ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಅಸ್ಸಾಂನ ಬ್ರಹ್ಮಪುತ್ರ ನದಿಯಲ್ಲಿ ದೋಣಿ ಮುಳುಗಿ 75 ಮಂದಿ ನಾಪತ್ತೆ!

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 29: ಅಸ್ಸಾಂನ ಧುಬ್ರಿ ಜಿಲ್ಲೆಯ ಬ್ರಹ್ಮಪುತ್ರ ನದಿಯಲ್ಲಿ ಸುಮಾರು 100 ಮಂದಿ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ದೋಣಿ ಮುಳುಗಿದೆ. ಈ ವೇಳೆ ಸರ್ಕಾರಿ ಅಧಿಕಾರಿಗಳು ಮತ್ತು ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಹಲವರು ನಾಪತ್ತೆಯಾಗಿದ್ದಾರೆ.

ದೋಣಿಯಲ್ಲಿ 10 ಮೋಟರ್‌ಸೈಕಲ್‌ಗಳನ್ನು ತೆಗೆದುಕೊಂಡು ಹೋಗುತ್ತಿರುವುದೇ ಅಪಘಾತಕ್ಕೆ ಕಾರಣವಾಯಿತು ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ದೋಣಿ ಮುಳುಗಡೆ ಘಟನೆ ಕುರಿತು ತಿಳಿಯುತ್ತಿದ್ದಂತೆ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿಯು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಭೋಪಾಲ್ : ಗಣೇಶ ವಿಸರ್ಜನೆ ವೇಳೆ ದೋಣಿ ಮುಳುಗಡೆ; 13 ಸಾವುಭೋಪಾಲ್ : ಗಣೇಶ ವಿಸರ್ಜನೆ ವೇಳೆ ದೋಣಿ ಮುಳುಗಡೆ; 13 ಸಾವು

ಅಸ್ಸಾಂ ಧುಬ್ರಿ ಟೌನ್‌ನಿಂದ ಸುಮಾರು 3 ಕಿಮೀ ದೂರದಲ್ಲಿರುವ ಅದಬರಿ ಎಂಬಲ್ಲಿನ ಸೇತುವೆಗೆ ದೋಣಿ ಢಿಕ್ಕಿ ಹೊಡೆದು ಮಗುಚಿ ಬಿದ್ದಿದೆ, ಇದುವರೆಗೆ 15 ಜನರನ್ನು ರಕ್ಷಿಸಲಾಗಿದೆ. ಇದೇ ದೋಣಿಯಲ್ಲಿ ಶಾಲಾ ಮಕ್ಕಳೂ ಸಹ ಇದ್ದು, ಇದುವರೆಗೂ ಯಾವುದೇ ವಿದ್ಯಾರ್ಥಿಯನ್ನು ರಕ್ಷಿಸಲಾಗಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Several Missing after Boat Carrying 75 People Capsizes in Assam’s Dhubri

ಇಬ್ಬರು ಅಧಿಕಾರಿಗಳು ಬಚಾವ್:

ಧುಬ್ರಿ ಸರ್ಕಲ್ ಆಫಿಸರ್ ಸಂಜು ದಾಸ್ ಸೇರಿದಂತೆ ಒಟ್ಟು ಮೂವರು ಅಧಿಕಾರಿಗಳು ಸಮೀಕ್ಷೆಗಾಗಿ ದೋಣಿಯಲ್ಲಿ ಸಾಗುತ್ತಿದ್ದರು. ಭೂ ದಾಖಲೆ ಅಧಿಕಾರಿ ಮತ್ತು ಕಚೇರಿ ಸಿಬ್ಬಂದಿಯು ಪೀಡಿತ ಪ್ರದೇಶವನ್ನು ಸಮೀಕ್ಷೆ ಮಾಡಲು ದೋಣಿಯಲ್ಲಿ ಪ್ರಯಾಣಿಸುತ್ತಿದ್ದು, ಈ ಪೈಕಿ ಸಂಜು ದಾಸ್ ನಾಪತ್ತೆಯಾಗಿದ್ದಾರೆ. ಉಳಿದಂತೆ ಇನ್ನಿಬ್ಬರು ಈಜಿಕೊಂಡು ದಡ ಸೇರುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

English summary
Several Missing after Boat Carrying 75 People Capsizes in Assam’s Dhubri.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X