Chennai Rain: ಚೆನ್ನೈನಲ್ಲಿ ಧಾರಾಕಾರ ಮಳೆ: ಹಲವಾರು ವಿಮಾನಗಳು ವಿಳಂಬ- ಬೆಂಗಳೂರಿನಲ್ಲಿ ಮತ್ತೆ ವರ್ಷಧಾರೆ..
ಚೆನ್ನೈ ಜೂನ್ 18: ಕಳೆದ ಕೆಲ ದಿನಗಳಿಂದ ವಿರಾಮ ಪಡೆದಿದ್ದ ಮಳೆ ಸದ್ಯ ಚೆನ್ನೈನಲ್ಲಿ ಅರ್ಭಟಿಸುತ್ತಿದೆ. ಇದರಿಂದಾಗಿ ಚೆನ್ನೈ ಸೇರಿದಂತೆ ಅದರ ಸುತ್ತಮುತ್ತಲಿನ ಪ್ರದೇಶಗಳು ಜಲಾವೃತಗೊಂಡು ಸಾಕಷ್ಟು ತೊಂದರೆ ಉಂಟಾಗಿದೆ. ಅಲ್ಲದೆ ಚೆನ್ನೈನಲ್ಲಿ ಮಳೆಯಿಂದಾಗಿ ಹಲವಾರು ವಿಮಾನಗಳು ವಿಳಂಬವಾಗಿವೆ.
ಚೆನ್ನೈ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಾತ್ರಿಯಿಡೀ ತೀವ್ರ ಗಾಳಿಯೊಂದಿಗೆ ಧಾರಾಕಾರ ಮಳೆ ಸುರಿದಿದ್ದು ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಉರುಳಿವೆ. ಹವಾಮಾನ ಬದಲಾವಣೆಯಿಂದಾಗಿ ಮಂಗಳವಾರ ವಿಮಾನ ಹಾರಾಟದಲ್ಲಿ ವ್ಯತ್ಯಯ ಕಂಡು ಬಂದಿದೆ.

ರಾತ್ರಿ ಇಡೀ ವರುಣನ ಅರ್ಭಟಕ್ಕೆ ಹಲವಾರು ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನಗಳ ಆಗಮನ ಮತ್ತು ನಿರ್ಗಮನ ವಿಳಂಬವಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ದುಬೈ, ದೆಹಲಿ ಮತ್ತು ಪುಣೆಗೆ ವಿಮಾನ ಆಗಮನ ಹಾಗೂ ನಿರ್ಗಮನ ಸೇವೆಗಳು ವಿಳಂಬಗೊಂಡವುಗಳಲ್ಲಿ ಸೇರಿವೆ.
ನಗರದಲ್ಲಿ ಕೋಡಂಬಾಕ್ಕಂ ಸೇರಿದಂತೆ ಕೆಲವೆಡೆ ಮರಗಳು ಧರೆಗುರುಳಿದ್ದು, ಅವುಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ಪೌರಕಾರ್ಮಿಕರು ನಿರತರಾಗಿದ್ದು ಮಳೆ ಬಿಟ್ಟುಬಿಡದಂತೆ ಸುರಿಯುತ್ತಿದೆ. ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಇಲ್ಲಿನ ನಿವಾಸಿಗಳಿಗೆ ಮಳೆ ಕೊಂಚ ನೆಮ್ಮದಿ ನೀಡಿದೆ.
ಚೆನ್ನೈ ಹವಾಮಾನ ಮುನ್ಸೂಚನೆ:-
ಜೂನ್ 18: 26.0 ° C ಮತ್ತು 39.0 ° C ರ ನಡುವೆ ತಾಪಮಾನ ಇರಲಿದ್ದು ಭಾಗಶಃ ಮೋಡ ಕವಿದ ವಾತಾವರಣ ಮತ್ತು ಗುರುಗು ಸಹಿತ ಸಾಧಾರಣ ಮಳೆ ಬೀಳಲಿದೆ.
ಜೂನ್ 19: 27.0 ° C ಮತ್ತು 38.0 ° C ನಡುವೆ ತಾಪಮಾನ ಇರುತ್ತದೆ. ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು ಲಘು ಮಳೆ ನಿರೀಕ್ಷಿಸಲಾಗಿದೆ.
ಜೂನ್ 20: 27.0°C ಮತ್ತು 38.0°C ನಡುವೆ ತಾಪಮಾನ ಇರುತ್ತದೆ. ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಲಘು ಮಳೆಯನ್ನು ನಿರೀಕ್ಷಿಸಬಹುದು.
ಜೂನ್ 21: 27.0 ° C ಮತ್ತು 38.0 ° C ರ ನಡುವೆ ತಾಪಮಾನ ಇರಲಿದ್ದು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಮತ್ತು ಲಘು ಮಳೆಯನ್ನು ನಿರೀಕ್ಷಿಸಬಹುದು.
ಜೂನ್ 22: 28.0°C ಮತ್ತು 39.0°C ನಡುವೆ ತಾಪಮಾನ ಇರಲಿದ್ದು ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ.
ಜೂನ್ 23: 28.0°C ಮತ್ತು 39.0°C ನಡುವೆ ತಾಪಮಾನ ಇರಲಿದ್ದು ಮೋಡ ಕವಿದ ವಾತಾವರಣವಿರುತ್ತದೆ.
ಎಲ್ಲೆಲ್ಲಿ ಮಳೆ?
ಕೇರಳ: ಜೂನ್ 17, 18 ಮತ್ತು 21 ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಕರಾವಳಿ ಆಂಧ್ರಪ್ರದೇಶ: ಜೂನ್ 17 ರಿಂದ 19 ರವರೆಗೆ ಭಾರೀ ಮಳೆ ಸಾಧ್ಯತೆ.
ತೆಲಂಗಾಣ: ಜೂನ್ 17 ರಂದು ಪ್ರತ್ಯೇಕವಾದ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಕರ್ನಾಟಕ: ಜೂನ್ 17, 20 ಮತ್ತು 21 ರಂದು ಭಾರೀ ಮಳೆ ಸಾಧ್ಯತೆ.
ಕರ್ನಾಟಕದಲ್ಲಿ ಮುಂದಿನ ಮೂರು ದಿನ ಮಳೆ
ಮುಂದಿನ ಮೂರು ದಿನಗಳ ಕಾಲ ಕರ್ನಾಟಕ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ 3 ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜೂನ್ 20ರವರೆಗೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಅಂತೆಯೇ ಗಂಟೆಗೆ 40 ರಿಂದ50 ಕಿ.ಮೀ ವೇಗದಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Monsoon is likely to pick up post 19th June with significant above normal rainfall likely in the core monsoon zones in Karnataka during the last 10 days of the month & 1st week of July #KarnatakaRains
— Karnataka Weather (@Bnglrweatherman) June 15, 2024
Very heavy to extremely heavy rains likely over Coastal & Malenadu regions of… pic.twitter.com/YFSb8KkkxU
ಪ್ರಮುಖವಾಗಿ ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಯಂತೆ ಭಾರೀ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಕಲಬುರಗಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಲ್ಲೂ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಭಾರತದ ಕೆಲ ರಾಜ್ಯಗಳಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ, ಉತ್ತರ ಭಾರತದ ಬಹುತೇಕ ಭಾಗಗಳಲ್ಲಿ ಬಿಸಿಲಿನ ತಾಪಕ್ಕೆ ಜನಜೀವನ ದುಸ್ತರವಾಗಿದೆ. ಅಲ್ಲಿನ ಜನರು ಮಳೆಯ ನಿರೀಕ್ಷೆಯಲ್ಲಿದ್ದಾರೆ.
ಜೂನ್ 20 ರವರೆಗೆ ಬೆಂಗಳೂರಿನಲ್ಲಿ ಮತ್ತೆ ಸಂಜೆ ಮಳೆ
ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಈಗ ಮುಂದಿನ ಕೆಲವು ದಿನ ಇದೇ ರೀತಿ ಮಳೆಯಾಗುವ ಮುನ್ಸೂಚನೆ ಇದೆ. ಇನ್ನೊಂದೆಡೆ ಬೆಂಗಳೂರಿನಲ್ಲಿ ಮಳೆಯಿಂದ ಎದುರಾಗಬಹುದಾದ ಸಮಸ್ಯೆ ಬಗ್ಗೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಇನ್ನು ೫ ದಿನಗಳಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಳ್ಳಲಿದೆ ಎನ್ನಲಾಗಿದೆ.
ಏತನ್ಮಧ್ಯೆ, ಕಳೆದ ಎರಡು ದಿನಗಳಿಂದ ಬೆಂಗಳೂರು ನಗರದಲ್ಲಿ ತಾಪಮಾನ ಗಣನೀಯವಾಗಿ ಕುಸಿದಿದ್ದು, ಅದೇ ರೀತಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಇಂದಿನಿಂದ ಜೂನ್ 20 ರವರೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಸಂಜೆಯ ನಂತರ ಬೆಂಗಳೂರಿನಲ್ಲಿ ವಾಡಿಕೆಯಂತೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications