ದಟ್ಟ ಮಂಜಿನಿಂದ ಗ್ರೇಟರ್ ನೋಯ್ಡಾ ಹೆದ್ದಾರಿಯಲ್ಲಿ ಸರಣಿ ಅಪಘಾತ; ಹಲವರಿಗೆ ಗಾಯ
ನವದೆಹಲಿ, ಡಿ. 19: ರಾಷ್ಟ್ರ ರಾಜಧಾನಿ ಮತ್ತು ಸುತ್ತಮುತ್ತಲಿನ ರಾಜ್ಯಗಳಲ್ಲಿ ದಟ್ಟ ಮಂಜು ಆವರಿಸಿದ್ದು, ಹೆದ್ದಾರಿಗಳಲ್ಲಿ ಅಪಘಾತದ ಘಟನೆಗಳು ವರದಿಯಾಗುತ್ತಲೇ ಇವೆ. ಹೆದ್ದಾರಿಯಲ್ಲಿ ವಾಹನಗಳು ಪರಸ್ಪರ ಡಿಕ್ಕಿ ಹೊಡೆಯುತ್ತಿವೆ.
ಗ್ರೇಟರ್ ನೋಯ್ಡಾ ಈಸ್ಟರ್ನ್ ಪೆರಿಫೆರಲ್ ಹೈವೆಯಲ್ಲಿ (ಇಪಿಎಚ್) ಹಲವು ವಾಹನಗಳು ಸೋಮವಾರ ಅಪಘಾತಕ್ಕೀಡಾಗಿದ್ದು, ಇದಕ್ಕೆ ದಟ್ಟವಾದ ಮಂಜು ಕಾರಣ ಎಂದು ಶಂಕಿಸಲಾಗಿದೆ.
ಅಪಘಾತದಿಂದಾಗಿ ಎರಡು ಕಾರುಗಳು ಜಖಂಗೊಂಡಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ದಾದ್ರಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ.

ವಾಹನಗಳು ಪರಸ್ಪರ ಡಿಕ್ಕಿಯಾಗಿರುವುದು ತಿಳಿದ ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಅಪಘಾತ ಸ್ಥಳಕ್ಕೆ ಆಗಮಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.
ಭಾನುವಾರವೂ ಕೂಡ ದಟ್ಟ ಮಂಜಿನಿಂದಾಗಿ ಹರಿಯಾಣದ ಹೆದ್ದಾರಿಯಲ್ಲಿ ಕನಿಷ್ಠ 30 ವಾಹನಗಳು ಅಪಘಾತಕ್ಕೆ ಈಡಾಗಿದ್ದವು. ಘಟನೆಗಳಲ್ಲಿ ಸುಮಾರು ಹನ್ನೇರಡಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.












Click it and Unblock the Notifications