ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ ಹಿರಿಯ ಐಎಎಸ್ ಅಧಿಕಾರಿ ಅಮಾನತು

|
Google Oneindia Kannada News

ಪೋರ್ಟ್ ಬ್ಲೈರ್, ಅಕ್ಟೋಬರ್ 17: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಮಹಿಳೆ ಅತ್ಯಾಚಾರದ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಹಿರಿಯ ಅಧಿಕಾರಿ ಜಿತೇಂದ್ರ ನರೇನ್ ಅನ್ನು ಕೇಂದ್ರ ಸರ್ಕಾರವು ಅಮಾನತುಗೊಳಿಸಿದೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಮುಖ್ಯ ಕಾರ್ಯದರ್ಶಿಯಾಗಿದ್ದ ನರೇನ್ ಮತ್ತು ಇನ್ನೊಬ್ಬ ಅಧಿಕಾರಿ ಆರ್.ಎಲ್.ರಿಷಿ ತಮ್ಮ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು 21 ವರ್ಷದ ಮಹಿಳೆಯೊಬ್ಬರು ಆರೋಪಿಸಿದ್ದರು.

ಕೇರಳ ನರಬಲಿ: ಹತ್ಯೆಯಾದ ಮಹಿಳೆಯರ ಬಗ್ಗೆ ಮಕ್ಕಳು ನೀಡಿದ ಮಾಹಿತಿ ಇಲ್ಲಿದೆಕೇರಳ ನರಬಲಿ: ಹತ್ಯೆಯಾದ ಮಹಿಳೆಯರ ಬಗ್ಗೆ ಮಕ್ಕಳು ನೀಡಿದ ಮಾಹಿತಿ ಇಲ್ಲಿದೆ

"ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಮುಖ್ಯ ಕಾರ್ಯದರ್ಶಿ ಜಿತೇಂದ್ರ ನಾರಾಯಣ್ ಹಾಗೂ ಇತರರ ಮೇಲೆ ಮಹಿಳೆಯು ಮಾಡಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 16ರಂದು ಕೇಂದ್ರ ಗೃಹ ಸಚಿವಾಲಯಕ್ಕೆ ವರದಿ ಸಲ್ಲಿಸಲಾಗಿತ್ತು," ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. AGMUT ಕೇಂದ್ರದ ನಾಗರಿಕ ಸೇವೆಗಳ ಅರುಣಾಚಲ ಪ್ರದೇಶ, ಗೋವಾ, ಮಿಜೋರಾಂ ಮತ್ತು ಕೇಂದ್ರಾಡಳಿತ ಪ್ರದೇಶದ ಕೇಡರ್ ಅನ್ನು ಉಲ್ಲೇಖಿಸಿದೆ.

ಜೀತೇಂದ್ರ ನಾರಾಯಣ್ ವಿರುದ್ಧ ಅತ್ಯಾಚಾರದ ಆರೋಪ

ಜೀತೇಂದ್ರ ನಾರಾಯಣ್ ವಿರುದ್ಧ ಅತ್ಯಾಚಾರದ ಆರೋಪ

ಈಗಾಗಲೇ ಸಲ್ಲಿಕೆ ಆಗಿರುವ ವರದಿಯಲ್ಲಿ ಹಿರಿಯ ಅಧಿಕಾರಿ ಜಿತೇಂದ್ರ ನಾರಾಯಣ್ ಘೋರ ದುರ್ನಡತೆ ಮತ್ತು ಅಧಿಕೃತ ಸ್ಥಾನದ ದುರುಪಯೋಗವನ್ನು ಮಾಡಿಕೊಂಡಿರುವ ಸಾಧ್ಯತೆ ಹೆಚ್ಚಾಗಿ ಕಂಡು ಬಂದಿರುವ ಕಾರಣ, ಕೇಂದ್ರ ಗೃಹ ಸಚಿವರು ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಕಾನೂನು ಪ್ರಕಾರ ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ಪರಿಣಾಮ ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಆದೇಶಿಸಲಾಗಿದೆ,'' ಎಂದು ಸರ್ಕಾರ ತಿಳಿಸಿದೆ.

ಮಹಿಳೆಯರ ಮೇಲೆ ದೌರ್ಜನ್ಯವನ್ನು ಸಹಿಸುವುದಿಲ್ಲ

ಮಹಿಳೆಯರ ಮೇಲೆ ದೌರ್ಜನ್ಯವನ್ನು ಸಹಿಸುವುದಿಲ್ಲ

"ಮಹಿಳೆಯರ ಘನತೆಗೆ ಧಕ್ಕೆ ಉಂಟು ಮಾಡುವಂತಹ ಘಟನೆಗಳಲ್ಲಿ ಯಾವುದೇ ಅಧಿಕಾರಿ ಆಗಿದ್ದರೂ, ಅವರ ಶ್ರೇಣಿ ಮತ್ತು ಸ್ಥಾನಮಾನವನ್ನು ಲೆಕ್ಕಿಸದೇ ಶಿಸ್ತು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು," ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಈ ತಿಂಗಳ ಆರಂಭದಲ್ಲಿ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದರು. ಇದೇ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ತನ್ನ ಮೇಲೆ ಎರಡು ಬಾರಿ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಮಹಿಳೆ ಆರೋಪಿಸಿದ್ದರು.

ಉದ್ಯೋಗದ ಹುಡುಕಾಟದಲ್ಲಿದ್ದ ಮಹಿಳೆ

ಉದ್ಯೋಗದ ಹುಡುಕಾಟದಲ್ಲಿದ್ದ ಮಹಿಳೆ

21 ವರ್ಷದ ಮಹಿಳೆಯು ತಾನು ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳುವ ಕನಸು ಕಾಣುತ್ತಿದ್ದರು. ಉದ್ಯೋಗದ ಹುಡುಕಾಟದಲ್ಲಿದ್ದ ಮಹಿಳೆಗೆ ಮೊದಲು ಪರಿಚಯವಾಗಿದ್ದೇ ಆರ್ಎಲ್ ರಿಷಿ. ಮಹಿಳೆಗೆ ಹೋಟೆಲ್ ಮಾಲೀಕರ ಮೂಲಕ ಆರ್ಎಲ್ ರಿಷಿಯ ಪರಿಚಯ ಆಯಿತು. ಅಲ್ಲಿಂದ ಮುಂದೆ ಜೀತೇಂದ್ರ ನರೇನ್ ಮನೆಗೆ ಆ ಮಹಿಳೆಯನ್ನು ಕರೆದುಕೊಂಡು ಹೋಗಲಾಗಿತ್ತು. ಆ ಮನೆಯಲ್ಲಿ ನಡೆದ ಘಟನೆಯ ಬಗ್ಗೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಹಿಳೆಯು ಸ್ಪಷ್ಟವಾಗಿ ಉಲ್ಲೇಖಿಸಿದ್ದರು.

ಮಹಿಳೆ ಅತ್ಯಾಚಾರಕ್ಕೂ ಮೊದಲು ಎಣ್ಣೆ ಕುಡಿಸಿದ್ರು!

ಮಹಿಳೆ ಅತ್ಯಾಚಾರಕ್ಕೂ ಮೊದಲು ಎಣ್ಣೆ ಕುಡಿಸಿದ್ರು!

ಮಾಜಿ ಮುಖ್ಯ ಕಾರ್ಯದರ್ಶಿಯ ಮನೆಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ನಡೆಸಲಾಗಿತ್ತು ಎಂದು ಆರೋಪಿಸಲಾಗಿದೆ. ಈ ಘಟನೆಗೂ ಮೊದಲು ಮಹಿಳೆಗೆ ಮದ್ಯಪಾನ ಮಾಡುವಂತೆ ಒತ್ತಾಯಿಸಲಾಗಿತ್ತು, ಅದನ್ನು ಮಹಿಳೆ ನಿರಾಕರಿಸಿದರು. ಆದರೆ ತಮಗೆ ಸರ್ಕಾರಿ ಉದ್ಯೋಗವನ್ನು ನೀಡುವುದಾಗಿ ಭರವಸೆ ನೀಡಿದ್ದ ಅಧಿಕಾರಿಗಳು ಆಕೆಗೆ ಎಣ್ಣೆ ಕುಡಿಸಿ ನಂತರದಲ್ಲಿ ಅತ್ಯಾಚಾರ ನಡೆಸಿದರು ಎಂದು ಆರೋಪಿಸಲಾಗಿದೆ.

English summary
Senior Bureaucrat Jitendra Narain Suspended by Centre in accused Of Rape case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X