ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆಪ್ಟೆಂಬರ್ ತಿಂಗಳಿನಲ್ಲಿ ಅತ್ಯಧಿಕ ಮಳೆ; ಮುಂಗಾರು ಅಂತ್ಯ ವಿಳಂಬ

By ಒನ್‌ಇಂಡಿಯಾ ಡೆಸ್ಕ್
|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 21: ದೇಶದಲ್ಲಿ ಈ ಬಾರಿ ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ 27% ಹೆಚ್ಚಿನ ಮಳೆಯಾಗಲಿದೆ. ಬಂಗಾಳ ಕೊಲ್ಲಿಯಲ್ಲಿ ಇತ್ತೀಚಿಗೆ ರೂಪುಗೊಂಡಿರುವ ವಾಯುಭಾರ ಕುಸಿತ ಮಳೆ ಪ್ರಮಾಣದ ಏರಿಕೆಗೆ ಕಾರಣವಾಗಲಿದೆ. ಇದರಿಂದಾಗಿ ಸಾಮಾನ್ಯವಾಗಿ ಸೆಪ್ಟೆಂಬರ್ 17ರಿಂದ ಕಡಿಮೆಯಾಗಬೇಕಿದ್ದ ಮಳೆ ಇನ್ನೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಜೂನ್‌ 1ರಿಂದ ಸೆಪ್ಟೆಂಬರ್ 30ರ ನಡುವಿನ ಅವಧಿಯನ್ನು ಭಾರತದಲ್ಲಿ ನೈಋತ್ಯ ಮುಂಗಾರು ಅವಧಿ ಎಂದು ಕರೆಯಲಾಗುತ್ತದೆ.

ಮುಂದಿನ ನಾಲ್ಕೈದು ದಿನ ಈ ರಾಜ್ಯಗಳಲ್ಲಿ ಭಾರೀ ಮಳೆ ಸೂಚನೆಮುಂದಿನ ನಾಲ್ಕೈದು ದಿನ ಈ ರಾಜ್ಯಗಳಲ್ಲಿ ಭಾರೀ ಮಳೆ ಸೂಚನೆ

ಆಗಸ್ಟ್‌ ಅಂತ್ಯದವರೆಗೂ ಕುಂಠಿತವಾದ ಮಳೆ ಪ್ರಮಾಣ ಭಾರತದಲ್ಲಿ ಬರ ಪರಿಸ್ಥಿತಿ ತರಬಹುದೇ ಎಂಬ ಅನುಮಾನ ವ್ಯಕ್ತವಾಗಿತ್ತು. ಆದರೆ ಸೆಪ್ಟೆಂಬರ್‌ ತಿಂಗಳಿನಲ್ಲಿ ಅಧಿಕ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

September Rain Is Excess In The Country

ಆಗಸ್ಟ್‌ ತಿಂಗಳಿನಲ್ಲಿ ಕನಿಷ್ಠ ಮಳೆ ಪ್ರಮಾಣ ದಾಖಲು:
ಈ ಬಾರಿ ನೈಋತ್ಯ ಮುಂಗಾರಿನಲ್ಲಿ ಆಗಸ್ಟ್‌ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಪ್ರಮಾಣ ದಾಖಲಾಗಿದ್ದು, 19 ವರ್ಷಗಳಲ್ಲೇ ದಾಖಲಾದ ಕನಿಷ್ಠ ಮಳೆ ಪ್ರಮಾಣ ಇದಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಆಗಸ್ಟ್‌ ತಿಂಗಳ ಅವಧಿಯಲ್ಲಿ, ಇಡೀ ದೇಶಾದ್ಯಂತ ಮಳೆಯು ದೀರ್ಘಾವಧಿ ಸರಾಸರಿಗಿಂತ ಕಡಿಮೆ ಪ್ರಮಾಣದಲ್ಲಿ, ಅಂದರೆ 24% ಮಳೆ ಕೊರತೆ ಕಂಡುಬಂದಿದೆ. 2002ರ ನಂತರ, ಕಳೆದ 19 ವರ್ಷಗಳಲ್ಲಿ ದಾಖಲಾದ ಅತಿ ಕನಿಷ್ಠ ಮಳೆ ಪ್ರಮಾಣ ಇದಾಗಿದೆ.

ಬೆಂಗಳೂರಲ್ಲಿ ರಾತ್ರಿ ಧಾರಾಕಾರ ಮಳೆ, ಇಂದು ಮಳೆ ಮುನ್ಸೂಚನೆಬೆಂಗಳೂರಲ್ಲಿ ರಾತ್ರಿ ಧಾರಾಕಾರ ಮಳೆ, ಇಂದು ಮಳೆ ಮುನ್ಸೂಚನೆ

ಜೂನ್ ತಿಂಗಳಿನಲ್ಲಿ ಶೇ 10ರಷ್ಟು ಅಧಿಕ ಮಳೆ ದಾಖಲಾಗಿತ್ತು. ಆದರೆ ಜುಲೈ ಹಾಗೂ ಆಗಸ್ಟ್‌ ತಿಂಗಳಿನಲ್ಲಿ ಮಳೆ ಕೊರತೆ ಕಂಡುಬಂದಿತ್ತು. ಜುಲೈ ತಿಂಗಳಿನಲ್ಲಿ ವಾಡಿಕೆಗಿಂತ 7% ಮಳೆ ಕಡಿಮೆಯಾಗಿದ್ದರೆ, ಆಗಸ್ಟ್‌ ತಿಂಗಳಿನಲ್ಲಿ 24% ಕಡಿಮೆ ಮಳೆ ದಾಖಲಾಗಿದೆ.

September Rain Is Excess In The Country

ಸೆಪ್ಟೆಂಬರ್‌ನಲ್ಲಿ ಅಧಿಕ ಮಳೆ ಸೂಚನೆ: ಸೆಪ್ಟೆಂಬರ್‌ ತಿಂಗಳಿನಲ್ಲಿ ಮಳೆ ಪ್ರಮಾಣ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್‌ ತಿಂಗಳಿಗೆ ಹೋಲಿಸಿದರೆ ಮುಂಗಾರಿನ ಕೊನೆಯ ತಿಂಗಳಾದ ಸೆಪ್ಟೆಂಬರ್‌ನಲ್ಲಿ ಹೆಚ್ಚಿನ ಮಳೆ ದಾಖಲಾಗಬಹುದು ಎಂದು ತಿಳಿಸಿದೆ.

ಮುಂಗಾರು ಅಂತ್ಯ ವಿಳಂಬವಾಗುವುದು ಅಸಹಜವೇನಲ್ಲ. 2019ರಲ್ಲಿ ನೈಋತ್ಯ ಮುಂಗಾರು ಅಕ್ಟೋಬರ್ 9ಕ್ಕೆ ಕೊನೆಯಾಗಿತ್ತು. 2017 ಹಾಗೂ 2018ರಲ್ಲಿಯೂ ಇದೇ ರೀತಿ ಆಗಿತ್ತು. ಈ ಬಾರಿ ಸೆಪ್ಟೆಂಬರ್ 1-20ರವರೆಗೆ ದೇಶದ ಎಲ್ಲೆಡೆಯೂ ಅಧಿಕ ಮಳೆಯಾಗಿದೆ. ಮಧ್ಯ ಭಾರತದಲ್ಲಿ ವಾಡಿಕೆಗಿಂತ 71% ಅಧಿಕ ಮಳೆಯಾಗಿದ್ದು, ನೈಋತ್ಯ ಭಾರತದಲ್ಲಿ 26% ಅಧಿಕ ಮಳೆ ದಾಖಲಾಗಿದೆ. ಈ ಅಕ್ಟೋಬರ್‌ ಮಧ್ಯದವರೆಗೂ ಮಳೆ ಮುಂದುವರೆಯಲಿದ್ದು, ಆನಂತರ ಮುಂಗಾರು ಅಂತ್ಯವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಭಾರತದಲ್ಲಿ ಸದ್ಯ ಮುಂಗಾರು ಅಂತ್ಯವಾಗುವ ಯಾವುದೇ ಲಕ್ಷಣಗಳು ಕಂಡುಬರುತ್ತಿಲ್ಲ. ಮುಂದಿನ ಹತ್ತು ದಿನಗಳವರೆಗೂ ಮಳೆ ನಿರಂತರವಾಗಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮಹಾನಿರ್ದೇಶಕ ಮೃತ್ಯುಂಜಯ ಮಹೋಪಾತ್ರ ತಿಳಿಸಿದ್ದಾರೆ. ಮುಂದಿನ ಐದು ದಿನಗಳ ಕಾಲ ಮಳೆ ಬಿಡುವು ಪಡೆದರೆ ನೈಋತ್ಯ ಭಾರತದಲ್ಲಿ ಮುಂಗಾರು ಅಂತ್ಯವಾಗಲಿದೆ ಎಂದು ಅವರು ಹೇಳಿದ್ದಾರೆ.

ಈಗ ಮುಂಗಾರು ದುರ್ಬಲಗೊಂಡಿದೆ. ಆದರೆ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದ ಹೆಚ್ಚಿನ ಮಳೆಯಾಗುತ್ತಿದೆ. ಉತ್ತರ ಭಾರತದಲ್ಲಿ ಮತ್ತಷ್ಟು ದಿನ ಮಳೆ ಮುಂದುವರೆದು ಸೆಪ್ಟೆಂಬರ್ ತಿಂಗಳಿನಲ್ಲಿ ಅಧಿಕ ಮಳೆ ದಾಖಲಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

Recommended Video

Bangalore: ನೋಡ ನೋಡುತ್ತಿದ್ದಂತೆ ಮಹಿಳೆ ಬೆಂಕಿಗಾಹುತಿ-ಮೊಬೈಲ್ ನಲ್ಲಿ ಸೆರೆಯಾಯ್ತು ಭೀಕರ ದೃಶ್ಯ |Oneindia Kannada

ಈ ವರ್ಷ ನೈಋತ್ಯ ಮುಂಗಾರು ದಕ್ಷಿಣ ಭಾರತ ಹಾಗೂ ಉತ್ತರ ಭಾರತದಲ್ಲಿ ಸಾಮಾನ್ಯ ರೀತಿ ಇರಲಿದ್ದು ಕೇಂದ್ರ ಪ್ರದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಇರಲಿದೆ. ಆದರೆ ಭಾರತ ಪೂರ್ವ ಭಾಗದಲ್ಲಿ ಮತ್ತು ಈಶಾನ್ಯ ಭಾರತದಲ್ಲಿ ಸಾಮಾನ್ಯ ಪ್ರಮಾಣಕ್ಕಿಂತ ಕಡಿಮೆ ಮಟ್ಟದಲ್ಲಿ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿತ್ತು.. ನೈಋತ್ಯ ಮುಂಗಾರಿನ ಕಾಲಾವಧಿಯಲ್ಲಿ (ಜೂನ್‌ನಿಂದ-ಸೆಪ್ಟೆಂಬರ್) ದೇಶಾದ್ಯಂತ ಮಳೆಯ ಪ್ರಮಾಣ ಸಾಮಾನ್ಯವಾಗಿರಲಿದೆ ಎಂದು ಮುನ್ಸೂಚನೆ ನೀಡಿದೆ.

English summary
The September rainfall in India is 27% greater than what’s regular for the month . it’s also doubtless that the withdrawal of the monsoon, which usually begins by September 17, is predicted to be delayed
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X