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು.
ಕೇಸರಿನಾಥ್ ತ್ರಿಪಾಠಿಗೆ ಕೆಲವು ದಿನಗಳ ಹಿಂದೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಆಗ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದ ಹಿನ್ನಲೆಯಲ್ಲಿ ಡಿಸ್ಚಾರ್ಜ್ ಮಾಡಲಾಗಿತ್ತು.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಬಿಜೆಪಿ ನಾಯಕರು ಕೇಸರಿನಾಥ್ ತ್ರಿಪಾಠಿ ಅಗಲಿಕೆಗೆ ಸಂತಾಪವನ್ನು ಸೂಚಿಸಿದ್ದಾರೆ. 1934ರ ನವೆಂಬರ್ 10ರಂದು ಕೇಸರಿನಾಥ್ ತ್ರಿಪಾಠಿ ಅಲಹಾಬಾದ್ ಹೈಕೋರ್ಟ್‌ನ ಹಿರಿಯ ವಕೀಲರಾಗಿ ಸಹ ಕಾರ್ಯ ನಿರ್ವಹಣೆ ಮಾಡಿದ್ದರು.
ಪಂಡಿತ್ ಕೇಸರಿನಾಥ್ ತ್ರಿಪಾಠಿ ಪುತ್ರ ನೀರಜ್ ತ್ರಿಪಾಠಿ ಸೇರಿದಂತೆ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ನೀರಜ್ ತ್ರಿಪಾಠಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.
ಕೇಸರಿನಾಥ್ ತ್ರಿಪಾಠಿ 2014 ರಿಂದ 2019ರ ತನಕ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಕಾರ್ಯ ನಿರ್ವಹಣೆ ಮಾಡಿದ್ದರು. ಇದೇ ಸಂದರ್ಭದಲ್ಲಿ ಅವರಿಗೆ ಬಿಹಾರ, ಮೇಘಾಲಯ ಮತ್ತು ಮಿಜೋರಾಂನ ಹೆಚ್ಚುವರಿ ಹೊಣೆಯನ್ನು ನೀಡಲಾಗಿತ್ತು.
ಉತ್ತರ ಪ್ರದೇಶದ ಝಸಿ ವಿಧಾನಸಭಾ ಕ್ಷೇತ್ರದಿಂದ 1 ಬಾರಿ ಹಾಗೂ ಅಲಹಾಬಾದ್ ದಕ್ಷಿಣ ಕ್ಷೇತ್ರದಿಂದ ಐದು ಬಾರಿ ಸೇರಿ ಒಟ್ಟು 6 ಬಾರಿ ಉತ್ತರ ಪ್ರದೇಶ ವಿಧಾನಸಭೆಗೆ ಆಯ್ಕೆಯಾಗಿದ್ದ ಕೇಸರಿನಾಥ್ ತ್ರಿಪಾಠಿ ವಿಧಾನಸಭೆ ಸ್ಪೀಕರ್ ಆಗಿಯೂ ಕಾರ್ಯ ನಿರ್ವಹಣೆ ಮಾಡಿದ್ದರು.












Click it and Unblock the Notifications