ಹಿರಿಯ ನಾಗರಿಕರು, ಅಂಗವಿಕಲರಿಗೆ ಮನೆಯಿಂದಲೇ ಮತ ಹಾಕಲು ಅವಕಾಶ
ಅಗರ್ತಲ, ಜನವರಿ 19: ಹಿರಿಯ ನಾಗರಿಕರು ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತ ಚಲಾಯಿಸುವ ಆಯ್ಕೆಯನ್ನು ಹೊಂದಿರುತ್ತಾರೆ ಎಂದು ತ್ರಿಪುರಾದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ತಿಳಿಸಿದ್ದಾರೆ.
80 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಮಾತ್ರ ಮನೆಯಿಂದ ಮತ ಚಲಾಯಿಸುವ ಆಯ್ಕೆಯನ್ನು ಪಡೆಯಬಹುದಾಗಿದೆ. ರಾಜ್ಯದಲ್ಲಿ ಮುಂಬರುವ ಚುನಾವಣೆಗೆ ಕೇಂದ್ರ ಸಶಸ್ತ್ರ ಅರೆಸೇನಾ ಪಡೆಗಳು (ಸಿಎಪಿಎಫ್) ಸಾಕಷ್ಟು ಸಂಖ್ಯೆಯಲ್ಲಿ ಇಲ್ಲಿಗೆ ಆಗಮಿಸಿದ್ದು, ಧ್ವಜ ಮೆರವಣಿಗೆ ಮತ್ತು ರಾತ್ರಿ ಗಸ್ತು ಕೂಡ ಮಾಡಲಾಗುತ್ತಿದೆ ಎಂದು ಹೇಳಿದರು.
ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣೆಗೆ ಒತ್ತು ನೀಡಿದ ತ್ರಿಪುರ ಚುನಾವಣಾಧಿಕಾರಿ, ಸಾಕಷ್ಟು ಸಂಖ್ಯೆಯ ಕೇಂದ್ರೀಯ ಸಶಸ್ತ್ರ ಅರೆಸೇನಾ ಪಡೆಗಳು (ಸಿಎಪಿಎಫ್) ಇಲ್ಲಿಗೆ ತಲುಪಿವೆ. ಧ್ವಜ ಮೆರವಣಿಗೆ ಮತ್ತು ರಾತ್ರಿ ಗಸ್ತು ಕೂಡ ಮಾಡಲಾಗುತ್ತಿದೆ. ನಾವು ನ್ಯಾಯಯುತ, ಪಾರದರ್ಶಕ ಮತ್ತು ಶಾಂತಿಯುತ ಚುನಾವಣೆಗಳನ್ನು ನಡೆಸಲಾಗುತ್ತದೆ. 80 ವರ್ಷದ ಹಿರಿಯ ನಾಗರಿಕರು ಮತ್ತು ವಿಕಲಾಂಗ ವ್ಯಕ್ತಿಗಳು ಮನೆಯಿಂದಲೇ ಮತ ಚಲಾಯಿಸುವ ಆಯ್ಕೆಯನ್ನು ಹೊಂದಿರುತ್ತಾರೆ ಎಂದು ತಿಳಿಸಿದ್ದಾರೆ.

ಭಾರತೀಯ ಚುನಾವಣಾ ಆಯೋಗದ (ಇಸಿಐ) ಪ್ರಕಾರ, ತ್ರಿಪುರಾದಲ್ಲಿ 2023ರ ವಿಧಾನಸಭಾ ಚುನಾವಣೆಗೆ ಫೆಬ್ರವರಿ 16ರಂದು ಮತದಾನ ನಡೆಯಲಿದೆ. ಅಲ್ಲದೆ ನಾಗಾಲ್ಯಾಂಡ್ ಮತ್ತು ಮಣಿಪುರದಲ್ಲಿ ಫೆಬ್ರವರಿ 27ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಇವುಗಳ ಚುನಾವಣಾ ಫಲಿತಾಂಶಗಳು ಮಾರ್ಚ್ 2ರಂದು ಪ್ರಕಟಗೊಳ್ಳುತ್ತವೆ ಎಂದು ಅವರು ತಿಳಿಸಿದ್ದಾರೆ.
ಏತನ್ಮಧ್ಯೆ, ತ್ರಿಪುರಾದಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಅಗರ್ತಲಾ ಪೊಲೀಸರು ನಗರದಾದ್ಯಂತ ಭದ್ರತೆಯನ್ನು ಬಲಪಡಿಸಿದ್ದಾರೆ. ನಾವು ಅಕ್ರಮ ನಗದು, ಶಸ್ತ್ರಾಸ್ತ್ರಗಳು, ಮಾದಕ ದ್ರವ್ಯಗಳು ಮತ್ತು ಇತರ ವಸ್ತುಗಳ ಸಾಗಣೆ ತಡೆಯಲು ನಾವು 14 ತಂಡಗಳನ್ನು ರಚಿಸಿದ್ದೇವೆ. 1ರಿಂದ 2 ದಿನಗಳಲ್ಲಿ ಚುನಾವಣೆ ಅಧಿಸೂಚನೆ ಹೊರಬೀಳುವ ಸಾಧ್ಯತೆಯಿದೆ ಎಂದು ಸದರ್‌ನ ಉಪವಿಭಾಗೀಯ ಪೊಲೀಸ್ ಅಧಿಕಾರಿ ಎಕೆ ದಾಸ್ ತಿಳಿಸಿದ್ದಾರೆ.

ಮುಂಬರುವ ಫೆಬ್ರವರಿ 16ರ ವಿಧಾನಸಭಾ ಚುನಾವಣೆಯಲ್ಲಿ ಹಿಂದಿಗಿಂತ ಹೆಚ್ಚು ವಿಧಾನಸಭಾ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಬುಧವಾರ ವ್ಯಕ್ತಪಡಿಸಿದ್ದು, ಬಿಜೆಪಿ ಯಾವಾಗಲೂ ಚುನಾವಣೆಗಳನ್ನು ಲೆಕ್ಕಿಸದೆ ಜನರಿಗಾಗಿ ಕೆಲಸ ಮಾಡಿದೆ. ನಮ್ಮ ಪಕ್ಷ ಯಾವಾಗಲೂ ಚುನಾವಣೆಯನ್ನು ಲೆಕ್ಕಿಸದೆ ಜನರಿಗಾಗಿ ಕೆಲಸ ಮಾಡುತ್ತದೆ. ಮುಂಬರುವ ಚುನಾವಣೆಗೆ ನಾವು ಸಂಪೂರ್ಣವಾಗಿ ಸಿದ್ಧರಿದ್ದೇವೆ. ಮೊದಲಿಗಿಂತ ಹೆಚ್ಚು ವಿಧಾನಸಭಾ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಪ್ರಕಾರ, ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾದಲ್ಲಿ ಒಟ್ಟು 62.8 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ. ಇದರಲ್ಲಿ 31.47 ಲಕ್ಷ ಮಹಿಳಾ ಮತದಾರರು, 31,700 ಅಂಗವಿಕಲ ಮತದಾರರು. 1.76 ಲಕ್ಷಕ್ಕೂ ಹೆಚ್ಚು ಮೊದಲ ಬಾರಿಗೆ ಮತದಾರರು ಭಾಗವಹಿಸಲಿದ್ದಾರೆ.












Click it and Unblock the Notifications