Delhi Election: ಚುನಾವಣೆಗೆ ಮುನ್ನ ಎಎಪಿಗೆ ಆಘಾತ; ಹಲವು ನಾಯಕರು ಬಿಜೆಪಿ ಸೇರ್ಪಡೆ

ದೆಹಲಿ ವಿಧಾನಸಭಾ ಚುನಾವಣೆ ಅಖಾಡ ರಂಗೇರಿದ್ದು ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷದ ನಡುವೆ ತೀವ್ರ ಹಣಾಹಣಿ ನಡೆಯುತ್ತಿದೆ, ಎರಡೂ ಪಕ್ಷಗಳ ನಡುವೆ ದಿನಕ್ಕೊಂದು ಜಗಳ ನಡೆಯುತ್ತಲೇ ಇರುತ್ತದೆ. ಚುನಾವಣೆ ಹತ್ತಿರ ಬಂದಂತೆ ಪಕ್ಷಾಂತರ ಪರ್ವ ಜೋರಾಗಿದ್ದು ಆಮ್ ಆದ್ಮಿ ಪಕ್ಷಕ್ಕೆ ಕೈಕೊಟ್ಟಿರುವ ಹಲವು ನಾಯಕರು, ಸದಸ್ಯರು ಬಿಜೆಪಿಯತ್ತ ಮುಖ ಮಾಡಿದ್ದಾರೆ.

ಭಾನುವಾರ ದೆಹಲಿ ಬಿಜೆಪಿ ಅಧ್ಯಕ್ಷ ವಿರೇಂದ್ರ ಸಚ್‌ದೇವ ಸಮ್ಮುಖದಲ್ಲಿ ಹಲವು ಮುಖಂಡರು ಬಿಜೆಪಿಗೆ ಸೇರಿದರು. ಮಾಡೆಲ್ ಟೌನ್ ವಿಧಾನಸಭೆಯ ಕಮಲಾ ನಗರ ವಾರ್ಡ್‌ನಿಂದ ಎರಡು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಪಿಲ್ ನಾಗರ್ ಎಎಪಿ ತೊರೆದು ಬಿಜೆಪಿಗೆ ಸೇರ್ಪಡೆಯಾದರು. ಅವರ ಜೊತೆ ಎಎಪಿಯ 100ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾಗಿದ್ದು, ಎಎಪಿಗೆ ಹಿನ್ನಡೆಯಾಗಿದೆ.

Several aap leaders members join bjp delhi assembly elections

ಕಲ್ಕಾಜಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಅವರ ಸಮ್ಮುಖದಲ್ಲಿ ಹಲವು ಎಎಪಿ ಕಾರ್ಯಕರ್ತರು ಬಿಜೆಪಿಗೆ ಸೇರಿದ್ದಾರೆ. ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಧುರಿ, ಪ್ರಧಾನಿ ನರೇಂದ್ರ ಮೋದಿ ಅವರ ಕುಟುಂಬದ ಭಾಗವಾಗಿದ್ದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದ ಹೇಳುತ್ತೇನೆ. ನಮಗೆ ಇದಕ್ಕಿಂತ ದೊಡ್ಡ ಅದೃಷ್ಟ ಮತ್ತೊಂದಿಲ್ಲ. ಎಲ್ಲರ ಬೆಂಬಲ, ಎಲ್ಲರ ಅಭಿವೃದ್ಧಿ, ಎಲ್ಲರ ನಂಬಿಕೆ ಮತ್ತು ಎಲ್ಲರ ಪ್ರಯತ್ನ ಎನ್ನುವುದು ಮೋದಿ ಅವರ ಸಿದ್ಧಾಂತವಾಗಿದೆ. ಎಲ್ಲರೂ ಅವರ ಕನಸು ನನಸು ಮಾಡಲು ಕೆಲಸ ಮಾಡಬೇಕು, 2047ರಲ್ಲಿ ಭಾರತ ಅಭಿವೃದ್ಧಿ ದೇಶವಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದೆಹಲಿ ಸಿಎಂ ಅತಿಶಿ ವಿರುದ್ಧ ಬಿಧುರಿ ವಾಗ್ದಾಳಿ ನಡೆಸಿದ್ದು, ನಾಲ್ಕೂವರೆ ವರ್ಷಗಳಿಂದ ಕೆಲಸ ಮಾಡದ ಅವರು ಮತ ಪಡೆಯಲು ಸರ್ಕಸ್ ಮಾಡುತ್ತಿದ್ದಾರೆ ಎಂದು ಹೇಳಿದರು. ದೆಹಲಿ ಜನ ತುಂಬಾ ಕಷ್ಟದ ಪರಿಸ್ಥಿತಿಯಲ್ಲಿದ್ದಾರೆ, ಬೀದಿಗಳು, ರಸ್ತೆಗಳು ಹಾಳಾಗಿದ್ದು, ಒಳಚರಂಡಿ ವ್ಯವಸ್ಥೆ ಹದಗೆಟ್ಟಿದೆ. ನೀವು ಧರಿಸಿದ ಚಪ್ಪಲಿ, ಶೂಗಳಿಗೆ ಮಣ್ಣಾಗದೆ ನೀವು ಮನೆಗೆ ಹೋಗಲು ಸಾಧ್ಯವಿಲ್ಲ, ಕುಡಿಯುವ ನೀರು ಕೂಡ ಕಲುಷಿತವಾಗಿದೆ ಎಂದರು.

ರಮೇಶ್ ಬಿಧುರಿ ಸ್ಪರ್ಧಿಸುತ್ತಿರುವ ಕಲ್ಕಾಜಿ ಕ್ಷೇತ್ರದಿಂದಲೇ ಎಎಪಿಯಿಂದ ಅತಿಶಿ ಸ್ಪರ್ಧೆ ಮಾಡುತ್ತಿದ್ದಾರೆ. ಬಿಧುರಿ ಈಗಾಗಲೇ ಅತಿಶಿ ಮತ್ತು ಪ್ರಿಯಾಂಕಾ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕ್ಷಮೆ ಕೇಳಿದ್ದಾರೆ.

ದೆಹಲಿ ಚುನಾವಣೆ ಯಾವಾಗ?

ದೆಹಲಿಯಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೂ ಕೆಲವು ದಿನ ಬಾಕಿಯಿದೆ. ಫೆಬ್ರವರಿ 5ರಂದು ಚುನಾವಣೆ ನಡೆಯಲಿದ್ದು, ಫೆಬ್ರವರಿ 8ರಂದು ಮತ ಎಣಿಕೆ ನಡೆಯಲಿದೆ. ದೆಹಲಿಯಲ್ಲಿ ಎಎಪಿ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಇದ್ದು ಕಾಂಗ್ರೆಸ್ ಕೂಡ ಗೆಲುವಿನ ವಿಶ್ವಾಸದಲ್ಲಿದೆ.

2020ರ ವಿಧಾನಸಭಾ ಚುನಾವಣೆಯಲ್ಲಿ 70 ಸ್ಥಾನಗಳಲ್ಲಿ 62 ಸ್ಥಾನಗಳಲ್ಲಿ ಎಎಪಿ ಗೆಲುವು ಸಾಧಿಸುವ ಮೂಲಕ ಎರಡನೇ ಬಾರಿ ಅಧಿಕಾರಕ್ಕೆ ಬಂದಿತ್ತು. ಬಿಜೆಪಿ 8 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+