ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಶ್ಮೀರದಲ್ಲಿ ಸರಣಿ ಹತ್ಯೆ: ಅಮಿತ್‌ ಶಾ ಮಹತ್ವದ ಸಭೆ

|
Google Oneindia Kannada News

ನವದೆಹಲಿ, ಜೂ. 2: ಕಾಶ್ಮೀರದಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಜೊತೆ ಸಭೆ ನಡೆಸಿದರು. ಈ ವೇಳೆ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದರು.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್ ಮತ್ತು ಅಮಿತ್‌ ಶಾ ಸುಮಾರು ಒಂದು ಗಂಟೆಗಳ ಕಾಲ ಸಭೆ ನಡೆಸಿದರು. ಮೂರು ದಿನಗಳಲ್ಲಿ ಕಣಿವೆಯಲ್ಲಿ ಹಿಂದೂಗಳ ಮೇಲೆ ಎರಡು ಬಾರಿ ಉದ್ದೇಶಿತ ದಾಳಿ ನಡೆದಿದೆ. ಗುರುವಾರ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಭಯೋತ್ಪಾದಕರಿಂದ ರಾಜಸ್ಥಾನದ ಬ್ಯಾಂಕ್ ಮ್ಯಾನೇಜರ್ ಹತ್ಯೆ ನಡೆದಿದೆ.

 ಸಚಿವ ನಾಗೇಶ್‌ ಮನೆ ಮೇಲೆ ದಾಳಿ; ತನಿಖೆಗೆ ಕೆ. ಜಿ. ಬೋಪಯ್ಯ ಆಗ್ರಹ ಸಚಿವ ನಾಗೇಶ್‌ ಮನೆ ಮೇಲೆ ದಾಳಿ; ತನಿಖೆಗೆ ಕೆ. ಜಿ. ಬೋಪಯ್ಯ ಆಗ್ರಹ

ಇಲಾಖಾಹಿ ದೇಹತಿ ಬ್ಯಾಂಕ್‌ನ ಅರೆಹ್ ಶಾಖೆಗೆ ಭಯೋತ್ಪಾದಕ ನುಗ್ಗಿ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಮೇಲೆ ಗುಂಡು ಹಾರಿಸಿದ್ದು, ಸಿಸಿಟಿವಿ ದೃಶ್ಯಾವಳಿಯಲ್ಲಿ ಹಂತಕನು ಶಾಖೆಯೊಳಗೆ ಪ್ರವೇಶಿಸಿ ಗುಂಡು ಹಾರಿಸಿ ಪರಾರಿಯಾಗುವ ದೃಶ್ಯ ಸೆರೆಯಾಗಿದೆ.

Series of Murder at Kashmir Amit Shah Meeting With Ajit Doval

ವಿಜಯ್ ಕುಮಾರ್‌ರನ್ನು ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾರೆ. ಜಮ್ಮುವಿನ ಹಿಂದೂ ಶಿಕ್ಷಕಿ ರಜನಿ ಬಾಲಾರನ್ನು ಕುಲ್ಗಾಮ್‌ನಲ್ಲಿ ಶಾಲೆಯ ಹೊರಗೆ ಭಯೋತ್ಪಾದಕರು ಕೊಂದ ಎರಡು ದಿನಗಳ ನಂತರ ಈ ದಾಳಿ ನಡೆದಿತ್ತು.

ಪಕ್ಕದ ಶೋಪಿಯಾನ್ ಜಿಲ್ಲೆಯಲ್ಲಿ ಎರಡು ಪ್ರಮುಖ ಘಟನೆಗಳು ನಡೆದ 24 ಗಂಟೆಗಳಲ್ಲಿ ಕುಲ್ಗಾಮ್‌ನಲ್ಲಿ ಬ್ಯಾಂಕ್ ಮ್ಯಾನೇಜರ್ ಹತ್ಯೆಯಾಗಿದೆ. ಫಾರೂಕ್ ಅಹ್ಮದ್ ಶೇಖ್ ಎಂಬುವವರ ಮೇಲೆ ಬುಧವಾರ ದಾಳಿ ನಡೆದಿತ್ತು.

ಜೆಡಿಎಸ್ ಮುಖಂಡನ ಹತ್ಯೆ: ಪೊಲೀಸ್ ಅಧಿಕಾರಿಗಳ ವಿರುದ್ಧ ಹೆಚ್.ಡಿ.ರೇವಣ್ಣ ಗರಂಜೆಡಿಎಸ್ ಮುಖಂಡನ ಹತ್ಯೆ: ಪೊಲೀಸ್ ಅಧಿಕಾರಿಗಳ ವಿರುದ್ಧ ಹೆಚ್.ಡಿ.ರೇವಣ್ಣ ಗರಂ

ಮತ್ತೊಂದು ಘಟನೆಯಲ್ಲಿ ಬುಧವಾರ ಮುಂಜಾನೆ ವಾಹನದಲ್ಲಿ ಸ್ಫೋಟ ಸಂಭವಿಸಿ ಮೂವರು ಯೋಧರು ಗಾಯಗೊಂಡಿದ್ದರು. ಅವರಲ್ಲಿ ಒಬ್ಬರಿಗೆ ಗಂಭೀರ ಗಾಯಗಳಾಗಿವೆ. ಸೇನೆಯ ಪ್ರಕಾರ, ಮೂವರು ಸೈನಿಕರು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಾಗಿ ಖಾಸಗಿ ವಾಹನವನ್ನು ತೆಗೆದುಕೊಂಡಿದ್ದರು.

Series of Murder at Kashmir Amit Shah Meeting With Ajit Doval

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬ್ಯಾಂಕ್‌ ಮಾನೇಜರ್‌ ವಿಜಯ್‌ ಕುಮಾರ್‌ ಹತ್ಯೆಯನ್ನು ಖಂಡಿಸಿ ಸಂತಾಪ ಸೂಚಿಸಿದ್ದಾರೆ. ಕಾಶ್ಮೀರದಲ್ಲಿ ಶಾಂತಿ ಕಾಪಾಡುವಲ್ಲಿ ವಿಫಲವಾಗಿರುವ ಎನ್‌ಡಿಎ ಸರ್ಕಾರವನ್ನು ಗುರಿಯಾಗಿಸಿ ಅವರು ನಾಗರಿಕರ ಸುರಕ್ಷತೆಯನ್ನು ಮೊದಲು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ತಮ್ಮನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ಒತ್ತಾಯಿಸಿ ಕಾಶ್ಮೀರಿ ಪಂಡಿತರು ಕೇಂದ್ರಾಡಳಿತ ಪ್ರದೇಶದಲ್ಲಿ ವ್ಯಾಪಕ ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ಈ ಹೊಸ ದಾಳಿ ನಡೆದಿದೆ. ಕಳೆದ ತಿಂಗಳು ಬುದ್ಗಾಮ್‌ನ ಮ್ಯಾಜಿಸ್ಟ್ರೇಟ್ ಕಚೇರಿಯಲ್ಲಿ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಗುಂಡಿಕ್ಕಿ ಕೊಂದ ನಂತರ ಸಮುದಾಯದ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರಧಾನಿಯವರ ಪುನರ್ವಸತಿ ಪ್ಯಾಕೇಜ್ ಅಡಿಯಲ್ಲಿ ಕಣಿವೆಯಲ್ಲಿ ಉದ್ಯೋಗದಲ್ಲಿರುವ ಸುಮಾರು 4,000 ಕಾಶ್ಮೀರ ಪಂಡಿತರು ಇನ್ನು ಮುಂದೆ ಸುರಕ್ಷಿತವಾಗಿಲ್ಲದ ಕಾರಣ ಸಾಮೂಹಿಕ ವಲಸೆಯ ಬೆದರಿಕೆ ಹಾಕಿದ್ದಾರೆ. ಅವರು ಹೊರಹೋಗುವುದನ್ನು ತಡೆಯಲು, ಕೇಂದ್ರಾಡಳಿತ ಪ್ರದೇಶ ಆಡಳಿತವು ಬ್ಯಾರಿಕೇಡ್‌ಗಳನ್ನು ಹಾಕಿತು ಮತ್ತು ಸಾರಿಗೆ ಶಿಬಿರಗಳಿಗೆ ಗೇಟ್‌ಗಳನ್ನು ಲಾಕ್ ಮಾಡಿತ್ತು.

English summary
Union Home Minister Amit Shah meeting with National Security Adviser Ajit Doval on the serial killings in Kashmir.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X