L.K.Advani: ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು
ನವದೆಹಲಿ, ಜೂನ್ದ್, 27: ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ (93) ಅವರನ್ನು ಬುಧವಾರ ತಡರಾತ್ರಿ ಏಮ್ಸ್‌ಗೆ ದಾಖಲಿಸಲಾಗಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಮೂಲಗಳ ಪ್ರಕಾರಣ ಅವರು ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ 96 ವರ್ಷದ ಎಲ್.ಕೆ.ಅಡ್ವಾಣಿ ಅವರನ್ನು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನ ಖಾಸಗಿ ವಾರ್ಡ್‌ನಲ್ಲಿ ದಾಖಲಿಸಲಾಗಿದ್ದು, ಚಿಕಿತ್ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಇನ್ನೂ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ಅಡ್ವಾಣಿ ಅವರಿಗೆ ಈ ವರ್ಷದ ಆರಂಭದಲ್ಲಿ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಲಾಗಿದೆ. ಅಟಲ್ ಬಿಹಾರಿ ವಾಜಪೇಯಿ ಅವರ ಅಧಿಕಾರಾವಧಿಯಲ್ಲಿ ಅಡ್ವಾಣಿ ಅವರು ಭಾರತದ ಉಪ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು.
ಅಡ್ವಾಣಿ ಮತ್ತು ಜನಸಂಘದ ಇತರ ಹಲವು ಸದಸ್ಯರು 1980ರಲ್ಲಿ ಜನತಾ ಪಕ್ಷವನ್ನು ತೊರೆದು ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಸ್ಥಾಪಿಸಿದವರಾಗಿದ್ದಾರೆ.
ಭಾರತೀಯ ರಾಜಕಾರಣದಲ್ಲಿ ಎಲ್.ಕೆ.ಅಡ್ವಾಣಿ ಮಹತ್ವದ ರಾಜಕಾರಣಿಯಾಗಿ ಹೆಸರು ಮಾಡಿದ್ದಾರೆ. 2009ರ ಕೇಂದ್ರ ಲೋಕ ಸಭಾ ಚುನಾವಣೆಯಲ್ಲಿ ಎಲ್‌ಕೆ ಅಡ್ವಾಣಿ ಪ್ರಧಾನಮಂತ್ರಿ ಅಭ್ಯರ್ಥಿಯಾಗಿದ್ದರು. ಆದರೆ, 2009ರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಅದರ ಮೈತ್ರಿಕೂಟವು ಗೆಲುವು ಪಡೆಯಿತು. ಇದರಿಂದಾಗಿ ಎಲ್.ಕೆ.ಅಡ್ವಾಣಿ ಅವರು ಸುಷ್ಮಾ ಸ್ವರಾಜ್‌ಗೆ ವಿರೋಧ ಪಕ್ಷದ ನಾಯಕತ್ವವನ್ನು ಬಿಟ್ಟುಕೊಡಬೇಕಾಯಿತು.
ಎಲ್.ಕೆ.ಅಡ್ವಾಣಿ ಅವರು ಜೂನ್ 2002ರಿಂದ ಮೇ 2004ರವೆಎಗೆ ಭಾರತದ ಉಪ ಪ್ರಧಾನ ಮಂತ್ರಿ ಆಗಿದ್ದರು. 1999ರ ಅಕ್ಟೋಬರ್ ತಿಂಗಳಿನಿಂದ 2004ರ ಮೇ ತಿಂಗಳವರೆಗೆ ಕೇಂದ್ರ ಗೃಹ ಸಚಿವರಾಗಿದ್ದರು. ಹಲವು ಬಾರಿ ಬಿಜೆಪಿ ರಾಷ್ಟ್ರಧ್ಯಕ್ಷರಾಗಿದ್ದರು. 1986ರಿಂದ 1990ರವರೆಗೆ, 1993ರಿಂದ 1998ರವರೆಗೆ ಮತ್ತು 2004ರಿಂದ 2005ರವರೆಗೆ ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.












Click it and Unblock the Notifications