ಎಸ್ಸಿ, ಎಸ್ಟಿ ಮೀಸಲಾತಿ: ರಾಜ್ಯ ಸರ್ಕಾರಕ್ಕೆ ಮುಖಭಂಗ

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 22: ರಾಜ್ಯ ಸರ್ಕಾರಿ ನೌಕರಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉದ್ಯೋಗಿಗಳಿಗೆ ವಿಶೇಷ ಮೀಸಲಾತಿ ನೀಡುವುದನ್ನು ನಿರ್ಬಂಧಿಸಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶಕ್ಕೆ ವಿರುದ್ಧವಾಗಿ ಸುಗ್ರೀವಾಜ್ಞೆ ಜಾರಿಗೆ ತರಲು ನಿರ್ಧರಿಸಿದ್ದ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ.

ಸುಗ್ರೀವಾಜ್ಞೆ ಜಾರಿಗೆ ತರುವ ಮೂಲಕ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲನೆ ಮಾಡದಿರಲು ರಾಜ್ಯ ಸರ್ಕಾರ ನಿರ್ಧರಿಸಿತ್ತು. ಹೀಗಾಗಿ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಜಾರಿಗೆ ತರುವ ವಿಧೇಯಕವನ್ನು ರಾಜ್ಯಪಾಲರ ಅಂಕಿತಕ್ಕೆ ರಾಜ್ಯ ಸರ್ಕಾರ ಕಳುಹಿಸಿತ್ತು. ಆದರೆ, ರಾಜ್ಯಪಾಲ ವಜುಭಾಯಿ ವಾಲಾ ಅವರು ಈ ಸುಗ್ರೀವಾಜ್ಞೆಯ ವಿಧೇಯಕಕ್ಕೆ ಸಹಿ ಹಾಕಲು ನಿರಾಕರಿಸಿ, ರಾಜ್ಯ ಸರ್ಕಾರಕ್ಕೆ ಆ ಕಡತವನ್ನು ವಾಪಸ್ ಕಳುಹಿಸಿದ್ದಾರೆ.

Set back for Karnataka government's effort to bring ordinance against SC, ST promotions prohibition

ಅನಿವಾರ್ಯ ಸಂದರ್ಭಗಳಲ್ಲಿ ಸುಗ್ರೀವಾಜ್ಞೆ ತರಬೇಕು. ಹಾಗಿರುವಾಗ ಸುಪ್ರೀಂ ಕೋರ್ಟ್ ಆದೇಶ ಪಾಲನೆ ವಿರುದ್ಧ ಸುಗ್ರೀವಾಜ್ಞೆ ತರುವ ಔಚಿತ್ಯವೇನು ಎಂದು ರಾಜ್ಯಪಾಲರು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಅಲ್ಲದೆ, ಈ ವಿಚಾರವು (ಸುಗ್ರೀವಾಜ್ಞೆ) ವಿಧಾನ ಮಂಡಲದಲ್ಲಿ ಚರ್ಚೆಯಾಗಬೇಕಿದೆ ಎಂದು ಸಲಹೆ ನೀಡಿದ್ದಾರೆ. ಹಾಗಾಗಿ, ಇದೀಗ ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದಂತಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
In major setback for Karnataka government, Governor of Karnataka Vajubhai vala has rejected the idea of bringing the ordinance against the Supreme Court Verdict which abolished the special consideration of SC, ST employees for promotions in Government institutions.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ